ವಿಧಾನಸೌಧದಲ್ಲಿ ಹಣ ಪತ್ತೆ : ಮತ್ತೊಬ್ಬ ವ್ಯಕ್ತಿ ಎಸಿಬಿ ವಶಕ್ಕೆ
ಬೆಂಗಳೂರು, ಜನವರಿ 10 : ವಿಧಾನಸೌಧದಲ್ಲಿ 25.7 ಲಕ್ಷ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ವ್ಯಕ್ತಿಯನ್ನು ಎಸಿಬಿ ವಶಕ್ಕೆ ಪಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಮೋಹನ್ ಕುಮಾರ್ ಈಗಾಗಲೇ ಎಸಿಬಿ ವಶದಲ್ಲಿದ್ದಾರೆ.
ದಾವಣಗೆರೆ ಮೂಲದ ಮಂಜು ಅಲಿಯಾಸ್ ಸಿದ್ದು ಎಂಬಾತನನ್ನು ಎಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗ ಶೆಟ್ಟಿ ಆಪ್ತ ಸಹಾಯಕರಾಗಿ ಮಂಜು ಕೆಲಸ ಮಾಡುತ್ತಿದ್ದರು.

ಮಂಜು ಅವರು ಸಿ.ಪುಟ್ಟರಂಗ ಶೆಟ್ಟಿ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ಕೆಲವು ದಿನಗಳ ಹಿಂದೆ ಅವರನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತು. ಎಸಿಬಿ ಪೊಲೀಸರು ಮಾಹಿತಿ ಸಂಗ್ರಹಿಸುವ ಉದ್ದೇಶಿದಿಂದ ಅವರನ್ನು ವಶಕ್ಕೆ ಪಡೆದಿದ್ದಾರೆ.
ಸಚಿವರಿಗೆ ಹಿನ್ನಡೆ : ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗ ಶೆಟ್ಟಿ ಅವರು ತಮ್ಮ ವಿರುದ್ಧ ಪ್ರಸಾರವಾಗುತ್ತಿರುವ ಏಕಪಕ್ಷೀಯ ಸುದ್ದಿಗಳಿಗೆ ತಡೆ ನೀಡಬೇಕು ಎಂದು ಸಿಟಿ ಸಿವಿಲ್ ಕೋರ್ಟ್ ಮೊರೆ ಹೋಗಿದ್ದರು.
ಗುರುವಾರ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಮಾಧ್ಯಮಗಳಿಗೆ ನೋಟಿಸ್ ನೀಡಿದೆ. ಆದರೆ, ಸುದ್ದಿ ಪ್ರಸಾರಕ್ಕೆ ತಡೆ ನೀಡಲು ನಿರಾಕರಿಸಿದೆ.












Click it and Unblock the Notifications