Lok Sabha Election: ವಿಧಾನಸಭೆ, ಲೋಕಸಭಾ ಚುನಾವಣೆಗಳಲ್ಲಿ ತಮ್ಮ ಚಾಣಕ್ಷತನ ಮೆರೆದ ಕರ್ನಾಟಕ ಮತದಾರ
ಕಾಂಗ್ರೆಸ್ ಸದ್ಯ ದೇಶದಲ್ಲಿ ಮೂರು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ಕರ್ನಾಟಕ, ತೆಲಂಗಾಣ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸುತ್ತಿದೆ. ದೇಶದ ಹಳೆಯ ಪಕ್ಷ ಡಿಸೆಂಬರ್ 2022ರಲ್ಲಿ ಹಿಮಾಚಲ ಪ್ರದೇಶವನ್ನು ಗೆದ್ದಿಕೊಂಡಿತ್ತು. ಇನ್ನು ಮೇ 2023ರಲ್ಲಿ ಕರ್ನಾಟಕವನ್ನು, ಡಿಸೆಂಬರ್ 2023ರಲ್ಲಿ ತೆಲಂಗಾಣವನ್ನು ಕ್ಯಾಪ್ಚರ್ ಮಾಡಿಕೊಂಡಿದೆ.
ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಮಾಡಿಕೊಂಡಿರುವ ಪ್ಲ್ಯಾನ್ ಏನು ಎಂಬ ಬಗ್ಗೆ ಎಲ್ಲರ ಚಿತ್ತ ನೆಟ್ಟಿದೆ. ಒಂದು ವೇಳೆ ಈ ಮೂರು ರಾಜ್ಯಗಳಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನವನ್ನು ಗೆದ್ದರೆ ಏನಾಗುತ್ತದೆ. ಎಲ್ಲರಿಗೂ ತಿಳಿದಿರುವಂತೆ ರಾಜ್ಯಗಳ ಚುನಾವಣೆಗಳೇ ಬೇರೆ, ಕೇಂದ್ರ ಚುನಾವಣೆಗಳು ಬೇರೆ ರೀತಿಯಾಗಿ ಇರುತ್ತವೆ. ರಾಜ್ಯ ಹಾಗೂ ಕೇಂದ್ರದಲ್ಲಿ ಚುನಾವಣೆ ನಡೆಯುವಾಗ ಸಮಸ್ಯೆಗಳು ವಿಭಿನ್ನವಾಗಿರುತ್ತವೆ. ಇವುಗಳನ್ನು ಇಟ್ಟುಕೊಂಡು ರಾಷ್ಟ್ರೀಯ ಪಕ್ಷಗಳು ಮತದಾರರನ್ನು ತಮ್ಮ ಸೆಳೆಯಲು ಪ್ಲ್ಯಾನ್ ಮಾಡಿಕೊಂಡಿರುತ್ತವೆ.

ಕರ್ನಾಟಕದಲ್ಲಿ ಬಿಜೆಪಿ ಕಥೆ ಏನು?
ಇನ್ನು ಚುನಾವಣೆಗಳ ಪೂರ್ವ ಸಮೀಕ್ಷೆಗಳಲ್ಲಿ ಕರ್ನಾಟಕದಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದೆ ಎಂದು ತಿಳಿಸಿದೆ. ಸಮೀಕ್ಷೆಗಳ ಅಂಕಿ ಅಂಶಗಳು ಭಿನ್ನವಾಗಿದ್ದರೂ ಅದರಲ್ಲಿ ದೊಡ್ಡ ಪಕ್ಷ ಎಂಬ ಹಣೆ ಪಟ್ಟ ಬಿಜೆಪಿಗೆ ಸಿಕ್ಕಿದೆ. ಈ ಬಾರಿ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಸ್ಪರ್ಧಿಸುತ್ತಿವೆ.
ಕಾಂಗ್ರೆಸ್ ಸಾಧನೆ ಹೇಗಿದೆ?
ಕರ್ನಾಟಕದ ವಿಧಾನಸಭೆಯಲ್ಲಿ ಸತತವಾಗಿ ಒಂದೇ ಪಕ್ಷ ಅಧಿಕಾರ ನಡೆಸೆ ಇಲ್ಲ ಎಂಬುದು ಸತ್ಯ. ಆದರೆ ಕೇಂದ್ರ ಚುನಾವಣೆಗಳ ವಿಷಯ ಬಂದಾಗ ಬಹು ವರ್ಷಗಳಿಂದ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದು ಬೀಗುತ್ತಿದೆ. 1999 ರಲ್ಲಿ ಕಾಂಗ್ರೆಸ್ 18 ಸ್ಥಾನಗಳನ್ನು ಗೆದ್ದು ಹಿರಿಮೆ ಮೆರೆದಿತ್ತು. ಈ ಚುನಾವಣೆಯಲ್ಲಿ ಬಿಜೆಪಿ ಕೇವಲ 8 ಸ್ಥಾನದಲ್ಲಿ ಜಯ ಸಾಧಿಸಿತ್ತು. ಇಲ್ಲಿಂದ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ತನ್ನ ಮುನ್ನಡೆಯನ್ನು ಕಾಯ್ದುಕೊಂಡಿದೆ.

ಈ ಹಿಂದಿನ ಚುನಾವಣೆಗಳನ್ನು ನೋಡಿದರೆ ಲೋಕಸಭಾ ಚುನಾವಣೆಉ ವಿಷಯ ಬಂದಾಗ ದಕ್ಷಿಣದ ಕರ್ನಾಟಕದ ಬಿಜೆಪಿ ಭದ್ರ ಕೋಟೆ. 2014ರಲ್ಲಿ ಬಿಜೆಪಿ 17 ಸ್ಥಾನಗಳನ್ನು ಗೆದ್ದುಕೊಂಡಿತ್ತು. 2013ರಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿತ್ತು. ವಿಧಾನಸಭಾ ಚುನಾವಣೆಯಲ್ಲೊ ಬಿಜೆಪಿ 40 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ 122 ಸ್ಥಾನ ಗೆದ್ದು ಅಧಿಕಾರ ನಡೆಸಿತ್ತು. ಇನ್ನು ಜೆಡಿಎಸ್ 40 ಸ್ಥಾನ ಕಬಳಿಸಿತ್ತು.
2018ರಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗಳು ನಡೆದಾಗ ಬಿಜೆಪಿ 104 ಸ್ಥಾನಗಳನ್ನು ಗೆದ್ದಿತ್ತು. ಮ್ಯಾಜಿಕ್ ನಂಬರ್‌ಗೆ ಬೇಕಿದ್ದ ನಂಬರ್ ಗಳಿಸಲು ಸಾಧ್ಯವಾಗದೆ ಒದ್ದಾಡಿತ್ತು. ಇದಾದ ಬಳಿಕ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದು ಬೀಗಿತ್ತು. ಈ ವೇಳೆ ಕಾಂಗ್ರೆಸ್, ಜೆಡಿಎಸ್, ಪಕ್ಷೇತರ ತಲಾ ಒಂದೊಂದು ಸ್ಥಾನವನ್ನು ಗೆದ್ದುಕೊಂಡಿತ್ತು.
2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿತ್ತು. ಇದಾದ ಬಳಿಕ ರಾಜ್ಯದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವಲ್ಲಿ ವಿಫಲರಾಗಿದ್ದಾರೆ. 2024ರಲ್ಲಿ ಲೋಕಸಭಾ ಚುನಾವಣೆಯ ಫಲಿತಾಂಶ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.












Click it and Unblock the Notifications