ವಿಧಾನಸೌಧದಲ್ಲಿ ಹಣ ಪತ್ತೆ ಕೇಸ್ : ಜಾಮೀನು ಅರ್ಜಿ ವಿಚಾರಣೆ ಪೂರ್ಣ

ಬೆಂಗಳೂರು, ಮಾರ್ಚ್ 07 : ಮೋಹನ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್‌ ತೀರ್ಪನ್ನು ಕಾಯ್ದಿರಿಸಿದೆ. ಲೋಕಾಯುಕ್ತ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

ವಿಧಾನಸೌಧದಲ್ಲಿ 25.7 ಲಕ್ಷ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಹನ್ ಕುಮಾರ್‌ನನ್ನು ಎಸಿಬಿ ಬಂಧಿಸಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗ ಶೆಟ್ಟಿ ಅವರ ಕಚೇರಿಯಲ್ಲಿ ಮೋಹನ್ ಕುಮಾರ್ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದ.

ಜನವರಿ 4ರಂದು ವಿಧಾನಸೌಧದ ಆವರಣದಲ್ಲಿ ಹಣ ಸಾಗಣೆ ಮಾಡುತ್ತಿದ್ದಾಗ ವಿಧಾನಸೌಧ ಠಾಣೆ ಪೊಲೀಸರು ಮೋಹನ್ ಕುಮಾರ್ ಬಂಧಿಸಿದ್ದರು. ಬಳಿಕ ಈ ಪ್ರಕರಣವನ್ನು ಎಸಿಬಿಗೆ ವರ್ಗಾವಣೆ ಮಾಡಲಾಗಿತ್ತು.

Cash seizure at Vidhanasoudha : HC reserves bail plea order of Mohan Kumar

ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಮೋಹನ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು. ಆದ್ದರಿಂದ, ಕರ್ನಾಟಕ ಹೈಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಸಲಾಗಿದೆ.

ವಿಧಾನಸೌಧದಲ್ಲಿ ಸಿಕ್ಕ 25.7 ಲಕ್ಷ ಹಣ ಸಚಿವ ಪುಟ್ಟರಂಗ ಶೆಟ್ಟಿ ಅವರಿಗೆ ಸೇರಿದ್ದು ಎಂದು ಶಂಕಿಸಲಾಗಿದೆ. ಗುತ್ತಿಗೆದಾರರು ಸಚಿವರಿಗೆ ತಲುಪಿಸಲು ಮೋಹನ್ ಕುಮಾರ್ ಬಳಿ ಹಣ ಕೊಟ್ಟಿದ್ದರು ಎಂಬ ಶಂಕೆ ಇದ್ದು, ಎಸಿಬಿ ಈ ಕುರಿತು ತನಿಖೆ ನಡೆಸುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+