ಡಾ. ಮಂಜುನಾಥ್ ಮತ್ತು ಎಚ್‌ಡಿ ಕುಮಾರಸ್ವಾಮಿಗೆ ಸಚಿವ ಸ್ಥಾನ ಕೊಡಲು ಒತ್ತಾಯ
ಲೋಕಸಭಾ ಚುನಾವಣೆ ಮತ ಎಣಿಕೆ ಮುಕ್ತಾಯವಾಗಿದ್ದು 292 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಎನ್‌ಡಿಎ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಮತ್ತೊಂದು ಕಡೆ ಇಂಡಿಯಾ ಒಕ್ಕೂಟ 232 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಸರ್ಕಾರ ರಚನೆ ಸಾಧ್ಯತೆ ಬಗ್ಗೆ ಚಿಂತಿಸುತ್ತಿದೆ.
ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸಿತ್ತು. ಜೆಡಿಎಸ್ ಬೆಂಬಲದಿಂದ ರಾಜ್ಯದಲ್ಲಿ ಬಿಜೆಪಿ 17 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಜೆಡಿಎಸ್ ಎರಡು ಸ್ಥಾನಗಳಲ್ಲಿ ಗೆದ್ದಿದೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಎಚ್‌ಡಿ ಕುಮಾರಸ್ವಾಮಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಡಾ. ಮಂಜುನಾಥ್ ಡಿ.ಕೆ. ಸುರೇಶ್ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಅಭಿಮಾನಿಗಳಿಂದ ಬೇಡಿಕೆ
ನೆಚ್ಚಿನ ನಾಯಕರು ಗೆಲುವು ಸಾಧಿಸುತ್ತಿದ್ದಂತೆ ಅಭಿಮಾನಿಗಳು ಸಖತ್ ಖುಷಿಯಾಗಿದ್ದಾರೆ. ಇಬ್ಬರ ಗೆಲುವನ್ನೂ ಕೂಡ ಸಂಭ್ರಮಿಸಿದ್ದಾರೆ. ಎನ್‌ಡಿಎ ಸರ್ಕಾರ ರಚನೆ ಬಗ್ಗೆ ನಾಳೆ ಚರ್ಚೆ ನಡೆಸಲು ದೆಹಲಿಯಲ್ಲಿ ಸಭೆ ನಡೆಯುತ್ತಿದ್ದು, ಎಚ್‌ಡಿ ಕುಮಾರಸ್ವಾಮಿ ಕೂಡ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಲಿದ್ದಾರೆ.
ಈಗ ಅಭಿಮಾನಿಗಳು ಡಾ. ಸಿ.ಎನ್. ಮಂಜುನಾಥ್ ಮತ್ತು ಎಚ್‌ಡಿ ಕುಮಾರಸ್ವಾಮಿ ಅವರಿಗೆ ಸಚಿವ ಸ್ಥಾನ ಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಡಾ. ಸಿ.ಎನ್. ಮಂಜುನಾಥ್ ಅವರಿಗೆ ಆರೋಗ್ಯ ಖಾತೆ ಮತ್ತು ಎಚ್‌ಡಿ ಕುಮಾರಸ್ವಾಮಿ ಅವರಿಗೆ ಕೃಷಿ ಖಾತೆ ಕೊಡುವಂತೆ ಆಗ್ರಹಿಸಿದ್ದಾರೆ.












Click it and Unblock the Notifications