Cabinet Reshuffle: ಬಜೆಟ್‌ ಬಳಿಕ ಸಚಿವ ಸಂಪುಟ ಪುನಾರಚನೆ: ಯಾರಿಗೆ ಸಿಗಲಿದೆ ಚಾನ್ಸ್‌? ಇಲ್ಲಿದೆ ಆಕಾಂಕ್ಷಿಗಳ ಪಟ್ಟಿ

ಬೆಂಗಳೂರು, ಫೆಬ್ರವರಿ 28: ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಜೊತೆಗೆ ಸಚಿವ ಸಂಪುಟ ಪುನರಾಚನೆ ಕುರಿತು ಬಹುದಿನಗಳಿಂದ ಚರ್ಚೆ ನಡೆಯುತ್ತಿದೆ. ಈಗಾಗಲೇ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಚರ್ಚೆಗೆ ಕಾಂಗ್ರೆಸ್‌ ಹೈಕಮಾಂಡ್‌ ಬ್ರೇಕ್‌ ಹಾಕಿದ್ದು, ರಾಜಕೀಯದ ಜಂಗೀಕುಸ್ತಿ ಮಧ್ಯೆ ರಾಜ್ಯದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ಪುನಾರಚನೆ ವಿಚಾರ ಮುನ್ನೆಲೆಗೆ ಬಂದಿದೆ.

ರಾಜ್ಯ ಬಜೆಟ್‌ ಅಧಿವೇಶನದ ಬಳಿಕ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಶಾಸಕರು ಬಿಗಿ ಪಟ್ಟು ಹಿಡಿದಿದ್ದಾರೆ. ತಮ್ಮನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಅವರ ಬಳಿ ದುಂಬಾಲು ಬಿದ್ದಿದ್ದಾರೆ. ಈಗಾಗಲೇ ಸಚಿವ ಸಂಪುಟ ಪುನರಾಚನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಹೈಕಮಾಂಡ್‌ ನಾಯಕರ ಜೊತೆಗೆ ಚರ್ಚೆ ನಡೆಸಿದ್ದು,ಬಜೆಟ್‌ ಬಳಿಕ ಸಚಿವ ಸಂಪುಟ ಪುನರ್‌ ರಚನೆಯಾಗಲಿದೆ ಎಂದು ತಿಳಿದು ಬಂದಿದೆ.

Cabinet reshuffle of siddaramaiah government list of strong aspirants

ರಾಜ್ಯದಲ್ಲಿ ಉಪಚುನಾವಣೆಯ ಫಲಿತಾಂಶ ಪ್ರಕಟಗೊಂಡ ಬಳಿಕ ಸಿದ್ದರಾಮಯ್ಯ ಸಂಪುಟ ಪುನರಾಚನೆ ಕುರಿತು ಹಲವು ಊಹಾಪೋಗಗಳು ಕೇಳಿ ಬಂದಿತ್ತು. ಅಲ್ಲದೇ ರಾಜ್ಯ ಸರ್ಕಾರದ ವಿರುದ್ಧ ಸಾಲು ಸಾಲು ಆರೋಪಗಳಿಂದ ಕಾಂಗ್ರೆಸ್‌ ಹೈಕಮಾಂಡ್‌ ರೋಸಿ ಹೋಗಿದೆ. ಹೀಗಾಗಿ ಸಚಿವ ಸಂಪುಟದಲ್ಲಿನ ಸಚಿವರ ಕಾರ್ಯವೈಖರಿಯ ವರದಿ ಈಗಾಗಲೇ ಹೈಕಮಾಂಡ್‌ ನಾಯಕರ ಮುಂದಿದೆ. ಸಿದ್ದರಾಮಯ್ಯ ಸಂಪುಟದಲ್ಲಿ ಖಾತೆ ವಹಿಸಿಕೊಂಡ ದಿನದಿಂದ ಯಾರು? ಹೇಗೆ ಕಾರ್ಯನಿರ್ವಹಿಸುತ್ತಿದ್ದಾರೆ. ಯಾರು ಕೆಲಸವನ್ನು ಸರಿಯಾಗಿ ನಿಭಾಯಿಸಿಲ್ಲ. ಆಟಕ್ಕುಂಟು ಲೆಕ್ಕಕ್ಕೇ ಇಲ್ಲ ಎಂಬಂತೆ ಇರುವ ಸಚಿವರನ್ನು ಸಂಪುಟದಿಂದ ತೆಗೆಯಲು ಹೈಕಮಾಂಡ್‌ ನಿರ್ಧರಿಸಿದೆ ಎನ್ನಲಾಗಿದೆ.ಸಚಿವರ ಕಾರ್ಯವೈಖರಿಯನ್ನ ಗಮನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿನ ಬರೋಬ್ಬರಿ ಹತ್ತು ಸಚಿವರನ್ನ ಸಂಪುಟದಿಂದ ಕೊಕ್‌ ನೀಡಲು ಹೈಕಮಾಂಡ್‌ ಮುಂದಾಗಿದೆ ಎಂದು ತಿಳಿದು ಬಂದಿದೆ.

ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ವರ್ಷಗಳನ್ನು ಪೂರ್ಣಗೊಳಿಸಿದೆ. ಇದೇ ಮಾರ್ಚ್ 7ರಂದು ಬಜೆಟ್ ಮಂಡನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ಧತೆಯನ್ನು ನಡೆಸಿದ್ದಾರೆ. 2025-26ನೇ ಸಾಲಿನ ರಾಜ್ಯ ಬಜೆಟ್ ಬಳಿಕ ಸಂಪುಟ ಪುನಾರಚನೆ ಮಾಡುವಂತೆ ಹಲವು ಹಿರಿಯ ಕಾಂಗ್ರೆಸ್ ಶಾಸಕರು ಒತ್ತಡ ಹಾಕಿದ್ದಾರೆ. ಅಲ್ಲದೇ ಹಲವು ನಾಯಕರು ನಾನು ಸಹ ಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಬಹಿರಂಗವಾಗಿ ಬೇಡಿಕೆ ಇಟ್ಟಿದ್ದಾರೆ.

ಸಂಪುಟ ಪುನಾರಚನೆ, ವಿಸ್ತರಣೆ ಕುರಿತಂತೆ ರಾಹುಲ್ ಗಾಂಧಿ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ಮಾಡಿಲ್ಲ. ನಾಗೇಂದ್ರ ಅವರು ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಗರಣದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ನಾಗೇಂದ್ರ ಅವರಿಗೆ ಕ್ಲೀನ್ ಚಿಟ್ ನೀಡಿರುವುದರಿಂದ, ಮಾಜಿ ಸಚಿವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಇನ್ನೂ ಸಚಿವ ಸ್ಥಾನ ನೀಡಲು ಶಾಸಕರಾದ ಶಿವಲಿಂಗೇಗೌಡ, ಎಂ.ಕೃಷ್ಣಪ್ಪ, ಅಜಯ್ ಸಿಂಗ್, ಲಕ್ಷ್ಮಣ ಸವದಿ, ನರೇಂದ್ರ ಸ್ವಾಮಿ ಸೇರಿದಂತೆ ಹಲವು ಆಕಾಂಕ್ಷಿಗಳು ಒತ್ತಾಯಿಸುತ್ತಿದ್ದಾರೆ. ಇನ್ನು ಕೆಲ ಶಾಸಕರು ಬಹಿರಂಗವಾಗಿಯೇ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ವಿಧಾನ ಪರಿಷತ್‌ ಸದಸ್ಯರಾದ ಬಿ ಕೆ ಹರಿಪ್ರಸಾದ್‌ ಅವರಿಗೂ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಸಚಿವ ಸ್ಥಾನದ ಆಕಾಂಕ್ಷಿಗಳು ಪ್ರಾಂತ್ಯ, ಜಾತಿವಾರು ವಿಭಾಗದಲ್ಲಿ ಅವಕಾಶ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+