ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೋಮವಾರ ನಾಮಪತ್ರ ಸಲ್ಲಿಸುವ ವಿವಿಧ ಪಕ್ಷದ ಅಭ್ಯರ್ಥಿಗಳ ಪಟ್ಟಿ

|
Google Oneindia Kannada News

ಬೆಂಗಳೂರು, ಮಾರ್ಚ್ 24 : ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಕಣ ನಿಧಾನವಾಗಿ ರಂಗೇರುತ್ತಿದೆ. ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಾ.26 ಕೊನೆಯ ದಿನವಾಗಿದೆ. ಏಪ್ರಿಲ್ 18ರಂದು ಮತದಾನ ನಡೆಯಲಿದೆ.

ಮಾ.25ರ ಸೋಮವಾರ ವಿವಿಧ ಪಕ್ಷಗಳ ಹಲವು ನಾಯಕರು ಲೋಕಸಭಾ ಚುನಾವಣೆಗೆ ನಾಮಪತ್ರವನ್ನು ಸಲ್ಲಿಸಲಿದ್ದಾರೆ. ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಹಾಸನ : ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಆಸ್ತಿ, ಸಾಲ ವಿವರಹಾಸನ : ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಆಸ್ತಿ, ಸಾಲ ವಿವರ

14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 18ರಂದು ನಡೆಯಲಿದೆ. ನಾಮಪತ್ರಗಳನ್ನು ಸಲ್ಲಿಸಲು ಮಾರ್ಚ್ 26ರ ಮಂಗಳವಾರ ಕೊನೆಯ ದಿನವಾಗಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಅಂದು ಕಾಂಗ್ರೆಸ್‌ನ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಸುವರು.

ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಯುವ ಅಭ್ಯರ್ಥಿಗಳ ಜಿದ್ದಾಜಿದ್ದಿಗೆ ಅಖಾಡ ಸಿದ್ಧದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಯುವ ಅಭ್ಯರ್ಥಿಗಳ ಜಿದ್ದಾಜಿದ್ದಿಗೆ ಅಖಾಡ ಸಿದ್ಧ

ಬಿಜೆಪಿ ಮತ್ತು ಕಾಂಗ್ರೆಸ್ ಇನ್ನೂ ಹಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ. ಭಾನುವಾರ ಸಂಜೆ ಅಥವ ಸೋಮವಾರ ಅಭ್ಯರ್ಥಿಗಳ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಸೋಮವಾರ ನಾಮಪತ್ರ ಸಲ್ಲಿಸುವ ನಾಯಕರು ಯಾರು? ಇಲ್ಲಿದೆ ಮಾಹಿತಿ.....

ಬಿಜೆಪಿ ಪಟ್ಟಿ ಬಿಡುಗಡೆ: ಮಂಡ್ಯದಲ್ಲಿ ಸುಮಲತಾಗೆ ಬೆಂಬಲ ಘೋಷಣೆಬಿಜೆಪಿ ಪಟ್ಟಿ ಬಿಡುಗಡೆ: ಮಂಡ್ಯದಲ್ಲಿ ಸುಮಲತಾಗೆ ಬೆಂಬಲ ಘೋಷಣೆ

ನಿಖಿಲ್ ಕುಮಾರಸ್ವಾಮಿ

ನಿಖಿಲ್ ಕುಮಾರಸ್ವಾಮಿ

ಮಾ.25ರ ಸೋಮವಾರ ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ. ಮಂಡ್ಯದಲ್ಲಿ ಬೃಹತ್ ಜಾಥಾ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ.

ಎ.ಮಂಜು

ಎ.ಮಂಜು

ಹಾಸನ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎ.ಮಂಜು ಅವರು ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಇವರ ಎದುರಾಳಿ ಜೆಡಿಎಸ್-ಕಾಂಗ್ರೆಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ಮೆರವಣಿಗೆ ಮಹಾವೀರ ಸರ್ಕಲ್‌ನಿಂದ ಬೆಳಗ್ಗೆ 10.30ಕ್ಕೆ ಆರಂಭವಾಗಲಿದೆ.

ಸಿ.ಎಸ್.ದ್ವಾರಕಾನಾಥ್

ಸಿ.ಎಸ್.ದ್ವಾರಕಾನಾಥ್

ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಬಿಎಸ್ಪಿ ಅಭ್ಯರ್ಥಿಯಾಗಿ ಸಿ.ಎಸ್.ದ್ವಾರಕಾನಾಥ್ ಅವರು ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಗ್ಗೆ 9.30ಕ್ಕೆ ಚಿಕ್ಕಬಳ್ಳಾಪುರದ ಹೋಟೆಲ್ ದ್ವಾರಕಾ ಬಳಿಯಿಂದ ಮೆರವಣಿಗೆ ಆರಂಭವಾಗಲಿದೆ.

ಡಿ.ವಿ.ಸದಾನಂದ ಗೌಡ

ಡಿ.ವಿ.ಸದಾನಂದ ಗೌಡ

ಬೆಂಗಳೂರು ಉತ್ತರ ಕ್ಷೇತ್ರದಿಂದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಹಲವು ಬಿಜೆಪಿ ನಾಯಕರು ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಉಪಸ್ಥಿತರಿರುವರು.

ವೀರಪ್ಪ ಮೊಯ್ಲಿ

ವೀರಪ್ಪ ಮೊಯ್ಲಿ

ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ಕೇಂದ್ರದ ಮಾಜಿ ಸಚಿವ ಎಂ.ವೀರಪ್ಪ ಮೊಯ್ಲಿ ಅವರು ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ನಾಮಪತ್ರ ಸಲ್ಲಿಸಲಿದ್ದು, ಬಳಿಕ ಸಮಾವೇಶ ನಡೆಸಲಿದ್ದಾರೆ.

ರಿಜ್ವಾನ್ ಅರ್ಷದ್

ರಿಜ್ವಾನ್ ಅರ್ಷದ್

ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ರಿಜ್ವಾನ್ ಅರ್ಷದ್ ಅವರು ಸೋಮವಾರ ನಾಮಪತ್ರವನ್ನು ಸಲ್ಲಿಸಲಿದ್ದಾರೆ.

ಎಚ್.ಡಿ.ದೇವೇಗೌಡ

ಎಚ್.ಡಿ.ದೇವೇಗೌಡ

ತುಮಕೂರು ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ಎಚ್.ಡಿ.ದೇವೇಗೌಡರು ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ.

ತುಮಕೂರು ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರು ಸಹ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.

English summary
March 26, 2019 last date to submit nominations for the lok sabha elections 1st phase in Karnataka. On March 25 several candidates will file nominations. Here are the list.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X