ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನಸೌಧದಲ್ಲಿ ಹಣ ಪತ್ತೆ ಕೇಸ್ : ಜಾಮೀನು ಅರ್ಜಿ ವಿಚಾರಣೆ ಪೂರ್ಣ

|
Google Oneindia Kannada News

ಬೆಂಗಳೂರು, ಮಾರ್ಚ್ 07 : ಮೋಹನ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್‌ ತೀರ್ಪನ್ನು ಕಾಯ್ದಿರಿಸಿದೆ. ಲೋಕಾಯುಕ್ತ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

ವಿಧಾನಸೌಧದಲ್ಲಿ 25.7 ಲಕ್ಷ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಹನ್ ಕುಮಾರ್‌ನನ್ನು ಎಸಿಬಿ ಬಂಧಿಸಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗ ಶೆಟ್ಟಿ ಅವರ ಕಚೇರಿಯಲ್ಲಿ ಮೋಹನ್ ಕುಮಾರ್ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದ.

ವಿಧಾನಸೌಧದಲ್ಲಿ ಹಣ ಸಿಕ್ಕ ಪ್ರಕರಣಕ್ಕೆ ಸ್ಫೋಟಕ ತಿರುವು!ವಿಧಾನಸೌಧದಲ್ಲಿ ಹಣ ಸಿಕ್ಕ ಪ್ರಕರಣಕ್ಕೆ ಸ್ಫೋಟಕ ತಿರುವು!

ಜನವರಿ 4ರಂದು ವಿಧಾನಸೌಧದ ಆವರಣದಲ್ಲಿ ಹಣ ಸಾಗಣೆ ಮಾಡುತ್ತಿದ್ದಾಗ ವಿಧಾನಸೌಧ ಠಾಣೆ ಪೊಲೀಸರು ಮೋಹನ್ ಕುಮಾರ್ ಬಂಧಿಸಿದ್ದರು. ಬಳಿಕ ಈ ಪ್ರಕರಣವನ್ನು ಎಸಿಬಿಗೆ ವರ್ಗಾವಣೆ ಮಾಡಲಾಗಿತ್ತು.

ವಿಧಾನಸೌಧದಲ್ಲಿ ಹಣ ಪತ್ತೆ : ಆರೋಪಿ ಪೊಲೀಸ್ ವಶಕ್ಕೆ, ಜಾಮೀನು ಇಲ್ಲವಿಧಾನಸೌಧದಲ್ಲಿ ಹಣ ಪತ್ತೆ : ಆರೋಪಿ ಪೊಲೀಸ್ ವಶಕ್ಕೆ, ಜಾಮೀನು ಇಲ್ಲ

Cash seizure at Vidhanasoudha : HC reserves bail plea order of Mohan Kumar

ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಮೋಹನ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು. ಆದ್ದರಿಂದ, ಕರ್ನಾಟಕ ಹೈಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಸಲಾಗಿದೆ.

ವಿಧಾನಸೌಧದಲ್ಲಿ ಹಣ ಪತ್ತೆ : ಎಸಿಬಿಯಿಂದ ಮೋಹನ್ ಬಂಧನವಿಧಾನಸೌಧದಲ್ಲಿ ಹಣ ಪತ್ತೆ : ಎಸಿಬಿಯಿಂದ ಮೋಹನ್ ಬಂಧನ

ವಿಧಾನಸೌಧದಲ್ಲಿ ಸಿಕ್ಕ 25.7 ಲಕ್ಷ ಹಣ ಸಚಿವ ಪುಟ್ಟರಂಗ ಶೆಟ್ಟಿ ಅವರಿಗೆ ಸೇರಿದ್ದು ಎಂದು ಶಂಕಿಸಲಾಗಿದೆ. ಗುತ್ತಿಗೆದಾರರು ಸಚಿವರಿಗೆ ತಲುಪಿಸಲು ಮೋಹನ್ ಕುಮಾರ್ ಬಳಿ ಹಣ ಕೊಟ್ಟಿದ್ದರು ಎಂಬ ಶಂಕೆ ಇದ್ದು, ಎಸಿಬಿ ಈ ಕುರಿತು ತನಿಖೆ ನಡೆಸುತ್ತಿದೆ.

English summary
Karnataka High Court has reserved its order in the bail plea filed by Mohan Kumar. Mohan Kumar typist in the office of the Backward Classes Welfare Minister Puttaranga Shetty arrested by ACB in connection with the Cash seizure case at Vidhanasoudha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X