Government employee; NPS ರದ್ದು, ಡಿಸೆಂಬರ್‌ನಲ್ಲಿ ಘೋಷಣೆ?

ಬೆಂಗಳೂರು, ನವೆಂಬರ್ 16: ಕರ್ನಾಟಕ ಸರ್ಕಾರದ ಮುಂದೆ ರಾಜ್ಯದ ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ ಮರು ಜಾರಿಗೊಳಿಸಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿಯೂ ಎನ್‌ಪಿಎಸ್ ರದ್ದು ಭರವಸೆಯನ್ನು ನೀಡಿತ್ತು.

ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸುವ ಕುರಿತು ಶೀಘ್ರದಲ್ಲಿಯೇ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸುವ ನಿರೀಕ್ಷೆ ಇದೆ. ಎಲ್ಲವೂ ಅಂದುಕೊಂಡತೆ ಆದರೆ ಡಿಸೆಂಬರ್‌ನಲ್ಲಿ ಈ ಕುರಿತು ಘೋಷಣೆಯಾಗಲಿದೆ.

karnataka-cancel-of-new-pension-scheme

ಸದ್ಯದ ಮಾಹಿತಿ ಪ್ರಕಾರ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಗಳು ಆರ್ಥಿಕ ಇಲಾಖೆಗೆ ಪತ್ರವನ್ನು ಬರೆದಿದ್ದಾರೆ. ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆ ಜಾರಿಗೆ ಅಗತ್ಯವಾದ ಪ್ರಕ್ರಿಯೆಗಳನ್ನು ಪ್ರಾರಂಭಿಸುವಂತೆ ಸೂಚನೆ ಕೊಟ್ಟಿದ್ದಾರೆ. ಆದ್ದರಿಂದ ಸರ್ಕಾರದ ಮಟ್ಟದಲ್ಲಿ ಸರ್ಕಾರಿ ನೌಕರರ ಬೇಡಿಕೆ ಈಡೇರಿಕೆ ಮಾಡಲು ಕೆಲಸಗಳು ಆರಂಭವಾಗಿವೆ.

ನೌಕರರ ವಿವಿರಗಳು; ಕರ್ನಾಟಕ ಸರ್ಕಾರದ ಆದೇಶದಂತೆ 2006ರ ಏಪ್ರಿಲ್‌ 1ರಂದು ಹೊಸ ಪಿಂಚಣಿ ಯೋಜನೆ ಜಾರಿಯಾಗಿದೆ. ಸುಮಾರು 2,65,715 ನೌಕರರು ಈ ವ್ಯಾಪ್ತಿಗೆ ಸೇರಿದ್ದಾರೆ. ಅಲ್ಲದೇ ಎನ್‌ಪಿಎಸ್ ಅಡಿ ಬರುವ 1169 ನೌಕರರು ಮೃತಪಟ್ಟಿದ್ದಾರೆ. 1463 ನೌಕರರು ನಿವೃತ್ತಿ ಹೊಂದಿದ್ದಾರೆ.

ಸರ್ಕಾರಿ ನೌಕರರು, ವಿವಿಧ ನೌಕರರ ಸಂಘಗಳ ಮೂಲಕ ಎನ್‌ಪಿಎಸ್ ರದ್ದುಗೊಳಿಸಬೇಕು ಎಂದು ಹೋರಾಟ ಮಾಡುತ್ತಲೇ ಬಂದಿವೆ. 2023ರ ಮಾರ್ಚ್‌ನಲ್ಲಿ ಸರ್ಕಾರಿ ನೌಕರರು ಮುಷ್ಕರ ಆರಂಭಿಸಿದಾಗ 7ನೇ ವೇತನ ಆಯೋಗದ ವರದಿ ಜಾರಿ, ಎನ್‌ಪಿಎಸ್ ರದ್ದುಗೊಳಿಸಬೇಕು ಎಂಬ ಎರಡು ಪ್ರಮುಖ ಬೇಡಿಕೆಯನ್ನು ಸರ್ಕಾರದ ಮುಂದೆ ಇಟ್ಟಿದ್ದರು.

