BPL Card: ರಾಜ್ಯದಲ್ಲಿ 4,00,000ಕ್ಕೂ ಅಧಿಕ ಬಿಪಿಎಲ್ ಕಾರ್ಡ್ ರದ್ದಿನ ಜೊತೆಗೆ ದಂಡಾಸ್ತ್ರದ ಪ್ರಯೋಗ..
BPL Card: ರಾಜ್ಯದಲ್ಲಿ ನಕಲಿ ದಾಳಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ ಎಪಿಎಲ್‌ಗೆ ವರ್ಗಾಹಿಸಲಾಗುತ್ತಿದೆ. ಇದೀಗ ಸರ್ಕಾರ ಒಂದೆಜ್ಜೆ ಮುಂದಿಟ್ಟಿದ್ದು, ನಾಲ್ಕು ಲಕ್ಷಕ್ಕೂ ಅಧಿಕ ಇಂತಹ ಬಿಪಿಎಲ್ ಪಡಿತರ ಚೀಟಿದಾರರಿಗೆ ದಂಡಾಸ್ತ್ರ ಪ್ರಯೋಗ ಮಾಡಲು ನಿರ್ಧರಿಸಿದೆ ಎನ್ನುವ ಶಾಕಿಂಗ್ ಸಂಗತಿ ಹೊರಬಿದ್ದಿದೆ. ಹಾಗಾದ್ರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸಾಮಾನ್ಯವಾಗಿ ಬಿಪಿಎಲ್ ಪಡಿತರ ಚೀಟಿಗಳನ್ನು ಬಡತನ ರೇಖೆಗಿಂತ ಕೆಳಗಿರುವವರಿಗೆ ನೀಡಲಾಗುತ್ತದೆ. ಆದರೆ, ಇದನ್ನು ಶ್ರೀಮಂತರು ಅಂದರೆ ಅನರ್ಹರು ಸಹ ಪಡೆದುಕೊಂಡಿದ್ದು, ಬಡವರ ಸಿಗಬೇಕಾದ ಅನ್ನ ಹಾಗೂ ಸರ್ಕಾರಿ ಸೌಲಭ್ಯಗಳನ್ನು ಕಿತ್ತುಕೊಳ್ಳುತ್ತಿದ್ದರು. ಇದೀಗ ಇದಕ್ಕೆ ಕಡಿವಾಣ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮುಂದುವರೆಸಿದೆ. ಈ ನಡುವೆಯೇ ಮತ್ತೊಂದು ಮಹತ್ವದ ನಿರ್ಣಯ ಕೈಗೊಳ್ಳಲು ಸಹ ನಿರ್ಧರಿಸಿದೆ.

ಇಷ್ಟು ದಿನ ಅನರ್ಹರ ಬಳಿಯಿದ್ದ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಲಾಗುತ್ತಿತ್ತು. ಇದೀಗ ಇದರ ಜೊತೆಗೆ ಅನರ್ಹರಿಗೆ ದಂಡಾಸ್ತ್ರವನ್ನು ಪ್ರಯೋಗ ಮಾಡಲು ನಿರ್ಧರಿಸಿದೆ ಎನ್ನುವ ಮಾಹಿತಿಯೊಂದು ಹೊರಬಿದ್ದಿದೆ. ರಾಜ್ಯಾದ್ಯಂತ ಸುಮಾರು 4.09 ಲಕ್ಷ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಗೊಳಿಸಲಾಗಿದ್ದು, ಎಪಿಎಲ್‌ಗೆ ವರ್ಗಾವಣೆ ಮಾಡಲಾಗಿದೆ.
ಕೇಂದ್ರ ಸರ್ಕಾರದ ಮಾನದಂಡದ ಪ್ರಕಾರ, ರಾಜ್ಯದಲ್ಲಿ ಅನರ್ಹರ ಬಳಿಯ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ ಎಪಿಎಲ್‌ಗೆ ವರ್ಗಾಹಿಸಲಾಗುತ್ತಿದೆ. ಹೀಗೆ ಕೇಂದ್ರದ ಮಾನದಂಡ ಉಲ್ಲಂಘಣೆ ಮಾಡಿ ಅನರ್ಹರರು ಪಡೆದುಕೊಂಡಿದ್ದ ಸುಮಾರು 4.09 ಲಕ್ಷ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಗೊಳಿಸಿ ಅವುಗಳನ್ನು ಎಪಿಎಲ್‌ಗೆ ಪರಿವರ್ತನೆ ಮಾಡಲಾಗಿದೆ.
