ಕೊಪ್ಪಳದಲ್ಲಿ ಜುಲೈ 16ರಂದು ಕ್ಯಾಂಪಸ್ ಸಂದರ್ಶನ

ಕೊಪ್ಪಳ, ಜುಲೈ 12 : ಇಂಡೋ ವಿಮ್ ಸಂಸ್ಥೆಯು ಕೊಪ್ಪಳದಲ್ಲಿ ಐಟಿಐ ಅಭ್ಯರ್ಥಿಗಳಿಗಾಗಿ ಕ್ಯಾಂಪಸ್ ಸಂದರ್ಶನ ಆಯೋಜಿಸಿದೆ. ಜುಲೈ 16ರಂದು ಕ್ಯಾಂಪಸ್ ಸಂದರ್ಶನ ನಡೆಯಲಿದೆ.

ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಕುಕನೂರಿನಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜು.16 ರಂದು ಬೆಳಗ್ಗೆ 10 ಗಂಟೆಗೆ ಕ್ಯಾಂಪಸ್ ಸಂದರ್ಶನ ಆರಂಭವಾಗಲಿದೆ.

koppal

ಐಟಿಐನಲ್ಲಿ ಫಿಟ್ಟರ್, ಟರ್ನರ್ ಮತ್ತು ಮಷಿನಿಸ್ಟ್ ವೃತ್ತಿಯಲ್ಲಿ ಉತ್ತೀರ್ಣರಾದ ಅಥವಾ ವೃತ್ತಿಗಳಲ್ಲಿ ಅಂತಿಮ ಸೆಮಿಸ್ಟರ್‌ನಲ್ಲಿ ತರಬೇತಿ ಪಡೆಯುತ್ತಿರುವ 18 ರಿಂದ 21 ವರ್ಷದೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನಕ್ಕೆ ಆಗಮಿಸುವ ಅಭ್ಯರ್ಥಿಗಳು ವಿದ್ಯಾರ್ಹತೆಗೆ ಸಂಬಂಧಿಸಿದ ಪ್ರಮಾಣ ಪತ್ರ ಹಾಗೂ ಪ್ರಮಾಣ ಪತ್ರಗಳ ನಕಲು ಪ್ರತಿಯನ್ನು ತರಬೇಕು. ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳನ್ನು ತರಬೇಕು ಎಂದು ಸೂಚಿಸಲಾಗಿದೆ.

ಅಭ್ಯರ್ಥಿಗಳು ಸಂದರ್ಶನಕ್ಕೆ ತಮ್ಮ ಸ್ವಂತ ಖರ್ಚಿನಲ್ಲಿ ಆಗಮಿಸಬೇಕು. ಹೆಚ್ಚಿನ ಮಾಹಿತಿಗೆ 9480715898 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದು ಕುಕನೂರು ಐಟಿಐ ಕಾಲೇಜಿನ ಪ್ರಕಟಣೆ ತಿಳಿಸಿದೆ.

ಉದ್ಯೋಗವಕಾಶಗಳ ಮಾಹಿತಿ

* ದಿ ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಬೆಂಗಳೂರು ಕಿರಿಯ ಸಹಾಯಕ ಗ್ರೇಡ್-2 ಮತ್ತು ಜವಾನರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22 ಜುಲೈ 2016. [ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿ]

* ಬಳ್ಳಾರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2016ರ ಜುಲೈ 21 ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. [ವಿವರಗಳು]

[ಮಾಹಿತಿ : ಕೊಪ್ಪಳ ವಾರ್ತೆ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+