ಮೇಕೆದಾಟು ವಿವಾದ : ಏ.18ರಂದು ಕರ್ನಾಟಕ ಬಂದ್

ಬೆಂಗಳೂರು, ಮಾ. 31 : ಮೇಕೆದಾಟು ಅಣೆಕಟ್ಟಿನ ವಿಚಾರದಲ್ಲಿ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಏ.18ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಅತ್ತ ಯೋಜನೆಗೆ ರಾಜ್ಯ ಸರ್ಕಾರ ಒಪ್ಪಿಗೆ ಪಡೆದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಮಂಗಳವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು, ವಿವಿಧ ಕನ್ನಡ ಪರ ಸಂಘಟನೆಗಳು ಜಂಟಿಯಾಗಿ ಏ.18ರಂದು ಕರ್ನಾಟಕ ಬಂದ್ ಮಾಡಲು ನಿರ್ಧರಿಸಿವೆ ಎಂದು ಹೇಳಿದ್ದಾರೆ. ['ಮೇಕೆದಾಟುವಿನಲ್ಲಿ ಕರ್ನಾಟಕ ಅಣೆಕಟ್ಟು ಕಟ್ಟಲು ಬಿಡೋಲ್ಲ']

vatal nagaraj

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣದ ವಿಚಾರದಲ್ಲಿ ನಿರ್ಲಕ್ಷ್ಯ ತೋರಿಸುತ್ತಿದೆ. ಅಣೆಕಟ್ಟು ನಿರ್ಮಿಸಲು ತಮಿಳುನಾಡು ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದರೂ ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ದೂರಿದರು.[ತಮಿಳುನಾಡು ಬಂದ್, ತರಕಾರಿ ದುಬಾರಿ]

ಏ.4ರಂದು ವಿವಿಧ ಕನ್ನಡ ಪರ ಸಂಘಟನೆಗಳು ಬೆಂಗಳೂರಿನಿಂದ ಮೇಕೆದಾಟುವಿನ ತನಕ ಜಾಥಾ ನಡೆಸಲಿದ್ದೇವೆ. ನಂತರ ಏ.18ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಕನ್ನಡ ಚಳವಳಿ ವಾಟಾಳ್ ಪಕ್ಷ ಸೇರಿದಂತೆ ವಿವಿಧ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ ಎಂದು ವಾಟಾಳ್ ನಾಗರಾಜ್ ಹೇಳಿದರು. [ಮೇಕೆದಾಟು ಯೋಜನೆ ವಿವಾದವೇನು?]

ಯೋಜನೆಗೆ ಅನುಮತಿ ಪಡೆದಿಲ್ಲ : ಕರ್ನಾಟಕ ಸರ್ಕಾರ ಮೇಕೆದಾಟು ಬಳಿ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ್ ಜವಡೇಕರ್ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ. [ಕರ್ನಾಟಕ ಬಂದ್: ಸಾರ್ವಜನಿಕರಿಗೆ ಗೈಡ್ ಲೈನ್ಸ್]

ಕರ್ನಾಟಕ ಸರ್ಕಾರ ಮೇಕೆದಾಟು ಬಳಿ ಅಣೆಕಟ್ಟು ನಿರ್ಮಾಣ ಮಾಡುವ ಸಂಬಂಧ ಕೇಂದ್ರ ಸರ್ಕಾರದ ಬಳಿ ಅನುಮತಿ ಕೇಳಿಲ್ಲ ಎಂದು ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ. ಕರ್ನಾಟಕ ಸರ್ಕಾರ ಯೋಜನಾ ವರದಿ ತಯಾರಿಸುತ್ತಿರುವುದು ಸೇರಿದಂತೆ ಯಾವುದೇ ವಿಚಾರಗಳು ತಮಗೆ ತಿಳಿದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+