ಕರ್ನಾಟಕ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿಯೂ ಎನ್‌ಪಿಎಸ್ ರದ್ದುಗೊಳಿಸುತ್ತೇವೆ ಎಂದು ಸರ್ಕಾರಿ ನೌಕರರಿಗೆ ಭರವಸೆ ನೀಡಿತ್ತು. ರಾಜಸ್ಥಾನ, ಹಿಮಾಚಲ ಪ್ರದೇಶ, ಛತ್ತೀಸ್‌ಗಢ ಮತ್ತು ಜಾರ್ಖಂಡ್ ರಾಜ್ಯಗಳಲ್ಲಿ ಎನ್‌ಪಿಎಸ್ ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೊಳಿಸಲಾಗಿದೆ. ಇದೇ ಮಾದರಿಯಲ್ಲಿ ಕರ್ನಾಟಕ ಸರ್ಕಾರ ಘೋಣಣೆ ಮಾಡಬೇಕು ಎಂಬುದು ನೌಕರರ ಒತ್ತಾಯವಾಗಿದೆ.

ರಾಜ್ಯ ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತರಾಮ ತೇಜ ನೇತೃತ್ವದ ನಿಯೋಗ ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿತ್ತು. ನೌಕರರ ಸಂಘದ ಬೃಹತ್ ಸಮಾವೇಶವನ್ನು ಡಿಸೆಂಬರ್‌ನಲ್ಲಿ ಆಯೋಜಿಸಲು ತಯಾರಿ ನಡೆಯುತ್ತಿದೆ. ಈ ಸಮಾವೇಶದಲ್ಲಿಯೇ ಮುಖ್ಯಮಂತ್ರಿಗಳು ಎನ್‌ಪಿಎಸ್ ರದ್ದು ಬಗ್ಗೆ ಘೋಷಣೆ ಮಾಡಬಹುದು ಎಂದು ಅಂದಾಜಿಸಲಾಗಿದೆ.

ಕರ್ನಾಟಕ ಸರ್ಕಾರ ಈಗಾಗಲೇ ನೌಕರರ ವೇತನ ಶ್ರೇಣಿ ಪರಿಷ್ಕರಣೆ ಮಾಡಲು ರಾಜ್ಯ 7ನೇ ವೇತನ ಆಯೋಗ ರಚನೆ ಮಾಡಿದೆ. ಸರ್ಕಾರಿ ನೌಕರರು, ನೌಕರರ ವಿವಿಧ ಸಂಘನೆಗಳು ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗಕ್ಕೆ ಹಳೆ ಪಿಂಚಣಿ ಯೋಜನೆ ಮರು ಜಾರಿಗೊಳಿಸಬೇಕು ಎನ್‌ಪಿಎಸ್ ರದ್ದುಗೊಳಿಸಲು ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಮನವಿ ಮಾಡಿವೆ.

ಕರ್ನಾಟಕ ಸರ್ಕಾರ ಕೆಲವು ದಿನಗಳ ಹಿಂದೆ ಕೇಂದ್ರ ಸರ್ಕಾರದ ನಿರ್ದೇಶನ ಹಾಗೂ ಮಾನದಂಡಗಳಿಗೆ ಒಳಪಡುವ ಕರ್ನಾಟಕ ಕೇಡರ್‌ನ 8 ಐಎಎಸ್, 7 ಐಪಿಎಸ್ ಹಾಗೂ ಒಬ್ಬರು ಐಎಫ್‌ಎಸ್ ಅಧಿಕಾರಿಗೆ ಹಳೆ ಪಿಂಚಣಿ ಯೋಜನೆ (ಒಪಿಎಸ್) ಸೌಲಭ್ಯ ನೀಡಿ ಆದೇಶ ಹೊರಡಿಸಿದೆ. ಈ ಆದೇಶ ಸರ್ಕಾರಿ ನೌಕರರಲ್ಲಿ ಹೊಸ ಭರವಸೆ ಮೂಡಿಸಿದೆ.

ಸರ್ಕಾರದ ಆದೇಶದ ಪ್ರಕಾರ ಈ ಅಧಿಕಾರಿಗಳ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ಖಾತೆಯು 2024 ಮಾ.31ಕ್ಕೆ ಮುಕ್ತಾಯಗೊಳ್ಳಲಿದೆ. ಕರ್ನಾಟಕ ಸರ್ಕಾರ ಡಿಸೆಂಬರ್‌ನಲ್ಲಿ ಎನ್‌ಪಿಎಸ್ ರದ್ದು ಕುರಿತು ಆದೇಶ ಹೊರಡಿಸಿ ಹೊಸ ವರ್ಷದಲ್ಲಿ ಅದನ್ನು ಜಾರಿಗೊಳಿಸಲಿದೆ ಎಂಬ ನಿರೀಕ್ಷೆಯಲ್ಲಿ ಸರ್ಕಾರಿ ಉದ್ಯೋಗಿಗಳು ಇದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+