• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾವೈರಸ್‌: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

|
Google Oneindia Kannada News

ಬೆಂಗಳೂರು, ಜು. 09: ಅನಿಯಂತ್ರಿತ ವಲಸೆಯಿಂದಲೇ ಬೆಂಗಳೂರಿನಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಿಗುತ್ತಿಲ್ಲ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಹೀಗಾಗಿ ಇಂದು ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ಅದರೊಂದಿಗೆ ಹಲವು ಮಹತ್ವದ ನಿರ್ಣಯಗಳನ್ನು ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗುತ್ತಿದೆ.

Recommended Video

   Reimagining the Future of Internet-Enabled Mobility Services in Bengaluru by Rajeev Gowda Part - 2

   ರಾಜ್ಯ ಸರ್ಕಾರ ಆಪತ್ಕಾಲೀನ ನಿಧಿಯನ್ನು 50 ಕೋಟಿ ರೂ ಗಳಿಂದ 500 ಕೋಟಿ ರೂ.ಗಳಿಗೆ ಹೆಚ್ಚಳ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ರಾಜೀನಾಮೆ ನೀಡಿ ಪ್ರತಿಭಟನೆಗೆ ಮುಂದಾಗಿದ್ದ ಗುತ್ತಿಗೆ ವೈದ್ಯರ ಖಾಯಮಾತಿಗೆ ಷರತ್ತು ಬದ್ದ ಒಪ್ಪಿಗೆಯನ್ನು ನೀಡುವ ಮೂಲಕ, 508 ಗುತ್ತಿಗೆ ವೈದ್ಯರ ನೇಮಕಾತಿಗೆ ಸಂಪುಟ ಅನುಮೋದನೆ ನೀಡುವ ಸಾಧ್ಯತೆ ಇದೆ. ಆ ಮೂಲಕ ಹಲವಾರು ದಿನಗಳಿಂದ ನೆನೆಗುದಿಗೆ ಬಿದ್ದದ್ದ ಎನ್‌ಎಚ್ಎಂ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆ ಅಡಿ ಕೆಲಸ ನಿರ್ವಹಿಸುತ್ತಿರುವ ವೈದ್ಯರ ಬೇಡಿಕೆಗೆ ಸರ್ಕಾರ ಅನುಮೋದನೆ ನೀಡಲಿದೆ ಎನ್ನಲಾಗಿದೆ.

   ಬೆಳಗಾವಿ: 3 ತಿಂಗಳಿಗೊಮ್ಮೆ ಸುವರ್ಣಸೌಧದಲ್ಲಿ ಕ್ಯಾಬಿನೆಟ್ ಸಭೆ ನಡೆಸಲು ಆಗ್ರಹಬೆಳಗಾವಿ: 3 ತಿಂಗಳಿಗೊಮ್ಮೆ ಸುವರ್ಣಸೌಧದಲ್ಲಿ ಕ್ಯಾಬಿನೆಟ್ ಸಭೆ ನಡೆಸಲು ಆಗ್ರಹ

   ಆ್ಯಂಬುಲೆನ್ಸ್ ಖರೀದಿ

   ಆ್ಯಂಬುಲೆನ್ಸ್ ಖರೀದಿ

   ಕೋವಿಡ್ 19 ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ತುರ್ತು ಕ್ರಮಗಳು ಮತ್ತು ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಕೋವಿಡ್ ಕೇರ್ ಸೆಂಟರ್, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು. ಸೋಂಕಿತರನ್ನು ಆಸ್ಪತ್ರೆಗಳಿಗೆ ಸಾಗಾಣಿಕೆ ಮಾಡಲು ಅಗತ್ಯ 500ಕ್ಕೂ ಹೆಚ್ಚು ಆ್ಯಂಬುಲೆನ್ಸ್ ಖರೀದಿ, ವೈದ್ಯರು, ನರ್ಸ್‌ಗಳು, ಅರೆ ವೈದ್ಯಕೀಯ ಸಿಬ್ಬಂದಿ ನೇರ ನೇಮಕಾತಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡುವ ಸಾಧ್ಯತೆ ಇದೆ.

   ನೂತನ ಕೈಗಾರಿಕಾ ನೀತಿ

   ನೂತನ ಕೈಗಾರಿಕಾ ನೀತಿ

   ರಾಜ್ಯದಲ್ಲಿ ಬಂಡವಾಳ ಹೂಡಲು ಅನುಕೂಲವಾಗುವಂತೆ ಮಧ್ಯವರ್ತಿಯಾಗಿ ಹಾಗೂ ಜ್ಞಾನಾಧಾರಿತ ಸಹಯೋಗಕ್ಕಾಗಿ ಖಾಸಗಿ ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್ ಪ್ರೈವೇಟ್ ಲಿಮಿಟೆಡ್ ಏಜೆನ್ಸಿಯನ್ನು 12 ತಿಂಗಳು ಮುಂದುವರೆಸಲು ಸಂಪುಟ ಗ್ರೀಸ್ ಸಿಗ್ನಲ್ ನೀಡಲಿದೆ. ಅಂತೆಯೇ 2020-25ನೇ ಸಾಲಿನ ನೂತನ ಕೈಗಾರಿಕಾ ನೀತಿಗೂ ಸಚಿವ ಸಂಪುಟ ಸಭೆ ಸಮ್ಮತಿ ನೀಡಲಿದೆ. ಹಿಂದಿನ ಸರ್ಕಾ ರದ ಕೈಗಾರಿಕಾ ನೀತಿ ಹಾಗೂ ದಕ್ಷಿಣ ಭಾರತದ ಹಲವು ರಾಜ್ಯಗಳ ಕೈಗಾರಿಕಾ ನೀತಿಗಳನ್ನು, ಸ್ಟಾರ್ಟ್‌ಪ್ ಆ್ಯಪ್‌ಗಳನ್ನು, ಐಟಿ ಬಿಟಿ, ಎರಡನೆ ಮತ್ತು ಮೂರನೇ ಹಂತದ ನಗರಗಳ ಲ್ಲಿಯೂ ಕೈಗಾರಿಕಾ ಆರಂಭಿಸಲು ಅವಕಾಶ ಕಲ್ಪಿಸುವುದು ನೂತನ ಕೈಗಾರಿಕಾ ನೀತಿಯ ಭಾಗವಾಗಿರಲಿದೆ.

   ಲಾಕ್ ಆಗುತ್ತಾ ಕರ್ನಾಟಕ; ಸರ್ವಪಕ್ಷ ಸಭೆಯಲ್ಲಿ ಶಾಸಕರು ಹೇಳಿದ್ದೇನು?ಲಾಕ್ ಆಗುತ್ತಾ ಕರ್ನಾಟಕ; ಸರ್ವಪಕ್ಷ ಸಭೆಯಲ್ಲಿ ಶಾಸಕರು ಹೇಳಿದ್ದೇನು?

   ಮೇಡ್ ಇನ್ ಇಂಡಿಯಾ

   ಮೇಡ್ ಇನ್ ಇಂಡಿಯಾ

   ಮೇಡ್ ಇನ್ ಇಂಡಿಯಾಗೆ ಒತ್ತು ನೀಡಿ ಚೀನಾದಿಂದ ಬಂಡವಾಳ ವಾಪಸ್ ತೆಗೆಯುತ್ತಿರುವ ಕಂಪನಿಗಳಿಗೆ ರಾಜ್ಯದಲ್ಲಿ ಒತ್ತು ನೀಡುವುದರ ಜೊತೆಗೆ ಅಗತ್ಯ ಸೌಲಭ್ಯ, ರಿಯಾಯಿತಿಗಳನ್ನು ನೀಡುವ ಮಹತ್ವದ ಕೈಗಾರಿಕಾ ನೀತಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಲಿದೆ ಎನ್ನಲಾಗಿದೆ.

   184.37 ಕೋಟಿ ರೂ ಮೊತ್ತದಲ್ಲಿ ಇ ಪ್ರೊಕ್ಯೂರ್ಮೆಂಟ್ 2.0 ಯೋಜನೆಯನ್ನು ‘ಅಭಿವೃದ್ದಿ ಮತ್ತು ಅನುಷ್ಠಾನ'ಕ್ಕೆ ತರಲು ಸಾರ್ವಜ ನಿಕ,ಸರ್ಕಾರಿ ಸಹಭಾಗಿತ್ವ ದಲ್ಲಿ(ಪಿಪಿಪಿ) ಮಾದರಿ ರೂಪಿಸಲು ಸಂಪುಟ ಸಭೆ ಒಪ್ಪಿಗೆ ನೀಡಲಿದೆ.

   ಕರ್ನಾಟಕ ವಿದ್ಯುತ್ ಕಾರ್ಖಾನೆ ಮತ್ತು ಮೂಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಗಳ ಆಡಳಿತಾತ್ಮಕ ನಿಯಂತ್ರಣ ಮತ್ತು ಮೇಲ್ವಿಚಾ ರಣೆಯನ್ನು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಇಂಧನ ಇಲಾಖೆಗೆ ಹಸ್ತಾಂತರಿಸಲು ಸಚಿವ ಸಂಪುಟ ತೀರ್ಮಾನ ಮಾಡುವ ಸಾಧ್ಯತೆ ಇದೆ.

   ಲೆಕ್ಕಪತ್ರ ಸಮಿತಿಯ ಆರೋಪ

   ಲೆಕ್ಕಪತ್ರ ಸಮಿತಿಯ ಆರೋಪ

   ಕೊರೋನಾ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕಲ್ಯಾಣ ಇಲಾಖೆಯು ಈಗಾಗಲೇ ಖರೀದಿಸಿರುವ ಉಪಕರಣಗಳು, ವೈದ್ಯಕೀಯ ಸಲಕ ರಣೆ, ಔಷಧಕ್ಕೆ ಘಟನೋತ್ತರ ಅನುಮೋದನೆ ನೀಡಲಿದೆ.ಕೊರೋನಾ ನಿಯಂತ್ರಣಕ್ಕಾಗಿ ಪಿಪಿಇ, ಮಾಸ್ಕ್, ಸ್ಯಾನಿಟೈಸರ್ ಖರೀದಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ವಿಪಕ್ಷ ನಾಯಕರು ಹಾಗೂ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಆರೋಪದ ಕುರಿತು ಸಚಿವ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆಯುವ ಸಾಧ್ಯತೆಯಿದೆ.

   ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಯಿಂದ ಬಿಡುಗಡೆಯಾಗಿರುವ ಅನುದಾನವನ್ನು ಜಿಲ್ಲಾ, ತಾಲೂಕು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೈ ಲೆವೆಲ್ ಆಕ್ಸಿಜನ್ ಪೈಪ್ ಲೈನ್ ಅಳವಡಿಸುವ ಯೋಜನೆ ಘಟನೋತ್ತರ ಅನುಮೋದನೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

   English summary
   A imoprtaint state cabinet meeting will held today as the coronavirus virus is increasing day by day in state. Meeting will be held at the Cabinet Hall at 11 am and It is possible to make significant conclusions about statewide Covid infection control..
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X