ಬಳ್ಳಾರಿಯಲ್ಲಿ ಮೇ 31ಕ್ಕೆ ಕ್ಯಾಂಪಸ್ ಸಂದರ್ಶನ, ವಿವರ

ಬೆಂಗಳೂರು, ಮೇ 28: ಬಳ್ಳಾರಿಯಲ್ಲಿ ಮೇ 31ರಂದು ಕ್ಯಾಂಪಸ್ ಸಂದರ್ಶನ ಆಯೋಜನೆ ಮಾಡಲಾಗಿದೆ. 18 ವರ್ಷ ಮೇಲ್ಪಟ್ಟವರು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರಾಗಿರುತ್ತಾರೆ ಎಂದು ಪ್ರಕಟಣೆ ಹೇಳಿದೆ.

ನಗರದ ರೇಡಿಯೋ ಪಾರ್ಕ್ ಪ್ರದೇಶದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮೇ 31ರಂದು ಬೆಳಗ್ಗೆ 9 ಗಂಟೆಗೆ ಬೆಂಗಳೂರಿನ ಟೊಯೋಟ ಕಿರ್ಲೋಸ್ಕರ್ ಕಂಪನಿಯಲ್ಲಿ ಅಪ್ರೆಂಟಿಸ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನ ಆಯೋಜನೆ ಮಾಡಲಾಗಿದೆ.

Campus Interview In Ballari On May 31st

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೆ. ಹೆಚ್. ಎಂ. ಪಂಡಿತಾರಾಧ್ಯ ಈ ಕುರಿತು ಮಾಹಿತಿ ನೀಡಿದ್ದಾರೆ. ಸಂದರ್ಶನದಲ್ಲಿ ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ವೆಲ್ಡರ್, ಇ.ಎಂ, ಎಂ.ಎಂ.ವಿ, ಮೆಕ್ಯಾನಿಕ್ ಡೀಸಲ್ ವೃತ್ತಿಗಳ ಐಟಿಐ ಪಾಸಾದ ಅಭ್ಯರ್ಥಿಗಳು ಹಾಗೂ ಅಂತಿಮ ವರ್ಷದ ತರಬೇತಿದಾರರು ಭಾಗವಹಿಸಬಹುದು.

ಸಂದರ್ಶನದಲ್ಲಿ ಭಾಗವಹಿಸುವವರು ಎಸ್ಎಸ್ಎಲ್‌ಸಿ ಅಂಕಪಟ್ಟಿ, ಐಟಿಐ ಅಂಕಪಟ್ಟಿ, ಎರಡು ಭಾವಚಿತ್ರಗಳು, ಆಧಾರ್ ಕಾರ್ಡ್‍ನ ಪ್ರತಿ ಹಾಗೂ ಸ್ವ-ವಿವರವುಳ್ಳ ಬಯೋಡೇಟಾ ಮತ್ತು ತಪ್ಪದೇ ಸ್ಮಾರ್ಟ್ ಮೊಬೈಲ್‍ ಅನ್ನು ತರಬೇಕು. 18 ವರ್ಷ ಮೇಲ್ಪಟ್ಟವರು ಅರ್ಹರಾಗಿರುತ್ತಾರೆ.

ಮೇ 31ರಂದು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಯಲಿದ್ದು, ಜೂನ್ 01 ರಂದು ವೈದ್ಯಕೀಯ ಪರೀಕ್ಷೆ ನಡೆಯಲಿದೆ. ಅರ್ಹರು ಕ್ಯಾಂಪಸ್ ಸಂದರ್ಶನಕ್ಕೆ ಹಾಜರಾಗಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ತರಬೇತಿಗೆ ಅರ್ಜಿ ಆಹ್ವಾನ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕೇಂದ್ರ ಸರ್ಕಾರ ಪುರಸ್ಕೃತ ರಾಷ್ಟ್ರೀಯ ಗೋಕುಲ್ ಮಿಷನ್ ಯೋಜನೆಯಡಿ ಸ್ಥಳೀಯ ಮೈತ್ರಿ ಕೇಂದ್ರ/ ಮೈತ್ರಿ ಹಳ್ಳಿಯ ನಿರುದ್ಯೋಗಿ ಯುವಕ/ ಯುವತಿಯರಿಗೆ ಸ್ವಯಂ ಉದ್ಯೋಗವಕಾಶ ಕಲ್ಪಸಿ ಕೊಡುವ ನಿಟ್ಟಿನಲ್ಲಿ ಆಸಕ್ತರಿಂದ ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ 1 ತಿಂಗಳ ಕ್ಲಾಸ್ ರೂಂ ಭೋದನಾ ತರಬೇತಿ ಕೇಂದ್ರದಲ್ಲಿ ಹಾಗೂ 2 ತಿಂಗಳ ಪ್ರಾಯೋಗಿಕಾ ತರಬೇತಿಯನ್ನು ಇಲಾಖೆಯ ಪಶು ಆಸ್ಪತ್ರೆ/ ಪಶು ಚಿಕಿತ್ಸಲಾಯಗಳಲ್ಲಿ ನೀಡಲಾಗುವುದು. ತರಬೇತಿ ಅವಧಿಯಲ್ಲಿ ಮತ್ತು ನಂತರ ನಿರ್ವಹಿಸುವ ಕೆಲಸಕ್ಕೆ ಅನುಗುಣವಾಗಿ ಪ್ರೋತ್ಸಾಹ ಧನ ನೀಡಲಾಗುವುದು.

ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಕಡ್ಡಾಯವಾಗಿ ಸ್ಥಳೀಯ ಅಭ್ಯರ್ಥಿಯಾಗಿದ್ದು, ಕನಿಷ್ಠ ಎಸ್.ಎಸ್,ಎಲ್.ಸಿ ತೇರ್ಗಡೆ ಹೊಂದಿರಬೇಕು. ಮೈತ್ರಿ ತರಬೇತಿ ಪಡೆದ ನಂತರ ಸ್ಥಳೀಯವಾಗಿ ಪಾರ್ಯನಿರ್ವಹಿಸಲು ಆಸಕ್ತರಾಗಿರಬೇಕು. ಮೈತ್ರಿ ಕೇಂದ್ರದ ವ್ಯಾಪ್ತಿಯ ಹಳ್ಳಿಗಳಲ್ಲಿ ಇಲಾಖೆಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕೃತಕ ಗರ್ಭಧಾರಣ ಕಾರ್ಯನಿರ್ವಹಿಸುವುದು. ಇದಕ್ಕೆ ಸರ್ಕಾರದಿಂದ ಪ್ರೋತ್ಸಾಹ ಧನ ನೀಡಲಾಗುವುದು.

ಆಸಕ್ತ ಅಭ್ಯರ್ಥಿಗಳು ತರಬೇತಿಯನ್ನು ಪಡೆಯಲು ಇಚ್ಛಿಸಿರುವ ಬಗ್ಗೆ ನಿಗದಿತ ನಮೂನೆಯಲ್ಲಿ ಅರ್ಜಿ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‍ಬುಕ್ ಜೆರಾಕ್ಸ್ ಪ್ರತಿ, 2 ಪಾಸ್ ಪೋರ್ಟ್ ಸೈಜ್ ಫೋಟೋ, ಜಾತಿ ಪ್ರಮಾಣ ಪತ್ರ, ರೂ.100ರ ಇ-ಸ್ಟಾಂಪ್ ಪೇಪರ್‌ನಲ್ಲಿ ಅಫಿಡವಿಟ್, ದೂರವಾಣಿ ಸಂಖ್ಯೆ ದಾಖಲಾತಿ ವಿವರ ಸಲ್ಲಿಸಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+