ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಸಕ ಕೃಷ್ಣಾರೆಡ್ಡಿ ವಿರುದ್ಧದ ಪ್ರಕರಣ ಸಿಐಡಿಗೆ

By Ashwath
|
Google Oneindia Kannada News

krishna reddy mla
ಬೆಂಗಳೂರು, ಜು.2: ಚಿಂತಾಮಣಿ ಶಾಸಕ ಎಂ. ಕೃಷ್ಣಾರೆಡ್ಡಿ ಅವರ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವುದಾಗಿ ಗೃಹ ಸಚಿವ ಕೆ.ಜೆ. ಜಾರ್ಜ್ ಅವರು ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ವಿಧಾನ ಸಭೆಯಲ್ಲಿ ನಿಯಮ 69 ರ ಮೇರೆಗೆ ಅಲ್ಪ ಕಾಲಾವಧಿ ಚರ್ಚೆಯ ಸಂದರ್ಭದಲ್ಲಿ ಶಾಸಕ ವೈ.ಎಸ್.ವಿ.ದತ್ತ ಅವರು ಮಾತನಾಡಿ, ಸಾರ್ವಜನಿಕ ಆಸ್ತಿಯನ್ನು ರಕ್ಷಿಸುವ ಸಂಬಂಧದಲ್ಲಿ ಕಾರ್ಯನಿರತರಾಗಿದ್ದ ವಿಧಾನಸಭೆ ಸದಸ್ಯ ಎಂ. ಕೃಷ್ಣಾರೆಡ್ಡಿ ಅವರ ಮೇಲೆ ಸುಳ್ಳು ಕೊಲೆ ಮೊಕದ್ದಮೆ ದಾಖಲಿಸಲಾಗಿದೆ. ತಹಸೀಲ್ದಾರರ ದೂರಿನ ಮೇರೆಗೆ ಈ ಪ್ರಕರಣ ದಾಖಲಿಸಲಾಗಿದ್ದು, ಇದರ ನಿಷ್ಪಕ್ಷಪಾತ ತನಿಖೆಯಾಗಬೇಕು. ಅದಕ್ಕಾಗಿ ಈ ಪ್ರಕರಣವನ್ನು ಸಿಐಡಿಗೆ ವಹಿಸಬೇಕು ಎಂದು ಒತ್ತಾಯಿಸಿದ್ದರು.[ಪೊಲೀಸ್ ಪೇದೆಗಳಿಗೆ ಥಳಿಸಿದ ಹುನಗುಂದ ಶಾಸಕ]

ಇದಕ್ಕೆ ಉತ್ತರ ನೀಡಿದ ಗೃಹ ಸಚಿವರು ಕೃಷ್ಣಾರೆಡ್ಡಿ ಅವರ ವಿರುದ್ಧ ಯಾವುದೇ ಕೊಲೆ ಪ್ರಕರಣ ದಾಖಲಾಗಿಲ್ಲ. ಜನರನ್ನು ಪ್ರಚೋದಿಸಿ ಸರ್ಕಾರಿ ಸ್ಥಳದಲ್ಲಿ ಮೃತನ ಶವವನ್ನು ದಫನ್ ಮಾಡಲು ಪ್ರಚೋದಿಸಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು ಎಂದು ಮಾಹಿತಿ ನೀಡಿದರು. ನಂತರ ಈ ಪ್ರಕರಣವನ್ನು ಸಿಐಡಿಗೆ ನೀಡುವುದಾಗಿ ತಿಳಿಸಿದರು.

English summary
Home Minister K.J. George on Tuesday announced in the Legislative Assembly that the case registered against Chintamani MLA M. Krishna Reddy will be handed over to the Crime Investigation Department (CID) for an impartial probe.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X