• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಒಂದು ವಾರದೊಳಗೆ ಸಂಪುಟ ವಿಸ್ತರಣೆ; ಸಿಎಂ ಬೊಮ್ಮಾಯಿ

|
Google Oneindia Kannada News

ನವದೆಹಲಿ, ಜುಲೈ 31: ರಾಜ್ಯದಲ್ಲಿ ಸದ್ಯ ಕೊರೊನಾ ಮೂರನೇ ಅಲೆ ಆತಂಕ ಹಾಗೂ ಪ್ರವಾಹದ ಕಾರಣವಾಗಿ, ಪರಿಸ್ಥಿರಿ ನಿರ್ವಹಣೆ ಕಾರಣದಿಂದ ಒಂದು ವಾರದ ಒಳಗೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಶುಕ್ರವಾರ ಬಸವರಾಜ ಬೊಮ್ಮಾಯಿ ತಿಳಿಸಿದರು.

   ಮಂತ್ರಿ ಸ್ಥಾನದ ಆಕಾಂಕ್ಷಿಗಳಿಗೆ ಶುರುವಾಯ್ತು ಢವಢವ | Oneindia Kannada

   ಶುಕ್ರವಾರ ಬಿಜೆಪಿ ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ್ದ ಬೊಮ್ಮಾಯಿ, ಪ್ರಧಾನಿ ಮೋದಿ ಹಾಗೂ ಪಕ್ಷದ ವರಿಷ್ಠರನ್ನು ಭೇಟಿ ಮಾಡಿದರು. ರಾಜ್ಯದ ಹಲವು ವಿಷಯಗಳ ಕುರಿತು ವರಿಷ್ಠರೊಂದಿಗೆ ಪ್ರಸ್ತಾಪ ಮಾಡಿರುವುದಾಗಿ ತಿಳಿಸಿದರು.

   ಈ ಸಂದರ್ಭ ಸಂಪುಟ ವಿಸ್ತರಣೆ ಕುರಿತು ಮಾಹಿತಿ ಹಂಚಿಕೊಂಡ ಅವರು, "ಶೀಘ್ರವೇ ಸಂಪುಟ ವಿಸ್ತರಣೆ ಮಾಡುವ ಸಂಬಂಧ ಚರ್ಚೆ ನಡೆದಿದೆ. ಸಂಪುಟದಲ್ಲಿ ಎಷ್ಟು ಜನ ಇರಬೇಕು, ಯಾರು ಸೇರಬೇಕು ಎಂಬ ಕುರಿತು ಇನ್ನೂ ಚರ್ಚೆ ನಡೆಸಿಲ್ಲ" ಎಂದರು.

   "ಈಗಿನ ಪರಿಸ್ಥಿತಿಯಲ್ಲಿ ಸಚಿವರಿಲ್ಲದೇ ನಿರ್ವಹಣೆ ಸಾಧ್ಯವಿಲ್ಲ. ಹೀಗಾಗಿ ಶೀಘ್ರವೇ ಸಂಪುಟ ವಿಸ್ತರಣೆ ಮಾಡಲಾಗುವುದು. ಇನ್ನು ಮೂರ್ನಾಲ್ಕು ದಿನಗಳಲ್ಲಿ ಮತ್ತೆ ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ" ಎಂದು ಹೇಳಿದರು.

   ದೆಹಲಿ ಭೇಟಿ ಸಂದರ್ಭ ರಾಜ್ಯದ ಕೊರೊನಾ ಪರಿಸ್ಥಿತಿ, ಪ್ರವಾಹ ಪರಿಸ್ಥಿತಿಗಳ ಕುರಿತು ಹೈಕಮಾಂಡ್ ಜೊತೆ ಚರ್ಚಿಸಿರುವುದಾಗಿ ಬೊಮ್ಮಾಯಿ ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ. ಹುಬ್ಬಳ್ಳಿ ಧಾರವಾಡದಲ್ಲಿ ಏಮ್ಸ್‌ ನಿರ್ಮಾಣ ಮಾಡುವಂತೆ ಹಾಗೂ ರಾಯಚೂರಿಗೆ ಏಮ್ಸ್ ಮಾದರಿಯ ವೈದ್ಯಕೀಯ ಸಂಸ್ಥೆ ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ. ಕಲಬುರಗಿಯ ಇಎಸ್‌ಐ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯನ್ನು ಪ್ರಾದೇಶಿಕ ಏಮ್ಸ್‌ ಮಾದರಿಯ ಸಂಸ್ಥೆಯಾಗಿ ಉನ್ನತೀಕರಿಸುವಂತೆ ಕೋರಿದ್ದಾರೆ.

