ಲೋಕಸಭಾ ಚುನಾವಣೆ: ಹೆಚ್ಚು ಸ್ಥಾನ ಗೆಲ್ಲದಿದ್ದರೆ ಗ್ಯಾರಂಟಿಗಳನ್ನ ರದ್ದು ಮಾಡುವುದು ಒಳ್ಳೆಯದು: ಬಾಲಕೃಷ್ಣ

ರಾಮನಗರ, ಜನವರಿ 31: ರಾಜ್ಯದ ಜನರಿಗೆ ಐದು ಗ್ಯಾರಂಟಿ ಯೋಜನೆಗಳನ್ನು ಕೊಟ್ಟರೂ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಪಡೆಯದಿದ್ದರೆ ಗ್ಯಾರಂಟಿಗಳನ್ನು ರದ್ದು ಮಾಡುವುದೇ ಒಳ್ಳೆಯದು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಹೇಳಿದ್ದೇನೆ ಎಂದು ಮಾಗಡಿ ಶಾಸಕ ಎಚ್‌ ಸಿ ಬಾಲಕೃಷ್ಣ ಹೇಳಿದ್ದಾರೆ.

ಈ ಕುರಿತು ಮಾಗಡಿ ತಾಲೂಕಿನ ಶ್ರೀಗಿರಿಪುರದಲ್ಲಿ ಮಂಗಳವಾರ ನಡೆದ ಜನಸ್ಪಂದನ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಬರಬೇಕು. ಒಂದು ವೇಳೆ, ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ನಾವೇನಾದರೂ ಕಡಿಮೆ ಸ್ಥಾನ ಗಳಿಸಿದರೆ, ಜನ ಗ್ಯಾರಂಟಿಗಳನ್ನು ತಿರಸ್ಕರಿಸಿದ್ದಾರೆ ಎಂದರ್ಥ. ಆಗ ಅವುಗಳನ್ನು ರದ್ದು ಮಾಡಿ ನಾವೂ ಅವರಂತೆ ಮಂದಿರದ ರಾಜಕಾರಣ ಮಾಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

Cancellation Of Guarantee Scheme If Congress Did Not Win The Lok Sabha Polls Says HC Balakrishna

ಬಿಜೆಪಿಯ ಧರ್ಮ ರಾಜಕಾರಣದ ಮಂತ್ರಾಕ್ಷತೆ ಬೇಕೋ ಅಥವಾ ಜನಸಾಮಾನ್ಯರ ಜೀವನ ಬದಲಿಸುತ್ತಿರುವ ಕಾಂಗ್ರೆಸ್‌ನ ಗ್ಯಾರಂಟಿ ಬೇಕೊ ಎಂದು ಜನ ಈ ಚುನಾವಣೆಯಲ್ಲಿ ತೀರ್ಮಾನ ಮಾಡಬೇಕು. ನಾವೆಲ್ಲರೂ ಹಿಂದೂಗಳು. ಆದರೆ, ದೇವರು ಮತ್ತು ದೇವಸ್ಥಾನದ ಹೆಸರಿನಲ್ಲಿ ರಾಜಕಾರಣ ಮಾಡಿ ಮತ ಪಡೆಯೋದು ಸರಿಯಲ್ಲ. ಹಾಗಾಗಿ, ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ. ಅವುಗಳ ಆಧಾರದ ಮೇಲೆಯೇ ಜನರ ಬಳಿ ಮತ ಕೇಳುತ್ತೇವೆ ಎಂದು ಮಾಗಡಿ ಶಾಸಕ ಎಚ್‌ ಸಿ ಬಾಲಕೃಷ್ಣ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+