Lok Sabha Election 2024: ಉತ್ತರ ಕರ್ನಾಟಕದಲ್ಲಿ ಲಿಂಗಾಯತರ ಮನವೊಲಿಸುವಲ್ಲಿ ಯಶಸ್ವಿಯಾಗುವುದೇ ಬಿಜೆಪಿ? ವರದಿ, ವಿಶ್ಲೇಷಣೆ
ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆಗಳು ಮುಗಿದಿದೆ. ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಈ ಬಾರಿ ಮತದಾನ ನಡೆಯಲಿದ್ದು, ಎಲ್ಲ ಪಕ್ಷಗಳ ಚಿತ್ತ ಈಗ ಉತ್ತರಕ್ಕೆ ಶಿಫ್ಟ್ ಆಗಿದೆ. ಅಲ್ಲದೆ ಮತಗಳನ್ನು ತಮ್ಮತ್ತ ಸೆಳೆಯಲು ಮಾಡಿಕೊಳ್ಳಲು ಬೇಕಾದ ತಂತ್ರವನ್ನು ರಾಷ್ಟ್ರೀಯ ಪಕ್ಷಗಳು ಮಾಡಿಕೊಳ್ಳುತ್ತಿವೆ. ಎಲ್ಲ ಪಕ್ಷಗಳು ಆ ಒಂದು ಸಮುದಾಯವನ್ನು ಟಾರ್ಗೆಟ್ ಮಾಡೋದು ಗ್ಯಾರಂಟಿ..
14 ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ ಅತಿ ದೊಡ್ಡ ಸಮುದಾಯ ಎಂದೇ ಗುರುತಿಸಿಕೊಂಡಿರುವ ಲಿಂಗಾಯತ ಸಮುದಾಯವನ್ನೇ ಎಲ್ಲ ಪಕ್ಷಗಳು ಟಾರ್ಗೆಟ್ ಮಾಡಲಿವೆ. ರಾಜ್ಯದಲ್ಲಿ ಶೇಕಡಾ 17 ರಷ್ಟು ಇದೇ ಸಮುದಾಯ ಜನರಿದ್ದಾರೆ. ಇವರನ್ನು ಬಿಟ್ಟರೆ ಒಕ್ಕಲಿಗರು ಹೆಚ್ಚಾಗಿದ್ದಾರೆ. ರಾಜ್ಯದ ಜನಸಂಖ್ಯೆಯಲ್ಲಿ ಈ ಸಮುದಾಯದ ಪಾತ್ರ ಶೇಕಡಾ 12 ರಷ್ಟಿದೆ.

ಕಳೆದ ಬಾರಿ ಕ್ಲೀನ್ ಸ್ವೀಪ್ ಸಾಧನೆ
ಲಿಂಗಾಯತರು ಇತ್ತೀಚಿನ ಕೆಲವು ದಶಕಗಳಿಗೆ ಬಿಜೆಪಿ ಪಕ್ಷದತ್ತ ಮುಖ ಮಾಡಿದ್ದಾರೆ. ಇನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದರಿಂದ, ಉತ್ತರ ಕರ್ನಾಟಕದಲ್ಲಿ ಮೈತ್ರಿ ಎಷ್ಟರ ಮಟ್ಟಿಗೆ ಕೈ ಹಿಡಿಯಲಿದೆ ಎಂಬುದನ್ನು ಕಾದು ನೋಡಬೇಕಿದೆ. ಅಂದಹಾಗೆ 2019ರ ಚುನಾವಣೆಯಲ್ಲಿ ಬಿಜೆಪಿ ಈ ಕ್ಷೇತ್ರದಲ್ಲಿ ಕ್ಲೀನ್ ಸ್ವೀಪ್ ಸಾಧನೆ ಮಾಡಿತ್ತು.
ಲಿಂಗಾಯತ ಶಾಸಕರ ಸಂಖ್ಯೆ ಎಷ್ಟು?
ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ 37 ಲಿಂಗಾಯತ ಶಾಸಕರು ಗೆದ್ದು ಬೀಗಿದ್ದಾರೆ. 2018ಕ್ಕೆ ಹೋಲಿಸಿದರೆ ಈ ಸಂಖ್ಯೆ ಹೆಚ್ಚಾಗಿದೆ. ಬಿಜೆಪಿ ಕಳೆದ ಚುನಾವಣೆಯಲ್ಲಿ ಕೇವಲ 15 ಲಿಂಗಾಯತ ಅಭ್ಯರ್ಥಿಗಳು ಗೆದ್ದಿದ್ದರು. ಇನ್ನು ಒಟ್ಟಾರೆ ಲಿಂಗಾಯತ ಶಾಸಕರ ಸಂಖ್ಯೆಯು ಹೆಚ್ಚಾಗಿದ್ದು, ಇದರ ಲಾಭವನ್ನು ಪಕ್ಷಗಳು ಹೇಗೆ ಪಡೆಯಲಿವೆ ಎಂಬುದು ದೊಡ್ಡ ಪ್ರಶ್ನೆ ಆಗಿದೆ.