   ಇದಕ್ಕೂ ಮುನ್ನ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ನೀರಾವರಿ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ. ಕೇಂದ್ರದ ಅಧಿಕ ಪ್ರಮಾಣದ ಅನುದಾನ ಒದಗಿಸುವ ನಿಟ್ಟಿನಲ್ಲಿ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಎತ್ತಿನ ಹೊಳೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳನ್ನಾಗಿ ಘೋಷಿಸುವಂತೆ ಕೋರಿದ್ದಾರೆ.

   ದಲಿತ ಕೋಟಾದಡಿ ಸುನೀಲ್ ವಲ್ಯಾಪುರೆಗೆ ಸಚಿವ ಸ್ಥಾನ ನೀಡಲು ಆಗ್ರಹ ದಲಿತ ಕೋಟಾದಡಿ ಸುನೀಲ್ ವಲ್ಯಾಪುರೆಗೆ ಸಚಿವ ಸ್ಥಾನ ನೀಡಲು ಆಗ್ರಹ

   ಮೇಕೆದಾಟು ಜಲಾಶಯ ನಿರ್ಮಾಣ ಕುರಿತ ಸಮಗ್ರ ಯೋಜನಾ ವರದಿಯನ್ನು ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಲಾಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಎದುರು ಈ ವರದಿಯನ್ನು ಅನುಮೋದಿಸಿ ಯೋಜನೆಗೆ ಆರ್ಥಿಕ ನೆರವು ನೀಡಲು ಕೋರಲಾಗಿದೆ.

   ತಮ್ಮನ್ನು ಮೊದಲು ಬಾರಿ ಭೇಟಿ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ ಅವರು, ಕರ್ನಾಟಕದ ಅಭಿವೃದ್ಧಿಗೆ ಎಲ್ಲ ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿಗಳ ಸಚಿವಾಲಯ ಮಾಹಿತಿ ಕೊಟ್ಟಿದೆ.

   ರಾಜ್ಯ ಸಚಿವ ಸಂಪುಟ ವಿಸ್ತರಿಸುವ ಸವಾಲು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಎದುರಾಗಿದೆ. ಒಂದೆಡೆ ಹೈಕಮಾಂಡ್ ಮತ್ತೊಂದೆಡೆ ರಾಜ್ಯ ಬಿಜೆಪಿಯ ಅಸಮಾಧಾನಿತ ಶಾಸಕರು, ಜೊತೆಗೆ ಮಾಜಿ ಸಿಎಂ ಯಡಿಯೂರಪ್ಪ ಇದ್ದಾರೆ. ಇವರೆಲ್ಲರ ಮಧ್ಯೆ ಸಂಪುಟ ವಿಸ್ತರಣೆಯ ಬಹುದೊಡ್ಡ ಸವಾಲು ಬಸವರಾಜ ಬೊಮ್ಮಾಯಿ ಅವರ ಎದುರಿಗಿದೆ. ಈಗಾಗಲೇ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಜೊತೆಗೆ ಹಲವು ಹಿರಿಯ ನಾಯಕರು ಪಕ್ಷದಲ್ಲಿ ಆಂತರಿಕವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂಬ ಮಾಹಿತಿ ಇದೆ.

   ಈ ಬೆಳವಣಿಗೆಳ ನಡುವೆ ಒಂದು ವಾರದ ಒಳಗೆ ಸಂಪುಟ ವಿಸ್ತರಣೆ ನಡೆಸುವುದಾಗಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

   English summary
   After meeting BJP central leaders, Chief Minister Basavaraj Bommai on Friday expressed confidence that ministerial expansion would take place within a week
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X