ಆಗಸ್ಟ್ ಅಂತ್ಯಕ್ಕೆ ಸಿದ್ದರಾಮಯ್ಯ ಸಂಪುಟ ವಿಸ್ತರಣೆ?

Posted By: Gururaj
Subscribe to Oneindia Kannada

ಬೆಂಗಳೂರು, ಆ.09 : ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ವಿಸ್ತರಣೆಯತ್ತ ಗಮನ ಹರಿಸಿದ್ದಾರೆ. ಆಗಸ್ಟ್ 16ರ ನಂತರ ಸಿದ್ದರಾಮಯ್ಯ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಸಂಪುಟದಲ್ಲಿ ಮೂರು ಸ್ಥಾನಗಳು ಖಾಲಿ ಇವೆ.

ಕರ್ನಾಟಕ ಗೃಹ ಸಚಿವರಾಗಿ ರಮಾನಾಥ ರೈ?

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಲಿದ್ದಾರೆ. ಆದ್ದರಿಂದ, ಆಗಸ್ಟ್ 16ರ ನಂತರ ಭೇಟಿಗೆ ಅವಕಾಶ ಪಡೆಯಲು ಪ್ರಯತ್ನಿಸುತ್ತಿದ್ದಾರೆ.

Cabinet expansion : Siddaramaiah to meet Rahul Gandi

ಆಗಸ್ಟ್ 16ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೆಂಗಳೂರಿನ ನ್ಯಾಷನಲ್ ಕಾಲೇಜು ಆವರಣದಲ್ಲಿ ಬೃಹತ್ ಸಮಾವೇಶ ಆಯೋಜಿಸಿದೆ. ರಾಹುಲ್ ಗಾಂಧಿ ಈ ಸಮಾವೇಶ ಉದ್ದೇಶಿಸಿ ಮಾತನಾಡುವ ನಿರೀಕ್ಷೆ ಇದೆ.

ಸಂಪುಟ ವಿಸ್ತರಣೆ: ಹೊಸದುರ್ಗ ಗೋವಿಂದಪ್ಪ ರೇಸಿನಲ್ಲಿ ಮುಂದೆ!

ಸಚಿವ ಮಹದೇವಪ್ಪ ನಿಧನದಿಂದ ಒಂದು ಸ್ಥಾನ ತೆರವಾಗಿದೆ. ಎಚ್.ವೈ.ಮೇಟಿ ಮತ್ತು ಡಾ.ಜಿ.ಪರಮೇಶ್ವರ ಅವರ ರಾಜೀನಾಮೆಯಿಂದ ಎರಡು ಸ್ಥಾನಗಳು ತೆರವಾಗಿದ್ದು, ಒಟ್ಟು ಮೂರು ಸಚಿವ ಸ್ಥಾನಗಳನ್ನು ಭರ್ತಿ ಮಾಡಬೇಕಿದೆ.

Siddaramaiah plans To Reconfigure The Cabinet Again | OneIndia Kannada

ಮೂರು ಖಾತೆಗಳ ಪೈಕಿ ಪ್ರಮುಖವಾದ ಗೃಹ ಖಾತೆಗೆ ಯಾವುದೇ ಸಚಿವರು ಇಲ್ಲ. ಸದ್ಯ, ಸಿದ್ದರಾಮಯ್ಯ ಅವರೇ ಗೃಹ ಖಾತೆಯ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Karnataka Chief Minister Siddaramaiah is likely to visit New Delhi after August 16 to discuss about the much-delayed cabinet expansion. The vacancies have been created due to the death of H S Mahadeva Prasad and resignation of H Y Meti and G Parameshwara
Please Wait while comments are loading...