ಕರ್ನಾಟಕದ 224 ಕ್ಷೇತ್ರಗಳಲ್ಲಿ 90 ಕ್ಷೇತ್ರಗಳಲ್ಲಿ ಲಿಂಗಾಯತ ಸಮುದಾಯವೇ ಡಾಮಿನೆಟೆಡ್ ಇದೆ. ಇನ್ನು ಈ ಸಮುದಾಯ ಬಿಜೆಪಿಯಿಂದ ಕಾಂಗ್ರೆಸ್ ಕಡೆ ಮುಖ ಮಾಡಿರಲು ಹಲವು ಕಾರಣಗಳಿವೆ. ಲಿಂಗಾಯತ ಸಮುದಾಯದ ಪ್ರಭಾವಿ ಮುಖಂಡ ಬಿಎಸ್ ಯಡಿಯೂರಪ್ಪ ಅವರನ್ನು ಸೈಡಲೈನ್ ಮಾಡಿದ್ದು, ಪಕ್ಷಕ್ಕೆ ಪೆಟ್ಟು ನೀಡಿದೆ. ಈಗ ಮತ್ತೆ ಬಿಜೆಪಿಯತ್ತ ಲಿಂಗಾಯತ ಸಮುದಾಯ ಮುಖ ಮಾಡಿದೆ. ದೇಶದ ವಿಚಾರಕ್ಕೆ ಬಂದಾಗ ಈ ಸಮುದಾಯ ಒಟ್ಟಾಗಿ ನಿಲ್ಲುವುದು ಕಳೆದ ಹಲವು ಚುನಾವಣೆಗಳಲ್ಲಿ ಎದ್ದು ಕಾಣುತ್ತದೆ. ಈಗ ರಣ ರಂಗದಲ್ಲಿ ಮತ್ತೆ ಬಿಎಸ್ ವೈ ಕಾಣಿಸಿಕೊಂಡಿದ್ದು, ಇವರ ಮಗನಿಗೂ ದೊಡ್ಡ ಜವಾಬ್ದಾರಿಯನ್ನು ನೀಡಲಾಗಿದೆ.

ಕಾಂಗ್ರೆಸ್ ಪಕ್ಷ ಸೇರಿದ ಮುಖಂಡರು
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಟಿಕೆಟ್ ನೀಡದೇ ಇರುವ ಕಾರಣಕ್ಕೆ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದ ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್ ಪಕ್ಷಕ್ಕೆ ಕೊಂಚ ಪೆಟ್ಟು ಬಿದ್ದಿತ್ತು. ಆದರೆ ಈಗ ರಾಜಕೀಯ ಸಮೀಕರಣ ಬದಲಾಗಿದೆ. ಕಾಂಗ್ರೆಸ್‌ಗೆ ಕೈ ನೀಡಿರುವ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ಬಾವುಟ ಹಿಡಿದಿದ್ದಾರೆ. ಅಲ್ಲದೆ ಬೆಳಗಾವಿ ಕ್ಷೇತ್ರದಿಂದ ಲೋಕಸಭಾಚುನಾವಣೆಯ ಅಖಾಡದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ಜಗದೀಶ್ ಶೆಟ್ಟರ್ ಘರ್ ವಾಪಸಿಯಿಂದ ಪಕ್ಷದಲ್ಲಿ ಕಾಣಿಸಿಕೊಂಡಿದ್ದ ಸಣ್ಣ ಬಿರುಕು ಸಹ ಮುಚ್ಚಿದಂತೆ ಕಾಣುತ್ತದೆ. ಈ ಬಾರಿ ಬಿಜೆಪಿ ಕಳೆದ ಬಾರಿಯಂತೆ ಈ ಬಾಗದಲ್ಲಿ ಕ್ಲೀನ್ ಸ್ವೀಪ್ ಸಾಧನೆಯನ್ನು ಮಾಡಲು ಎದುರು ನೋಡುತ್ತಿದೆ. ಈ ಬಾರಿ ಬೆಳಗಾವಿ ಕ್ಷೇತ್ರದ ಮೂಲಕ ಮೊದಲ ಬಾರಿಗೆ ಲೋಕಸಭಾ ಪ್ರವೇಶಿಸಲು ಜಗದೀಶ್ ಶೆಟ್ಟರ ಎದುರು ನೋಡುತ್ತಿದ್ದಾರೆ.