ಜೊತೆಗೆ ಲಕ್ಷಾಂತರ ಸದಸ್ಯರ ಹೆಸರು ಡಿಲಿಟ್ ಮಾಡಲಾಗಿದೆ. ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆಯು ತೆರಿಗೆ ಪಾವತಿದಾರರು, ಹೆಚ್ಚುವರಿ ಕೃಷಿ ಭೂಮಿ ಹೊಂದಿರುವವರೂ ಸೇರಿದಂತೆ ಹಲವು ವರ್ಗದಲ್ಲಿ ನಾನಾ ಅನರ್ಹರನ್ನು ಗುರುತಿಸಿ, ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿದೆ. ಇನ್ನು ಅಕ್ರಮವಾಗಿ ಬಿಪಿಎಲ್ ಕಾರ್ಡ್‌ಗಳನ್ನು ಪಡೆದು ಸರ್ಕಾರದ ಪಡಿತರ ಯೋಜನೆಯ ಲಾಭ ಪಡೆದುಕೊಂಡಿರುವ ಫಲಾನುಭವಿಗಳಿಗೆ ದಂಡ ವಿಧಿಸುವ ಬಗ್ಗೆ ಆಹಾರ ಇಲಾಖೆ ನಿಯಮಗಳನ್ನು ರೂಪಿಸಲು ಈಗಾಗಲೇ ಸಿದ್ದತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಈಗಾಗಲೇ ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಅನರ್ಹರ ಬಳಿಯ ಬಿಪಿಎಲ್ ಪಡತರ ಚೀಟಿಗಳನ್ನು ರದ್ದುಪಡಿಸಲಾಗಿದೆ. ಇದಕ್ಕಂತಲೇ ಜಿಲ್ಲಾವಾರು ಸಿಬ್ಬಂದಿ ನೇಮಕ ಮಾಡಲಾಗಿದೆ. ಅದಂತೆಯೇ ಹುಡುಕಿ ಹುಡುಕಿ ಪರಿಶೀಲನೆ ನಡೆಸಿ ಅನರ್ಹರ ಬಳಿಯ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸುವ ಕಾರ್ಯ ಮುಂದುವರೆದಿದೆ. ಇನ್ನೂ ಕೆಲವೇ ದಿನಗಳಲ್ಲಿ ದಂಡಾಸ್ತ್ರ ಕೂಡ ಬರಲಿದ್ದು, ಅನರ್ಹರಿಗೆ ಎಪಿಎಲ್‌ಗೆ ವರ್ಗಾವಣೆ ಜೊತೆಗೆ ದಂಡ ಕೂಡ ವಿಧಿಸಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಈ ಹಿಂದೆಯೇ ಸರ್ಕಾರ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್‌ಗಳ ರದ್ದು ನಿರ್ಧಾರಕ್ಕೆ ಮುಂದಾಗಿತ್ತು. ಆದರೆ ಇದಕ್ಕೆ ವ್ಯಾಪಕ ಆಕ್ರೋಶಗಳು ಭುಗಿಲೆದ್ದ ಕಾರಣ ಈ ಕಾರ್ಯವನ್ನು ಅರ್ಧಕ್ಕೆ ನಿಲ್ಲಿಸಿತ್ತು. ಇದೀಗ ಮತ್ತೆ ಮುಂದುವರೆಸಿದ್ದು, ಪರಿಶೀಲನೆ ಮಾಡುವ ಮೂಲಕ ಅನರ್ಹರು ಎಂದು ತಿಳಿದುಬಂದ ಬಳಿಕ ಅಂತಹವರ ಬಳಿಯ ಬಿಪಿಎಲ್ ಕಾರ್ಡ್ ರದ್ದುಪಡಿಸಿ ಎಪಿಎಲ್‌ಗೆ ವರ್ಗಾವಣೆ ಮಾಡಲಾಗುತ್ತಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications