7th Pay Commission: ಇಂದು ಮಹತ್ವದ ಸಚಿವ ಸಂಪುಟ ಸಭೆ; ಸರ್ಕಾರಿ ನೌಕರಿಗೆ ಸಿಗುತ್ತಾ ಗುಡ್‌ನ್ಯೂಸ್?
ಬೆಂಗಳೂರು, ಜುಲೈ 15: 7ನೇ ವೇತನ ಆಯೋಗದ ವರದಿ ಜಾರಿ ಬಗ್ಗೆ ಇಂದು (ಜುಲೈ 15) ನಡೆಯಲಿರುವ ರಾಜ್ಯ ಸಚಿವ ಸಂಪುಟದಲ್ಲಿ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಕರ್ನಾಟಕದ ಸರ್ಕಾರಿ ನೌಕರರು 7 ನೇ ವೇತನ ಆಯೋಗ ವರದಿ ಸೇರಿದಂತೆ ಹಲವು ಬೇಡಿಕೆಗಳ ಕುರಿತು ಸರ್ಕಾರಿ ನೌಕರಿಗೆ ಗುಡ್‌ನ್ಯೂಸ್ ಸಿಗಲಿದೆ.
ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಸಂಪುಟ ಸಭೆಯಲ್ಲಿ , 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಸರ್ಕಾರ ಮುಂದಾಗಿದೆ. ಕಳೆದ ಸಚಿವ ಸಂಪುಟ ಸಭೆಯಲ್ಲಿ 7 ನೇ ವೇತನ ಆಯೋಗ ವರದಿ ಜಾರಿ ಕುರಿತು ಸರ್ಕಾರ ಯಾವುದೇ ನಿರ್ಣಯಗಳನ್ನ ತೆಗೆದುಕೊಳ್ಳದ ಹಿನ್ನೆಲೆ ಸರ್ಕಾರಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದು, ಇದೀಗ ಸರ್ಕಾರ ಎಚ್ಚೇತ್ತುಕೊಂಡಿದ್ದು, 7 ನೇ ವೇತನ ಆಯೋಗ ವರದಿ ಕುರಿತು ಚರ್ಚೆ ನಡೆಸಲಿದೆ.

ರಾಜ್ಯ ಸರ್ಕಾರ ನೌಕರರು ಕಾತುರದಿಂದ ನಿರೀಕ್ಷಿಸುತ್ತಿರುವ 7ನೇ ವೇತನ ಆಯೋಗದ ವರದಿ ಶಿಫಾರಸುಗಳ ಅನುಷ್ಠಾನ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. 7ನೇ ವೇತನ ಆಯೋಗವು ಶೇ 27.5 ವೇತನ ಪರಿಷ್ಕರಣೆಗೆ ಶಿಫಾರಸು ಮಾಡಿದೆ. ಸರ್ಕಾರ ತೀರ್ಮಾನವನ್ನು ನೌಕರರು ಎದುರು ನೋಡುತ್ತಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯ ಶಿಫಾರಸುಗಳ ಜಾರಿ ಸಂಬಂಧ ಸೋಮವಾರ ನಡೆಯುವ ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯ ಕೈಗೊಳ್ಳುವ ನಿರೀಕ್ಷೆಯಿದೆ.
ಈ ಹಿಂದೆ ನಡೆದ ಸಚಿವ ಸಂಪುಟ ಸಭೆಯಲ್ಲಿ 7 ನೇ ವೇತನ ಆಯೋಗ ವರದಿ ಜಾರಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಕೆಲ ಸಚಿವರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಯಾವುದೇ ನಿರ್ಧಾರವನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆಗೆದುಕೊಂಡಿರಲಿಲ್ಲ. ಅಲ್ಲೇ ಸಂಪನ್ಮೂಲ ಕೊರತೆ ಹಿನ್ನೆಲೆಯಲ್ಲಿ ಹಣಕಾಸು ಇಲಾಖೆ ಸಲಹೆ ಆಧರಿಸಿ ವೇತನ ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆ ತೀರ್ಮಾನವನ್ನು ರಾಜ್ಯ ಸರ್ಕಾರ ಮುಂದೂಡುತ್ತಾ ಬಂದಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಮುಗಿದ ಬಳಿಕ ವರದಿ ಜಾರಿ ಕುರಿತು ಸಾಕಷ್ಟು ಬಾರೀ ಭರವಸೆಯನ್ನ ನೀಡಿದ್ದು, ಸಚಿವ ಸಂಪುಟ ಸಭೆಯಲ್ಲಿ ಯಾವುದೇ ನಿರ್ಣಯವನ್ನ ತೆಗೆದುಕೊಳ್ಳದ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಸರ್ಕಾರಿ ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಸರ್ಕಾರಿ ನೌಕರರ ಬೇಡಿಕೆಗಾಗಿ ಜುಲೈ 29 ರಂದು ಅನಿರ್ದಿಷ್ಠಾವಧಿ ಮುಷ್ಕರ ಆರಂಭಿಸುವ ಎಚ್ಚರಿಕೆಯನ್ನ ಸರ್ಕಾರಿ ನೌಕರರ ಸಂಘಟನೆ ನೀಡಿದ್ದು, ಈ ಕುರಿತು ಕಳೆದ ಶುಕ್ರವಾರ ಮುಖ್ಯ ಕಾರ್ಯದರ್ಶಿಗಳಿಗೆ ಮುಷ್ಕರ ನೋಟಿಸ್ ತಲುಪಿಸಿದ್ದರು.
7ನೇ ವೇತನ ಆಯೋಗವು ಶೇ 27.5 ವೇತನ ಪರಿಷ್ಕರಣೆಗೆ ಶಿಫಾರಸು ಮಾಡಿತ್ತು. ಮಾರ್ಚ್ 2023 ರಿಂದಲೇ ಶೇ.17 ಮಧ್ಯಂತರ ಪರಿಹಾರ ನೀಡಲಾಗಿದ್ದು, ಇನ್ನು ಗರಿಷ್ಠ ಶೇ 10.5 ವೇತನ ಹೆಚ್ಚಳ ಆಗಬೇಕಿದ್ದು, ಇದರಿಂದ ಬೊಕ್ಕಸಕ್ಕೆ ಸುಮಾರು 7,500 ಕೋಟಿ ರೂ. ಹೆಚ್ಚುವರಿ ಹೊರೆ ಬೀಳುವ ನಿರೀಕ್ಷೆಯಿದೆ.
ಏಳನೇ ವೇತನ ಆಯೋಗದ ವರದಿ ಯಥಾವತ್ತಾಗಿ ಜಾರಿಗೊಳಿಸುವುದು, ಎನ್‌ಪಿಎಸ್ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಮರುಜಾರಿಗೊಳಿಸುವುದು, ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ನೌಕರರ ಸಂಘವು ರಾಜ್ಯದ ವಿವಿಧೆಡೆ ಜಿಲ್ಲಾಧಿಕಾರಿ, ತಹಶೀಲ್ದಾರ್‌ಗಳ ಕಡೆಯಿಂದ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.












Click it and Unblock the Notifications