ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಿಗುವುದೇ ಧಾರವಾಡದ ಉಸ್ತುವಾರಿ!? ಸಂತೋಷ್‌ ಲಾಡ್‌ಗೆ ಯಾವ ಜಿಲ್ಲೆ?

ಧಾರವಾಡ , ಜೂನ್‌ 1: ರಾಜ್ಯ ಸರ್ಕಾರದಲ್ಲಿ ಖಾತೆ ಹಂಚಿಕೆ ಉಳಿಕ, ಇದೀಗ ಜಿಲ್ಲಾ ಉಸ್ತುವಾರಿ ಸಚಿವರಾಗ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಧಾರವಾಡ ಜಿಲ್ಲಾ ಉಸ್ತುವಾರಿಗೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಆಸಕ್ತಿ ವಹಿಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಹೌದು, ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಯಾಗಿರುವ ಧಾರವಾಡ ಜಿಲ್ಲೆಯ ಉಸ್ತುವಾರಿ ಸಚಿವರು ಯಾರಾಗುತ್ತಾರೆ ಎಂಬ ಚರ್ಚೆ ಜೋರಾಗಿದ್ದು,ಧಾರವಾಡ ಜಿಲ್ಲೆಯಿಂದ ಏಕೈಕ ಸಚಿವರಾಗಿರುವ ಸಂತೋಷ ಲಾಡ್ ಅವರಿಗೆ ಧಾರವಾಡ ಜಿಲ್ಲಾ ಉಸ್ತುವಾರಿ ಕೈ ತಪ್ಪು ಸಾಧ್ಯತೆಗಳೂ ಇವೆ ಎನ್ನಲಾಗಿದೆ.

Lakshmi Hebbalkar

ವಿಧಾನಸಭಾ ಚುನಾವಣೆಯಲ್ಲಿ ಪಂಚಮಸಾಲಿ ಮತಗಳನ್ನು ಕಾಂಗ್ರೆಸ್ ಪರ ಸೆಳೆಯುವಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಯಶಸ್ವಿಯಾಗಿದ್ದರು. ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರ ಗೆಲುವಿನಲ್ಲೂ ಲಕ್ಷ್ಮೀ ಹೆಬ್ಬಾಳ್ಕರ ಪಾತ್ರ ವಹಿಸಿದ್ದು, ಧಾರವಾಡ ಉಸ್ತುವಾರಿ ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಪ್ರಬಲ ಪಂಚಮಸಾಲಿ ಲಿಂಗಾಯತ ಸಮುದಾಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಅವರಿಗೆ ಧಾರವಾಡ ಜಿಲ್ಲೆ ಉಸ್ತುವಾರಿ ಸಚಿವರನ್ನಾಗಿಸುವ ಚಿಂತನೆಯನ್ನ ಹೈಕಮಾಂಡ್ ಮುಂದಿದೆ ಎನ್ನಲಾಗಿದೆ. ಈಗಾಗಲೇ ಲೋಕಸಭಾ ಚುನಾವಣೆ ಹಿನ್ನಲೆ ಅಳೆದು ತೂಗಿ ಖಾತೆ ಹಂಚಿಕೆ ಮಾಡಿರುವ ಹೈಕಮಾಂಡ್‌, ಜಿಲ್ಲಾ ಉಸ್ತುವಾರಿ ವಿಚಾರದಲ್ಲೂ ಎಚ್ಚರಿಕೆಯ ಹೆಜ್ಜೆಯನ್ನ ಇಡುತ್ತಿದೆ.

ಧಾರವಾಡ ಜಿಲ್ಲೆಯಲ್ಲಿ ಅತ್ಯಧಿಕ ಲಿಂಗಾಯತ ಸಮುದಾಯದ ಮತಗಳಿದ್ದು, ಲೋಕಸಭಾ ಚುನಾವಣೆ ವೇಳೆಗೆ ಈ ಮತಗಳನ್ನು ಕಾಂಗ್ರೆಸ್ ಪಕ್ಷದತ್ತ ಸೆಳೆಯುವ ನಿಟ್ಟಿನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ ಉಸ್ತುವಾರಿ ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

Santhosh Lad

ಸದ್ಯ ಧಾರವಾಡ ಜಿಲ್ಲೆಯಿಂದ ಸಚಿವ ಸ್ಥಾನಕ್ಕೆ ಕಲಘಟಗಿ ಶಾಸಕ ಸಂತೋಷ ಲಾಡ್, ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಹಾಗೂ ಧಾರವಾಡ-ಹುಬ್ಬಳ್ಳಿ ಪೂರ್ವ ಶಾಸಕ ಪ್ರಸಾದ ಅಬ್ಬಯ್ಯ ಅವರ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಕೊನೆಯಲ್ಲಿ ಸಂತೋಷ ಲಾಡ್ ಮಂತ್ರಿಯಾಗಿ ಆಯ್ಕೆಯಾದರು. ಆದರೆ ಜಿಲ್ಲೆಯ ಒಬ್ಬರೆ ಸಚಿವರಾಗಿ, ಉಸ್ತುವಾರಿ ಸಚಿವರಾಗಲೂ ಬಯಸಿರುವ ಲಾಡ್ ಬದಲಿಗೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಜಿಲ್ಲಾ ಉಸ್ತುವಾರಿ ನೀಡಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.

ಬೆಳಗಾವಿ ಜಿಲ್ಲೆಯಿಂದ ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ ಅವರಿಗೆ ಧಾರವಾಡ ಜಿಲ್ಲಾ ಉಸ್ತುವಾರಿಯನ್ನ ನೀಡಲುಕಾಂಗ್ರೆಸ್ ವರಿಷ್ಠರು ಸಹ ಅಂತಿಮ ತೀರ್ಮಾನ ತೆಗೆದುಕೊಂಡಿದ್ದಾರೆ ಎನ್ನಲಾಗಿದ್ದು, ಒಂದು ಸಚಿವ ಸ್ಥಾನ ಸಿಗದ ಹಾವೇರಿ ಜ ಜಿಲ್ಲೆಯ ಉಸ್ತುವಾರಿಯನ್ನು ಸಂತೋಷ ಲಾಡ್ ಅವರಿಗೆ ನೀಡಿಲಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+