ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗ್ರಾಮೀಣ ಪ್ರದೇಶದಲ್ಲೂ ಕೇಬಲ್ ಡಿಜಿಟೈಜೇಶನ್ ಕಡ್ಡಾಯ

By Mahesh
|
Google Oneindia Kannada News

ಕೊಪ್ಪಳ ಆಗಸ್ಟ್ 01: ಕೊಪ್ಪಳ ಜಿಲ್ಲೆ ಎಲ್ಲ ಗ್ರಾಮೀಣ ಪ್ರದೇಶಗಳಲ್ಲೂ ಡಿಸೆಂಬರ್ 31 ರೊಳಗಾಗಿ ಸೆಟ್‍ಟಾಪ್ ಬಾಕ್ಸ್ ಕಡ್ಡಾಯವಾಗಿ ಅಳವಡಿಸಿಕೊಳ್ಳಲೇಬೇಕು ಎಂದು ಕೊಪ್ಪಳ ಅಪರ ಜಿಲ್ಲಾಧಿಕಾರಿ ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ ಅವರು ಸೂಚನೆ ನೀಡಿದ್ದಾರೆ.

ಜಿಲ್ಲೆಯ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಈಗಾಗಲೆ ಸೆಟ್‍ಟಾಪ್ ಬಾಕ್ಸ್ ಅಳವಡಿಕೆ ಮುಕ್ತಾಯ ಹಂತದಲ್ಲಿದೆ. ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಆದೇಶದನ್ವಯ ಇದೇ ಡಿ. 31 ರ ನಂತರ ಅನಲಾಗ್ ಸಿಸ್ಟಂ ಕೇಬಲ್ ಪ್ರಸಾರ ಸಂಪೂರ್ಣ ಸ್ಥಗಿತಗೊಳ್ಳಲಿದ್ದು, ಜಿಲ್ಲೆಯ ಎಲ್ಲ ಗ್ರಾಮೀಣ ಪ್ರದೇಶಗಳ ಕೇಬಲ್ ಟಿ.ವಿ. ಗ್ರಾಹಕರು ಡಿಸೆಂಬರ್ 31 ರೊಳಗಾಗಿ ಸೆಟ್‍ಟಾಪ್ ಬಾಕ್ಸ್ ಅಳವಡಿಸಿಕೊಳ್ಳಲೇಬೇಕಿದೆ.

ಯಾವುದೇ ಕಾರಣಕ್ಕೂ ಅವಧಿ ವಿಸ್ತರಣೆ ಮಾಡುವ ಅವಕಾಶವಿಲ್ಲ ಎಂದು ಸರ್ಕಾರದ ಕಂದಾಯ ಇಲಾಖೆ ಕಾರ್ಯದರ್ಶಿಗಳು ಈಗಾಗಲೆ ಸ್ಪಷ್ಟಪಡಿಸಿದ್ದಾರೆ.

ಸೆಟ್‍ಟಾಪ್ ಬಾಕ್ಸ್ ಅಳವಡಿಸಿಕೊಳ್ಳಲು ಯಾವುದೇ ಕಾರಣಕ್ಕೂ ಅವಧಿ ವಿಸ್ತರಿಸಲು ಅವಕಾಶವಿಲ್ಲ ಎಂದು ರಾಜ್ಯ ಸರ್ಕಾರದ ಕಾರ್ಯದರ್ಶಿಗಳು ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.

