ಗುಡ್ ನ್ಯೂಸ್: ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ: ಮಹತ್ವದ ಮಾಹಿತಿ ಇಲ್ಲಿದೆ
ಬೆಂಗಳೂರು: ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಬಗ್ಗೆ ಕರ್ನಾಟಕ ರಾಜ್ಯ ಸಚಿವ ಸಂಪುಟದಲ್ಲಿ ಚರ್ಚಿಸಿ ಕನ್ನಡಪರವಾದ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಬೇಕು. ರಾಜ್ಯದಲ್ಲಿ ಕನ್ನಡದ ವಾತಾವರಣ ನಿರ್ಮಿಸಬೇಕು. ಕರ್ನಾಟಕಕ್ಕೆ ಅನ್ಯಾಯವಾದಾಗ ಒಗ್ಗಟ್ಟಿನಿಂದ ಹೊರಡಬೇಕು. ಕನ್ನಡಿಗರು ಯಾವುದಕ್ಕೂ ಕಡಿಮೆಯಿಲ್ಲ. ಕನ್ನಡ ಭಾಷೆ, ನೆಲ, ಜಲ, ಗಡಿಗಳ ರಕ್ಷಣೆಗೆ ಪಣ ತೊಡೋಣ ಎಂದರು.
ಕನ್ನಡ ಚಳುವಳಿಗಾರರ ಸಮಿತಿ ವತಿಯಿಂದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ ಜನರಾಜ್ಯೋತ್ಸವ -2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕರ್ನಾಟಕದಲ್ಲಿ ಕನ್ನಡದ ವಾತಾವರಣವನ್ನು ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಪ್ರತಿ ಹಳ್ಳಿಯಲ್ಲಿಯೂ ಕನ್ನಡ ಶಾಲೆ ಇರಬೇಕು ಎಂದು ಬರಗೂರು ರಾಮಚಂದ್ರಪ್ಪ ಅವರು ಸಲಹೆ ನೀಡಿದ್ದು, ಗ್ರಾಮಗಳಲ್ಲಿ ಕನ್ನಡ ಶಾಲೆ ಇರಲೇಬೇಕು. ನಾನೂ ಕೂಡ ಕನ್ನಡ ಶಾಲೆ, ಕನ್ನಡ ಮಾಧ್ಯಮದ ಪರವಾಗಿ ಇರುವವನು ಎಂದರು. ಇತ್ತೀಚೆಗೆ ಆಂಗ್ಲ ಭಾಷೆಯ ವ್ಯಾಮೋಹ ಹೆಚ್ಚುತ್ತಿದೆ. ಇದಕ್ಕೆ ಪೋಷಕರ ಸಹಾಯವೂ ಅಗತ್ಯ. ಪೋಷಕರ ಸಹಾಯವಿಲ್ಲದೆ ಹೋದರೆ ಕನ್ನಡ ಶಾಲೆಗಳು ಉಳಿದು, ಬೆಳೆಯುವುದು ಕಷ್ಟ ಎಂದರು.

ಕಲ್ಯಾಣ ಕರ್ನಾಟಕ ಎಂದು ನಾಮಕರಣವಾಗಿದ್ದು, 371ಜೆ ಕಾಯ್ದೆಯಾಗಿದ್ದು ಸೋನಿಯಾ ಗಾಂಧಿಯವರ ನಾಯಕತ್ವದಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ. ಕಲ್ಯಾಣ ಕರ್ನಾಟಕ ದಲ್ಲಿ 70%ಮೀಸಲಾತಿ ಹಾಗೂ ರಾಜ್ಯದಲ್ಲಿ 8% ಮೀಸಲಾತಿ ನೀಡುವ ಶಿಫಾರಸ್ಸನ್ನು ಯಥಾವತ್ತು ಜಾರಿ ಮಾಡಲಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ವರ್ಷದಲ್ಲಿ 3000 ಕೋಟಿ ಹಾಗೂ ಈಗ 5000 ಕೋಟಿ ಅನುದಾನವನ್ನು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನೀಡಲಾಗಿದೆ. ಆರೋಗ್ಯ ಮತ್ತು ಶಿಕ್ಷಣದಲ್ಲಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕದಲ್ಲಿ ಈ ಬಗ್ಗೆ ಹೆಚ್ಚಿನ ಒತ್ತು ನೀಡಲಾಗಿದೆ. ಹತ್ತಾರು ವರ್ಷಗಳಲ್ಲಿ ಪ್ರಾದೇಶಿಕ ತಾರತಮ್ಯ ನಿವಾರಣೆಯಾಗಲಿದೆ ಎಂಬ ನಂಬಿಕೆ ನಮಗಿದೆ. ಅನುದಾನ ಸೂಕ್ತ ರೀತಿಯಲ್ಲಿ ಬಳಕೆಯಾಗಬೇಕು ಎಂದರು.
ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ನಮ್ಮ ಸರ್ಕಾರ ರಾಜಿ ಮಾಡಿಕೊಳ್ಳುವುದಿಲ್ಲ ಎಂದರು. ಕನ್ನಡದ ವಿಷಯದಲ್ಲಿ ನಾವು ಸದಾ ಮುಂಚೂಣಿಯಲ್ಲಿರುತ್ತೇವೆ ಎಂದರು. ಕನ್ನಡದ ಪರಧ್ವನಿ ಎತ್ತುವ ಕೆಲಸವನ್ನು ಮಾಡುತ್ತೇನೆ ಎಂದ ಮುಖ್ಯಮಂತ್ರಿಗಳು ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರದಿಂದ ಪರಿಸರ ತೀರುವಳಿ ಸಿಕ್ಕಿದ ಕೂಡಲೇ ಜಾರಿ ಮಾಡಲಾಗುವುದು ಎಂದರು. ಕೇಂದ್ರ ಸರ್ಕಾರ ಕೃಷ್ಣಾ ಮೂರನೇ ಹಂತ ಯೋಜನೆಗೆ ಗೆಜೆಟ್ ಅಧಿಸೂಚನೆ ಹೊರಡಿಸಿಲ್ಲ . ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ಕನ್ನಡಿಗರು ಖಂಡಿಸಬೇಕು ಎಂದರು.
ಕನ್ನಡಿಗರು ಒಂದು ವರ್ಷಕ್ಕೆ ನಾಲ್ಕೂವರೆ ಲಕ್ಷ ಕೋಟಿ ತೆರಿಗೆ ಕಟ್ಟುತ್ತೇವೆ. ಒಂದು ರೂಪಾಯಿ ಕೊಟ್ಟರೆ ಕೇಂದ್ರದಿಂದ ನಮಗೆ ಬರುವುದು 14 ಪೈಸೆ ಮಾತ್ರ. ದೇಶದಲ್ಲಿಯೇ ಕರ್ನಾಟಕ ತಲಾ ಆದಾಯದಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ನಮ್ಮ ಸರ್ಕಾರದ ಅನೇಕ ಕಾರ್ಯಕ್ರಮಗಳ ಮೂಲಕ ಈ ಸ್ಥಾನಕ್ಕೆ ಬಂದಿದ್ದೇವೆ. ರಾಜ್ಯ ಸರ್ಕಾರ ಹಿಂದಿಯನ್ನು ವಿರೋಧಿಸುವುದಿಲ್ಲ. ಆದರೆ ಹಿಂದಿ ನಮ್ಮ ರಾಷ್ಟ್ರ ಭಾಷೆ ಅಲ್ಲ ಎಂದರು. ಕನ್ನಡವೇ ಸಾರ್ವಭೌವ ಭಾಷೆ. 1956 ನಲ್ಲಿ ಭಾಷಾವಾರು ಪ್ರಾಂತ್ಯ ವಿಂಗಡಣೆ ಆಗಿದೆ. 1973 ರಲ್ಲಿ ದೇವರಾಜ ಅರಸು ಅವರ ಮುಖ್ಯಮಂತ್ರಿ ಆಗಿದ್ದಾಗ ಕರ್ನಾಟಕ ಎಂದು ನಾಮಕರಣವಾಯಿತು ಎಂದರು. ಇದಾಗಿ 50 ವರ್ಷಗಳಾದರೂ ಬಿಜೆಪಿ ಸರ್ಕಾರ ಇದರ ಆಚರಣೆ ಮಾಡಲಿಲ್ಲ. ನಮ್ಮ ಸರ್ಕಾರ ಇದನ್ನು ಇಡೀ ರಾಜ್ಯದಲ್ಲಿ ಆಚರಣೆ ಮಾಡಿತು ಎಂದರು. ಇದರ ಪ್ರಯುಕ್ತ ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ದೇವಿಯ ಪ್ರತಿಮೆ ಸ್ಥಾಪನೆ ಮಾಡಲಾಗಿದೆ ಎಂದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election












Click it and Unblock the Notifications