ಕಾರ್ ಅಪಘಾತ: ಏನೋ ತೊದರೆ ಇಲ್ಲ ಎಂದ ಕೇಂದ್ರ ಸಚಿವೆ ಸಾಧ್ವಿ ನಿರಂಜನ್
ನಾನು ಸಂಪೂರ್ಣವಾಗಿ ಆರಾಮಾಗಿದ್ದೇನೆ, ನನಗೆ ಸ್ವಲ್ಪ ಸ್ನಾಯು ನೋವಿದೆ. ಜನರು ನನ್ನ ಬಗ್ಗೆ ಚಿಂತಿಸಬೇಡಿ, ಚಾಲಕ ಸೇರಿದಂತೆ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಸಾಧ್ವಿ ನಿರಂಜನ್ ಹೇಳಿದ್ದಾರೆ.
ವಿಜಯಪುರ, ಮಾರ್ಚ್ 17: ಇಲ್ಲಿನ ಜುಮ್ನಾಳ್ ಗ್ರಾಮದ ಬಳಿ ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ಕೇಂದ್ರ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರು ಪ್ರಯಾಣಿಸುತ್ತಿದ್ದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದು ಗಾಯಗೊಂಡಿದ್ದು, ಘಟನೆಯಿಂದ ನನಗೇನು ಭಾರೀ ಪ್ರಮಾಣದ ತೊಂದರೆಯಾಗಿಲ್ಲ, ನಾನು ಆರಾಮಾಗಿದ್ದೇನೆ ಎಂದು ಸಾಧ್ವಿ ನಿರಂಜನ್ ಹೇಳಿದ್ದಾರೆ.
ಈ ವೇಳೆ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅವರು, ನಾನು ಸಂಪೂರ್ಣವಾಗಿ ಆರಾಮಾಗಿದ್ದೇನೆ, ನನಗೆ ಸ್ವಲ್ಪ ಸ್ನಾಯು ನೋವಿದೆ. ಜನರು ನನ್ನ ಬಗ್ಗೆ ಚಿಂತಿಸಬೇಡಿ, ಚಾಲಕ ಸೇರಿದಂತೆ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಹೇಳಿದರು.
ಪೊಲೀಸ್ ಮೂಲಗಳ ಪ್ರಕಾರ, ಮಹಿಳಾ ಸಮಾವೇಶದಲ್ಲಿ ಪಾಲ್ಗೊಂಡು ಸಚಿವರು ಬಾಗಲಕೋಟೆ ಜಿಲ್ಲೆಗೆ ತೆರಳುತ್ತಿದ್ದಾಗ ಅವರ ಕಾರಿಗೆ ಟ್ರಕ್ ಬಂದು ಗುದ್ದಿತ್ತು. ಘಟನೆಯಲ್ಲಿ ಸಚಿವರು ಮತ್ತು ಅವರ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ನಂತರ ಅವರನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಅವರು ಅಪಾಯದಿಂದ ಪಾರಾಗಿದ್ದರು. ಈ ಅಪಘಾತದ ನಂತರ ಎನ್‌ಎಚ್-50 ರ ಸಂಚಾರವು ಸ್ವಲ್ಪ ಸಮಯದವರೆಗೆ ಸ್ಥಗಿತಗೊಂಡಿತು. ಸಂಚಾರ ಪೊಲೀಸರು ಸ್ಥಳಕ್ಕೆ ಧಾವಿಸಿ ಸಂಚಾರ ಸುಗಮಗೊಳಿಸಿದರು.

ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ರಾಜ್ಯ ಸಚಿವರು ಟ್ವಿಟರ್‌ನಲ್ಲಿ ಆಕೆಯ ಅಪಘಾತದ ವಿವರಗಳನ್ನು ಹಂಚಿಕೊಂಡಿದ್ದರು ಮತ್ತು ತಾವು ಆರೋಗ್ಯವಾಗಿದ್ದಾರೆ ಎಂದು ಜನರಿಗೆ ಮಾಹಿತಿ ನೀಡಿದ್ದರು. ಅಪಘಾತದಿಂದಾಗಿ ತನ್ನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅವರು ಹೇಳಿದ್ದರು. ಘಟನೆ ಸಂಬಂಧ ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುರುವಾರ ರಾತ್ರಿ ಜುಮ್ನಾಳ್ ಗ್ರಾಮದ ಬಳಿ ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಮಿನಿ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಗಾಯಗೊಂಡಿದ್ದರು. ಪೊಲೀಸ್ ಮೂಲಗಳ ಪ್ರಕಾರ, ಮಹಿಳಾ ಸಮಾವೇಶದಲ್ಲಿ ಪಾಲ್ಗೊಂಡು ಸಚಿವರು ಬಾಗಲಕೋಟೆ ಜಿಲ್ಲೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿತ್ತು.
ಘಟನೆಯಲ್ಲಿ ಸಚಿವರು ಮತ್ತು ಅವರ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ನಂತರ ಅವರನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಅವರು ಅಪಾಯದಿಂದ ಪಾರಾಗಿದ್ದರು. ಈ ಅಪಘಾತದ ನಂತರ NH-50 ರ ಸಂಚಾರವು ಸ್ವಲ್ಪ ಸಮಯದವರೆಗೆ ಸ್ಥಗಿತಗೊಂಡಿತು. ಸಂಚಾರ ಪೊಲೀಸರು ಸ್ಥಳಕ್ಕೆ ಧಾವಿಸಿ ಸಂಚಾರ ಸುಗಮಗೊಳಿಸಿದರು.

ಗುರುವಾರ ಬಿಜೆಪಿಯಿಂದ ಮಹಿಳಾ ಸಮಾವೇಶ ಹಾಗೂ ಇತರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಕೇಂದ್ರ ಸಚಿವೆ ಬಳಿಕ ಬಾಗಲಕೋಟೆಯತ್ತ ಪ್ರಯಾಣ ಬೆಳೆಸುತ್ತಿದ್ದಾಗ ಈ ಅಪಘಾತ ನಡೆದಿತ್ತು. ಕಾರ್ಯಕ್ರಮದಲ್ಲಿ ಅವರು ತಮ್ಮ ತಾಯಿಗೆ ಅಪಮಾನ ಮಾಡಿದರೆ ಯಾರೂ ಸಹಿಸರು. ರಾಹುಲ್ ಗಾಂಧಿ ವಿದೇಶದಲ್ಲಿ ಭಾರತವನ್ನು ಅಪಮಾನ ಮಾಡಿದ್ದನ್ನು ಕ್ಷಮಿಸಲು ಸಾಧ್ಯವೇ? ಅಪಾಯದಲ್ಲಿರುವುದು ಸಂವಿಧಾನವಲ್ಲ ಬದಲಿಗೆ ಕಾಂಗ್ರೆಸ್‌ಗೆ ಅವನತಿಯ ಅಪಾಯ ಎದುರಾಗಿದೆ ಎಂದು ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಟೀಕೆ ಮಾಡಿದ್ದರು.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ ಹೇರಿದ್ದಾಗ ಸಿಖ್ ಸಮುದಾಯದವರ ದಾರುಣ ಕೊಲೆ, ಗೋರಕ್ಷಕರ ಮೇಲೆ ಗುಂಡಿನ ದಾಳಿ ನಡೆದಾಗ ಸಂವಿಧಾನ ಅಪಾಯದಲ್ಲಿದ್ದಿದ್ದು ರಾಹುಲ್ ಗಾಂಧಿಗೆ ನೆನಪಾಗಲಿಲ್ಲವೇ ಎಂದು ಅವರು ಕಾರ್ಯಕ್ರಮದಲ್ಲಿ ಪಶ್ನಿಸಿದ್ದರು.












Click it and Unblock the Notifications