Cable Digitisation Set up Box is compulsory in rural areas : Koppal Assistant DC

ಡಿ. 31 ರ ನಂತರ ಸದ್ಯ ಇರುವ ಅನಲಾಗ್ ಮೋಡ್ ಕೇಬಲ್ ಪ್ರಸಾರ ಸ್ಥಗಿತಗೊಳ್ಳಲಿದೆ. ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಮಂತ್ರಾಲಯದ ಆದೇಶದನ್ವಯ ಕೇಬಲ್ ಟಿ.ವಿ. ಸಂಪರ್ಕ ಜಾಲವನ್ನು ಮೂರನೆ ಹಂತದಲ್ಲಿ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಕಡ್ಡಾಯವಾಗಿ ಸೆಟ್‍ಟಾಪ್ ಬಾಕ್ಸ್ ಅಳವಡಿಸುವ ಮೂಲಕ ಡಿಜಿಟೈಜೇಶನ್‍ಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾಯ್ದೆಯನ್ನು ಜಾರಿಗೊಳಿಸಿದೆ.

ಇದೀಗ ನಾಲ್ಕನೆ ಹಂತದಲ್ಲಿ ಜಿಲ್ಲೆಯ ಎಲ್ಲ ಗ್ರಾಮೀಣ ಪ್ರದೇಶಗಳಲ್ಲೂ ಕೇಬಲ್ ಟಿವಿ ವೀಕ್ಷಕರು ಕಡ್ಡಾಯವಾಗಿ ಸೆಟ್‍ಟಾಪ್ ಬಾಕ್ಸ್ ಅಳವಡಿಸಿಕೊಳ್ಳಬೇಕು. ಈ ವ್ಯವಸ್ಥೆಯನ್ನು ಸಂಬಂಧಪಟ್ಟ ಕೇಬಲ್ ಆಪರೇಟರ್ಸ್ ಗಳು ಹಾಗೂ ಮಲ್ಟಿ ಸಿಸ್ಟಂ ಆಪರೇಟರ್ಸ್ ಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ, ಅಳವಡಿಸಿಕೊಳ್ಳಬೇಕು.

ಕೇಬಲ್ ಗ್ರಾಹಕರಿಗೆ ಈ ಕುರಿತು ಮನವರಿಕೆ ಮಾಡಿಕೊಟ್ಟು, ಡಿ. 31 ರ ಒಳಗಾಗಿ ಅನುಷ್ಠಾನಗೊಳಿಸಲೇಬೇಕಿದೆ. ಸೆಟ್‍ಟಾಪ್ ಬಾಕ್ಸ್ ಅಳವಡಿಕೆಯಿಂದ ಕೇಬಲ್ ಟಿ.ವಿ. ಗ್ರಾಹಕರಿಗೆ ಆಗುವ ಅನುಕೂಲಗಳ ಬಗ್ಗೆ ತಿಳುವಳಿಕೆ ಮೂಡಿಸಿ, ಅವರ ಮನವೊಲಿಸುವ ಕಾರ್ಯವನ್ನು ಕೈಗೊಳ್ಳಬೇಕು.

ಡಿಸೆಂಬರ್ 31 ರ ನಂತರ ಅನಲಾಗ್ ವ್ಯವಸ್ಥೆಯಲ್ಲಿ ಕೇಬಲ್ ಟಿ.ವಿ. ಪ್ರಸಾರ ಕೈಗೊಳ್ಳುವ ಕೇಬಲ್ ಸಂಸ್ಥೆಗಳ ಉಪಕರಣವನ್ನು ಜಪ್ತಿ ಮಾಡಲಾಗುವುದು. ಇದಕ್ಕೆ ಅವಕಾಶ ನೀಡದಂತೆ, ಕೇಬಲ್ ಆಪರೇಟರ್ಸ್‍ಗಳು ಜಿಲ್ಲೆಯ ನಗರ, ಪಟ್ಟಣ ಮತ್ತು ಎಲ್ಲ ಗ್ರಾಮೀಣ ಪ್ರದೇಶಗಳಲ್ಲಿ ಡಿಸೆಂಬರ್ 31 ರ ಒಳಗಾಗಿ ಸೆಟ್‍ಟಾಪ್ ಬಾಕ್ ಅಳವಡಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
Cable Digitisation Set up Box is compulsory in rural areas : Koppal Assistant DC Ismail Saheb Shirahatti. December 31, 2016 is deadline for adopting set up box.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X