ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌: ಆರೋಗ್ಯ ಯೋಜನೆ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ಸಿದ್ದರಾಮಯ್ಯ

ಬೆಂಗಳೂರು, ಜೂನ್‌ 20: ರಾಜ್ಯ ಕರ್ನಾಟಕ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಶುಭ ಸುದ್ದಿಯನ್ನ ನೀಡಿದೆ. ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸುಮಾರು 3 ಲಕ್ಷ ಸಿಬ್ಬಂದಿಗಳು ಮತ್ತು ಅವರ ಅವಲಂಬಿತರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾರ್ಷಿಕವಾಗಿ 5.00 ಲಕ್ಷಗಳವರೆಗೆ ನಗದು ರಹಿತ ಆರೋಗ್ಯ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಿಬ್ಬಂದಿಗಳಿಂದ ಮಾಸಿಕ 100 ರೂ.ಗಳ ವಂತಿಗೆ ಮತ್ತು ಸರ್ಕಾರದಿಂದ ಉಳಿಕೆ ಹಣವನ್ನು ಭರಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳ ಕುರಿತು ತಿರ್ಮಾನವನ್ನ ಸರ್ಕಾರ ತೆಗೆದುಕೊಂಡಿದೆ. ಈ ಕುರಿತು ಕಾನೂನು ಸಚಿವರಾ ಹೆಚ್‌ ಕೆ ಪಾಟೀಲ್‌ ಅವರು ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ನೋಂದಣಿ ಸಂಘಗಳ ಕಾಯ್ದೆ 1960ರ ಪ್ರಕಾರ ಸಂಘಗಳಾಗಿ ನೋಂದಾಯಿಸಲಾದ ಆರೋಗ್ಯ ರಕ್ಷಾ ಸಮಿತಿಗಳು (ಎ.ಆರ್.ಎಸ್) ಆಡಳಿತ/ ಸಾಮಾನ್ಯ ಸಭೆಯ ಸದಸ್ಯರನ್ನು ನಾಮನಿರ್ದೇಶನ ಮಾಡುವ ಅಧಿಕಾರದಲ್ಲಿನ ಬದಲಾವಣೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

Cashless health scheme for government employees approved

ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಪಾಶ್ವವಾಯು ಮತ್ತು ತಲೆಗೆ ತೀವ್ರ ಪೆಟ್ಟಾದ ರೋಗಿಗಳ ಆರೈಕೆಗಾಗಿ ಹಬ್ ಮತ್ತು ಸ್ಪೋಕ್ ಮಾದರಿಯಲ್ಲಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಮೊದಲ ಹಂತದಲ್ಲಿ ಸ್ಪೋಕ್ ಆಗಿ ಕಾರ್ಯನಿರ್ವಹಿಸುವ ಯೋಜನೆಯ 12.87 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಕಂದಾಯ ಇಲಾಖೆಯಡಿ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಬಸಾಪೂರ ಗ್ರಾಮದ ಹೆಸರನ್ನು ಗೇರುಗುಟ್ಟ ಬಸಾಪೂರ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಆನರು ಮೊದಲಿನಿಂದ ಗೇರುಗುಡ್ಡ ಬಸಾಪೂರ ಎಂದು ಕರೆಯುತ್ತಿದ್ದ ಹಿನ್ನೆಲೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಚಿವ ಹೆಚ್. ಕೆ.ಪಾಟೀಲ್ ತಿಳಿಸಿದರು.

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಅಪರ ನಿಬಂಧಕರು (ವಿಚಾರಣೆಗಳು) ಹುದ್ದೆಗೆ ರಮಾಕಾಂತ ಚವ್ಹಾಣ, ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರನ್ನು ನೇಮಕ ಮಾಡಲು ಸಚಿವ ಸಂಪುಟ ನಿರ್ಧರಿಸಿದೆ.

ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯಡಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಸಮುದ್ರ ತೀರದ 6 ಕಿ.ಮೀ ವರೆಗಿನ ಪ್ರದೇಶ ಹಾಗೂ ಅರಣ್ಯ ಪ್ರದೇಶವನ್ನೊಳಗೊಂಡಂತೆ ಒಟ್ಟು 5959.322 ಹೆಕ್ಟೇರ್ ಪ್ರದೇಶವನ್ನು ಅಪ್ಸರಕೊಂಡ- ಮುಗಲಿ ಕಡಲ ವನ್ಯ ಜೀವಿಧಾಮ ಎಂದು ಘೋಷಿಸಲು ಸಚಿವ ಸಂಪುಟ ನಿರ್ಧರಿಸಿದೆ.

ಕಡಲ ವನ್ಯಜೀವಿ ಧಾಮದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ಹಾಗೂ ಮೀನುಗಾರರ ದೋಣಿಗ ಪ್ರವೇಶಕ್ಕೆೆ ನಿರ್ಭಂಧವಿಲ್ಲ. ಅಲ್ಲಿನ ಜನರ ಅಸ್ತಿತ್ವದಲ್ಲಿರುವ ಹಕ್ಕುಗಳಿಗೆ ಯಾವುದೇ ನಿರ್ಭಂಧವಿಲ್ಲ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ 8.21 ಕಿ.ಮೀ ಸಮುದ್ರ ತೀರದ ಆರು ಕಿ.ಮೀ ಸಮುದ್ರದವರೆಗಿನ ಪ್ರದೇಶ ಹಾಗೂ 835 ಹೆಕ್ಟೇರ್ ಅರಣ್ಯ ಪ್ರದೇಶವನ್ನು ಒಳಗೊಂಡಂತೆ ಅಪ್ಸರಕೊಂಡ ಮುಗಲಿ ಕಡಲ ವನ್ಯ ಜೀವಿಧಾಮ ಎಂದು ಘೋಷಿಸಲಾಗಿದೆ. ನೀರನ ಜೀವಿಗಳ ರಕ್ಷಣೆಯ ಪ್ರಮುಖ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+