• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

2020-21ನೇ ಸಾಲಿನ ನೌಕರರ ಗಳಿಕೆ ರಜೆ ನಗದೀಕರಣ ರದ್ದುಗೊಳಿಸಿದ ಸರ್ಕಾರ

|

ಬೆಂಗಳೂರು, ಜನವರಿ 05: ಕರ್ನಾಟಕ ಸರ್ಕಾರವು 2020-21ನ ಸಾಲಿನ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಕರ್ನಾಟಕ ಸರ್ಕಾರವು ಪ್ರಸ್ತುತ ಕೋವಿಡ್-19 ಹಿನ್ನೆಲೆ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಕಾರಣ ಸರ್ಕಾರಿ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಸರ್ಕಾರದ ಈ ಆದೇಶವು ಸರ್ಕಾರದಿಂದ ಸಹಾಯಾನುದಾನ, ಅನುದಾನ ಪಡೆಯುವ ಅಥವಾ ಪಡೆಯದಿರುವ ಎಲ್ಲಾ ಕರ್ನಾಟಕ ಸರ್ಕಾರದ ಎಲ್ಲಾ ಉದ್ಯಮಗಳ ಸಂಸ್ಥೆಗಳ ನೌಕರರಿಗೂ ಅನ್ವಯಿಸುತ್ತದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ.

2021 ರ ಜನವರಿ ತಿಂಗಳಿಂದ ಡಿಸೆಂಬರ್ ಅಂತ್ಯದ ಅವಧಿಯಲ್ಲಿ ನಿವೃತ್ತಿ ಹೊಂದುವ ಎಲ್ಲಾ ಅರ್ಹ ನೌಕರರು, ಅಧಿಕಾರಿಗಳು, ಅವರು ನಿವೃತ್ತಿ ಹೊಂದುವ ತಿಂಗಳಲ್ಲಿ ಗಳಿಕೆ ರಜೆ ನಗದೀಕರಣ ಪ್ರಯೋಜನ ಪಡೆಯಲು ಅರ್ಹರಾಗಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಆದೇಶದ ಪ್ರಕಾರ 2021ನೇ ಸಾಲಿನ ಕ್ಯಾಲೆಂಡರ್ ವರ್ಷ ದಿನಾಂಕ 01-01-2021 ರಿಂದ 31-12-2021 ರವರೆಗಿನ ಅವಧಿಯಲ್ಲಿ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ರದ್ದುಗೊಳಿಸಲಾಗಿದೆ.

ಜತೆಗೆ ಈ ವರ್ಷ ನಿವೃತ್ತಿ ಹೊಂದುವ ಎಲ್ಲಾ ಅರ್ಹ ನೌಕರರು ಮತ್ತು ಅಧಿಕಾರಿಗಳು ನಿವೃತ್ತಿ ಹೊಂದುವ ತಿಂಗಳಿನಲ್ಲಿ ಗಳಿಕೆ ರಜೆ ನಗದೀಕರಣ ಪ್ರಯೋಜನ ಪಡೆಯಲು ಅರ್ಹರು ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

   ಗೋಲ್ಡ್ ಖರೀದಿ ಮಾಡೋರಿಗೆ ಶಾಕಿಂಗ್ ನ್ಯೂಸ್..! | Oneindia Kannada

   English summary
   Karnataka, which is under financial stress due to the Covid-19 pandemic, has cancelled the provision for government employees to encash their earned leaves in the 2021 calendar.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X