ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಒಬಿಸಿ, ದಲಿತರ ಬೆಂಬಲವಿಲ್ಲದೆ ಗೆಲುವು ಅಸಾಧ್ಯ: ಯಡಿಯೂರಪ್ಪ

By ವಿಕಾಸ್ ನಂಜಪ್ಪ
|
Google Oneindia Kannada News

Recommended Video

ಈ ಎರಡು ಸಮುದಾಯಗಳ ಸಹಾಯ ಇಲ್ಲದೆ ಗೆಲ್ಲಲು ಸಾಧ್ಯವಿಲ್ಲ, ಎಂದ ಬಿ ಎಸ್ ಯಡಿಯೂರಪ್ಪ | Oneindia Kannada

ಬೆಂಗಳೂರು, ಏಪ್ರಿಲ್ 12: ದಲಿತರು ಮತ್ತು ಹಿಂದುಳಿದವರ ಬೆಂಬಲವಿಲ್ಲದೆ ಕರ್ನಾಟಕ ವಿಧಾನಸಭೆ ಚುನಾವಣೆ -2018 ಗೆಲ್ಲುವುದು ಅಸಾಧ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬುಧವಾರ ದಿನಪೂರ್ತಿ ನಡೆದ ಚುನಾವಣಾ ಶಿಬಿರದಲ್ಲಿ ಮಾತನಾಡಿದ ಅವರು ಬಿಜೆಪಿ ಬಿಡುಗಡೆ ಮಾಡಿದ ಮೊದಲ ಪಟ್ಟಿಯಲ್ಲಿರುವ ಕನಿಷ್ಠ 68 ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಹೇಳಿದರು.

ಬಿಜೆಪಿ ಪಾಲಿಗೆ ಈ ಬಾರಿ ಕರ್ನಾಟಕದ ಚುನಾವಣೆ ಎಂಥ ಚದುರಂಗದಾಟ!ಬಿಜೆಪಿ ಪಾಲಿಗೆ ಈ ಬಾರಿ ಕರ್ನಾಟಕದ ಚುನಾವಣೆ ಎಂಥ ಚದುರಂಗದಾಟ!

ಅರಮನೆ ಮೈದಾನದಲ್ಲಿ ಬಿಜೆಪಿಯ ಚುನಾವಣಾ ರಣತಂತ್ರಗಳನ್ನು ವ್ಯವಸ್ಥಾಪನಾ ಸಮಿತಿಗೆ ವಿವರಿಸುವ ಸಲುವಾಗಿ ಈ ವರ್ಕ್ ಶಾಪ್ ಹಮ್ಮಿಕೊಳ್ಳಲಾಗಿತ್ತು. ಇದೇ ಸಂದರ್ಭದಲ್ಲಿ ಯಡಿಯೂರಪ್ಪ 152 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಏಪ್ರಿಲ್ 14ರ ಮೊದಲು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

Cannot win Karnataka election without support of Dalits, OBCs: Yeddyurappa

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಕಣಕ್ಕಿಳಿದರೆ ಅವರನ್ನು ಸೋಲಿಸಬಹುದು ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದಲಿತರನ್ನು, ಹಿಂದುಳಿದ ವರ್ಗದವರನ್ನು ಮತ್ತು ಮಹಿಳೆಯರನ್ನು ಹೆಚ್ಚೆಚ್ಚು ತಲುಪಿ. ಅವರ ಬೆಂಬಲವಿಲ್ಲದೆ ಕರ್ನಾಟಕದಲ್ಲಿ ಗೆಲುವು ಅಸಾಧ್ಯ ಎಂದು ಪಕ್ಷದ ಕಾರ್ಯಕರ್ತರಿಗೆ ಬಿಎಸ್ ವೈ ಕಿವಿಮಾತು ಹೇಳಿದ್ದಾರೆ.

English summary
The BJP’s chief ministerial candidate, B S Yeddyurappa has said that at least 68 candidates in the first list released by the party would win the Karnataka elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X