ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರದ ವಿರುದ್ಧ ಮಾನವ ಹಕ್ಕು ಆಯೋಗದಲ್ಲಿ ಪ್ರಕರಣ ದಾಖಲು

|
Google Oneindia Kannada News

ಬೆಂಗಳೂರು, ಆಗಸ್ಟ್ 02: ಕರ್ನಾಟಕ ಸರ್ಕಾರದ ವಿರುದ್ಧ ರಾಜ್ಯ ಮಾನವ ಹಕ್ಕುಗಳ ಆಯೋಗ ಪ್ರಕರಣ ದಾಖಲು ಮಾಡಿಕೊಂಡಿದೆ. ಕೋವಿಡ್ -19 ಪರಿಸ್ಥಿತಿ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ ಎಂಬ ಆರೋಪದಡಿ ಪ್ರಕರಣ ದಾಖಲಾಗಿದೆ.

ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎಚ್. ಕೆ. ಪಾಟೀಲ್ ನೀಡಿದ ದೂರಿನ ಅನ್ವಯ ಪ್ರಕರಣವನ್ನು ದಾಖಲು ಮಾಡಿಕೊಳ್ಳಲಾಗಿದೆ. ಆಗಸ್ಟ್ 28ರಂದು ಈ ಕುರಿತ ಮೊದಲ ವಿಚಾರಣೆ ನಡೆಯಲಿದೆ.

ಶವ ಹಸ್ತಾಂತರ: ಕೋವಿಡ್ ವೈದ್ಯರಿಂದ ಮತ್ತೊಂದು ಎಡವಟ್ಟುಶವ ಹಸ್ತಾಂತರ: ಕೋವಿಡ್ ವೈದ್ಯರಿಂದ ಮತ್ತೊಂದು ಎಡವಟ್ಟು

ಕೋವಿಡ್ ಪರಿಸ್ಥಿತಿ ನಿರ್ವಹಣೆಯಲ್ಲಿ ಭ್ರಷ್ಟಾಚಾರ ನಡೆದಿದೆ. ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ಸಕಾಲಕ್ಕೆ ಅಂಬ್ಯುಲೆನ್ಸ್‌ಗಳು ಸಿಗುತ್ತಿಲ್ಲ ಎಂದು ಎಚ್. ಕೆ. ಪಾಟೀಲ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದರು.

 ಬಳ್ಳಾರಿಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ ಕೊರೊನಾ ಸೋಂಕಿತ ಮಹಿಳೆ ಬಳ್ಳಾರಿಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ ಕೊರೊನಾ ಸೋಂಕಿತ ಮಹಿಳೆ

Case Against Karnataka Govt At KSHRC

ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕೊರೊನಾ ವಾರಿಯರ್ಸ್‌ಗೆ ಸರಿಯಾದ ಪಿಪಿಇ ಕಿಟ್ ವ್ಯವಸ್ಥೆ ಇಲ್ಲ ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಕೋವಿಡ್ ಭ್ರಷ್ಟಾಚಾರ: ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಒತ್ತಾಯಕೋವಿಡ್ ಭ್ರಷ್ಟಾಚಾರ: ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಒತ್ತಾಯ

ಬಳ್ಳಾರಿ, ರಾಯಚೂರು, ದಾವಣಗೆರೆ ಮತ್ತು ಬೆಂಗಳೂರಿನಲ್ಲಿ ಕೋವಿಡ್ -19ನಿಂದ ಮೃತಪಟ್ಟ ರೋಗಿಗಳ ಅಂತ್ಯ ಸಂಸ್ಕಾರವನ್ನು ಸರಿಯಾಗಿ ನಡೆಸಿಲ್ಲ. ವ್ಯಕ್ತಿಗೆ ಕೊಡಬೇಕಾದ ಕನಿಷ್ಠ ಗೌರವವನ್ನು ನೀಡಿಲ್ಲ ಎಂದು ಆರೋಪಿಸಿದ್ದರು.

ಕರ್ನಾಟಕದಲ್ಲಿ ಶನಿವಾರ 5172 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1,29,287ಕ್ಕೆ ಏರಿಕೆಯಾಗಿದೆ.

English summary
The Karnataka State Human Rights Commission (KSHRC) registered the case against Karnataka government for human rights violations in handling COVID 19 in state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X