ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರೋಗ್ಯ ಸೇತು ಆಪ್ ಇಲ್ಲದಿದ್ದರೆ ಸೌಲಭ್ಯ ನಿರಾಕರಿಸುವಂತಿಲ್ಲ: ಹೈಕೋರ್ಟ್ ಸ್ಪಷ್ಟ ನಿರ್ದೇಶನ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 20: ಆರೋಗ್ಯ ಸೇತು ಆಪ್ ಹೊಂದಿಲ್ಲ ಎಂಬ ಒಂದೇ ಕಾರಣಕ್ಕೆ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರದ ಯಾವುದೇ ಅಂಗಸಂಸ್ಥೆಗಳು ನಾಗರಿಕರಿಗೆ ಯಾವುದೇ ಸೌಲಭ್ಯ ಅಥವಾ ಸೇವೆಯನ್ನು ನಿರಾಕರಿಸುವಂತಿಲ್ಲ ಎಂದು ರಾಜ್ಯ ಹೈಕೋರ್ಟ್ ಹೇಳಿದೆ.

ಕೊರೊನಾ ವೈರಸ್ ನಿರ್ವಹಣೆಗೆ ನೆರವಾಗುವ ಉದ್ದೇಶದಿಂದ ರೂಪಿಸಿದ ಆರೋಗ್ಯ ಸೇತು ಮೊಬೈಲ್ ಆಪ್ ಅನ್ನು ಅನೇಕ ಸಂದರ್ಭಗಳಲ್ಲಿ ಕಡ್ಡಾಯವಾಗಿ ಇರಿಸಿಕೊಳ್ಳುವಂತೆ ಸೂಚಿಸಲಾಗುತ್ತಿದೆ. ಆದರೆ ಆರೋಗ್ಯ ಸೇತು ಆಪ್ ಬಳಸುತ್ತಿಲ್ಲ ಎಂಬ ಕಾರಣಕ್ಕೆ ಯಾವ ಪ್ರಜೆಗೂ ಸರ್ಕಾರದ ಸೌಲಭ್ಯ ನಿರಾಕರಿಸುವಂತಿಲ್ಲ ಎಂದು ಕೋರ್ಟ್ ಆದೇಶ ಹೊರಡಿಸಿದೆ.

ಆರೋಗ್ಯ ಸೇತು ಹ್ಯಾಕ್, ಕೇಂದ್ರ ಸರ್ಕಾರ ನೀಡಿದ ಉತ್ತರವೇನು?ಆರೋಗ್ಯ ಸೇತು ಹ್ಯಾಕ್, ಕೇಂದ್ರ ಸರ್ಕಾರ ನೀಡಿದ ಉತ್ತರವೇನು?

ಡಿಜಿಟಲ್ ಹಕ್ಕು ಹೋರಾಟಗಾರ ಅನಿವರ್ ಎ. ಅರವಿಂದ್ ಆರೋಗ್ಯ ಸೇತು ಆಪ್ ಕಡ್ಡಾಯ ಬಳಕೆ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. 'ಯಾವುದೇ ಆಪ್ ಬಳಕೆಯನ್ನು ಕಡ್ಡಾಯಗೊಳಿಸುವುದು ಖಾಸಗಿ ಹಕ್ಕು ಮತ್ತು ಇತರೆ ಮೂಲಭೂತ ಹಕ್ಕುಗಳ ಉಲ್ಲಂಘನೆ' ಎಂದು ಆರೋಪಿಸಿದ್ದರು.

 Cannot Deny Services Fir Not Installing Aarogya Setu App: Karnataka High Court

'ಆರೋಗ್ಯ ಸೇತು ಆಪ್ ಇಲ್ಲದ ಕಾರಣಕ್ಕೆ ಸರ್ಕಾರದಿಂದ ಲಭಿಸುವ ಯಾವುದೇ ಸೌಲಭ್ಯ ಅಥವಾ ಸೇವೆಯನ್ನು ನಿರಾಕರಿಸಬಾರದು ಮತ್ತು ಈ ಅರ್ಜಿಯ ವಿಚಾರಣೆ ಮುಗಿಯುವವರೆಗೂ ಆರೋಗ್ಯ ಸೇತು ಆಪ್‌ಗೆ ಸಂಬಂಧಿಸಿದ ಯಾವುದೇ ಯೋಜನೆಗಳನ್ನು ಸರ್ಕಾರ ಮುಂದುವರಿಸಬಾರದು' ಎಂದು ಮನವಿ ಮಾಡಿದ್ದರು.

'ಯಾವುದೇ ಸೇವೆ ಪಡೆಯಲು ಈ ಆಪ್ ಬಳಕೆ ಕಡ್ಡಾಯವಲ್ಲ ಎಂದು ರಾಷ್ಟ್ರೀಯ ಕಾರ್ಯಕಾರಿ ಮಂಡಳಿ ಸ್ಪಷ್ಟಪಡಿಸಿದೆ' ಎಂದು ಕೇಂದ್ರ ಸರ್ಕಾರದ ಪರ ವಕೀಲರು ಹೇಳಿದರು.

ಈ App ನಿಮ್ಹತ್ರ ಇಲ್ಲಾಂದ್ರೆ ಪೊಲೀಸರ ಕೆಂಗಣ್ಣಿಗೆ ಗುರಿಈ App ನಿಮ್ಹತ್ರ ಇಲ್ಲಾಂದ್ರೆ ಪೊಲೀಸರ ಕೆಂಗಣ್ಣಿಗೆ ಗುರಿ

'ಆದರೂ ಆಪ್ ಬಳಕೆಯನ್ನು ಕಡ್ಡಾಯಗೊಳಿಸಿ ಅನೇಕ ಸುತ್ತೋಲೆಗಳನ್ನು ಹೊರಡಿಸಲಾಗಿದೆ. ಕೇಂದ್ರ ಸರ್ಕಾರದ ಉದ್ಯೋಗಿಗಳು ಆರೋಗ್ಯ ಸೇತು ಆಪ್ ಬಳಸುವುದನ್ನು ಕಡ್ಡಾಯಗೊಳಿಸಿ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಸುತ್ತೋಲೆ ಹೊರಡಿಸಿದೆ' ಎಂದು ಅರ್ಜಿದಾರರು ನ್ಯಾಯಾಲಯದ ಗಮನಕ್ಕೆ ತಂದರು.

ಕೆಲವರ ಬಳಿ ಮೊಬೈಲ್ ಇಲ್ಲ, ಹಣವಿದ್ದವರೂ ಮೊಬೈಲ್ ಇರಿಸಿಕೊಳ್ಳದೆ ಇರಬಹುದು. ಅಂತಹವರಿಗೆ ಆರೋಗ್ಯ ಸೇತು ಆಪ್ ಹೇಗೆ ಕಡ್ಡಾಯ ಮಾಡುತ್ತೀರಿ? ಯಾವುದೇ ಸ್ಥಳದಲ್ಲಿ, ಯಾವುದೇ ಸೌಲಭ್ಯಕ್ಕಾಗಿ ಆಪ್ ಬಳಕೆಗೆ ಒತ್ತಾಯ ಮಾಡುವಂತಿಲ್ಲ ಎಂದು ಸೂಚಿಸಿದ ನ್ಯಾಯಾಲಯ, ಆಕ್ಷೇಪ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಕೊನೆಯ ಅವಕಾಶ ನೀಡಿ ವಿಚಾರಣೆಯನ್ನು ನವೆಂಬರ್ 10ಕ್ಕೆ ಮುಂದೂಡಿದೆ.

Recommended Video

ಹುಷಾರು!! ಇನ್ನು 3 ದಿನ ಮಳೆರಾಯನ ತಡಿಯೋಕ್ ಆಗಲ್ಲ | Oneindia Kannada

English summary
Karnataka High Court has directed the union government without law you cannot deny services for not installing Aarogya Setu app.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X