ಎಷ್ಟು ಲಿಂಗಾಯತ ಅಭ್ಯರ್ಥಿಗಳು ಕಣದಲ್ಲಿ?
ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು 9 ಲಿಂಗಾಯತ ಅಭ್ಯರ್ಥಿಗಳಿಗೆ ಅವಕಾಶ ನೀಡಿದರೆ, ಮೂವರು ಒಕ್ಕಲಿಗರಿಗೆ ಚುನಾವಣೆ ಸ್ಪರ್ಧಿಸುವ ಅವಕಾಶ ನೀಡಿದೆ. ಈ ಅಂಕಿ ಅಂಶದಲ್ಲಿ ಕಾಂಗ್ರೆಸ್ ಕೊಂಚ ಹಿಂದೆ ಬಿದ್ದಿದೆ. ಕಾಂಗ್ರೆಸ್ 5 ಲಿಂಗಾಯತ, 6 ಒಕ್ಕಲಿಗರಿಗೆ ಅವಕಾಶ ನೀಡಿದೆ. ಇನ್ನು ಜೆಡಿಎಸ್ ಇಬ್ಬರು ಒಕ್ಕಲಿಗ ಅಭ್ಯರ್ಥಿಗಳಿಗೆ ಮಣೆ ಹಾಕಿದೆ.
ಕಾಂಗ್ರೆಸ್ ಸಹ ಈ ಹಿಂದೆ ಅಹಿಂದ ಮತಗಳನ್ನು ತನ್ನತ್ತ ಸೆಳೆಯಲು ಬೇಕಾದ ಪ್ರಯತ್ನಗಳು ಮಾಡಿಕೊಂಡಿದೆ. ಅಂದಹಾಗೆ ಕಾಂಗ್ರೆಸ್ ಲಿಂಗಾಯತ, ಒಕ್ಕಲಿಗರು ಈ ಎರಡು ಸಮುದಾಯಕ್ಕಿಂತಲೂ ಹೆಚ್ಚಿನ ಒತ್ತನ್ನು ಬೇರೆ ಸಮುದಾಯಕ್ಕೆ ನೀಡಿ ಮತದಾರರ ಮನವೊಲಿಸುವಲ್ಲಿ ಸಫಲವಾಗಿದೆ. ಕಾಂಗ್ರೆಸ್ ಕುರುಬ ಸಮುದಾಯದ ಸಿದ್ಧರಾಮಯ್ಯ ಅವರನ್ನು ಸಿಎಂ ಮಾಡಿದ್ದು, ರಾಷ್ಟ್ರೀಯ ಅಧ್ಯಕ್ಷರನ್ನಾಗಿ ದಲಿತ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ನೇಮಕ ಮಾಡಿದ್ದು, ಮಾಸ್ಟರ್ ಸ್ಟ್ರೋಕ್ ನೀಡಲು ಪ್ಲ್ಯಾನ್ ಮಾಡಿದೆ.

ರಾಜಕೀಯ ಪಕ್ಷಗಳ ಲೆಕ್ಕಾಚಾರವೇ ಬೇರೆಯದ್ದಾಗಿರುತ್ತದೆ. ಆದರೆ ಮತದಾರರನ ಲೆಕ್ಕಾಚಾರ ಬೇರೆಯದ್ದಾಗಿರುತ್ತದೆ. ಈ ಬಾರಿ ಯಾವ ಸಮುದಾಯಕ್ಕೆ ಮತದಾರ ಮಣೆ ಹಾಕಿದ್ದಾನೆ ಎಂಬುದಕ್ಕೆ ಜೂನ 4ಕ್ಕೆ ಉತ್ತರ ಲಭಿಸಲಿದೆ.
-
Siddaramaiah: ತಲಾ ಆದಾಯದಲ್ಲಿ ಕರ್ನಾಟಕ ದೇಶದಲ್ಲೇ ನಂಬರ್ ಒನ್; ದೇಶಕ್ಕೆ ಈ ಕಾರಣಕ್ಕೆ ಕಾಂಗ್ರೆಸ್ ಬೇಕು: ಸಿದ್ದರಾಮಯ್ಯ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications