Get Updates
Get notified of breaking news, exclusive insights, and must-see stories!

ಕೇಂದ್ರದಿಂದ ಜಾತಿಗಣತಿಗೆ ಅಸ್ತು: ಸಿಎಂ ಸಿದ್ದರಾಮಯ್ಯ ನೀಡಿದ ಸಲಹೆಗಳೇನು?

ಬೆಂಗಳೂರು, ಏಪ್ರಿಲ್‌ 30: ಮುಂದಿನ ಜನ ಗಣತಿಯ ಜೊತೆಯಲ್ಲಿ ಜಾತಿಗಣತಿಯೂ ಒಂದು ಭಾಗವಾಗಿರಲಿದೆ. ರಾಷ್ಟ್ರೀಯ ಜನ ಗಣತಿಯಲ್ಲಿ ಜಾತಿ ಜನಗಣತಿಯನ್ನು ಸಹ ಪಾರದರ್ಶಕ ರೀತಿಯಲ್ಲಿ ನಡೆಸಿ, ವರದಿಯಲ್ಲಿ ಸೇರಿಸಲಾಗುವುದು ಎಂದು ಕೇಂದ್ರ ಸರ್ಕಾರ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ.

ಈ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಜನ ಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಬಿಜೆಪಿ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು ಕೇಂದ್ರ ಸರ್ಕಾರವನ್ನು ಆಗ್ರಹಪಡಿಸುತ್ತಿದ್ದೇನೆ ಎಂದಿದ್ದಾರೆ.

Caste Census in India Siddaramaiah s Response to Central Government s Decision

ಕರ್ನಾಟಕದಲ್ಲಿ ನಾವು ಕೇವಲ ಜಾತಿ ಗಣತಿ ನಡೆಸದೇ ಅದರ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ನಡೆಸಿದ್ದೇವೆ. ಈ ದತ್ತಾಂಶಗಳ ಆಧಾರದಲ್ಲಿ ಈಗಿನ ಮೀಸಲಾತಿ ನೀತಿಯನ್ನು ಪರಿಷ್ಕರಿಸಿ ಅದರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಜಾತಿ ಗಣತಿಯ ಜೊತೆಯಲ್ಲಿ ಈ ಪ್ರಕ್ರಿಯೆಯನ್ನು ಕೂಡಾ ಕೇಂದ್ರ ಸರ್ಕಾರ ಪೂರ್ಣಗೊಳಿಸಲಿದೆ ಎಂದು ನಂಬಿದ್ದೇನೆ ಎಂದರು.

ಈ ಸಮೀಕ್ಷೆ ಅತ್ಯಗತ್ಯ

ವೈಜ್ಞಾನಿಕವಾದ ಮೀಸಲಾತಿ ನೀತಿಯನ್ನು ರೂಪಿಸುವುದೇ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂಲ ಉದ್ದೇಶವಾಗಿದೆ. ಪ್ರತಿ ಬಾರಿ ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂಕೋರ್ಟ್ ಇಂತಹದ್ದೊಂದು ಸಮೀಕ್ಷೆ ನಡೆಸುವ ಅಗತ್ಯವನ್ನು ಒತ್ತಿ ಒತ್ತಿ ಹೇಳುತ್ತಾ ಬಂದಿದೆ ಎನ್ನುವುದನ್ನು ಕೇಂದ್ರ ಸರ್ಕಾರ ಗಮನಿಸಬೇಕಾಗುತ್ತದೆ ಎಂದರು.

Caste Census in India Siddaramaiah s Response to Central Government s Decision

ನಾನು ಧರ್ಮಸಿಂಗ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ರಚಿಸಿ ಜಾತಿಯ ಜೊತೆಯಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ತೀರ್ಮಾನ ಕೈಗೊಂಡಿದ್ದೆ. ಕಾರಣಾಂತರಗಳಿಂದ ಅನುಷ್ಠಾನಗೊಳ್ಳದೆ ನೆನೆಗುದಿಗೆ ಬಿದ್ದ ಆ ನಿರ್ಧಾರವನ್ನು ಕಾರ್ಯರೂಪಕ್ಕೆ ತರಲು ಮತ್ತೆ ನಾನು ರಾಜ್ಯದ ಮುಖ್ಯಮಂತ್ರಿ ಆಗಬೇಕಾಯಿತು.

ಸಿಎಂ ಸಿದ್ದರಾಮಯ್ಯ ರಾಹುಲ್‌ ಗಾಂಧಿಯನ್ನು ಅಭಿನಂದಿಸಿದ್ಯಾಕೆ?

ಜಾತಿ ಗಣತಿ ಜೊತೆಯಲ್ಲಿ ಮೀಸಲಾತಿ ಮಿತಿ ಏರಿಕೆಯ ನಿರ್ಧಾರವನ್ನು ಸಂಪೂರ್ಣ ಬೆಂಬಲಿಸಿ ಅದನ್ನು ನಮ್ಮ ಪಕ್ಷದ ರಾಷ್ಟ್ರೀಯ ಕಾರ್ಯಕ್ರಮವನ್ನಾಗಿ ರೂಪಿಸಿ ದೇಶಾದ್ಯಂತ ಪ್ರಚಾರ ಮಾಡುತ್ತಾ ಬಂದ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್‌ ಗಾಂಧಿ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ. ಅವರ ಅವಿರತ ಪ್ರಯತ್ನದ ಒತ್ತಡದಿಂದಾಗಿಯೇ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಜಾತಿ ಗಣತಿ ನಡೆಸುವ ನಿರ್ಧಾರವನ್ನು ಕೈಗೊಂಡಿದ್ದಾರೆ ಎನ್ನುವುದನ್ನು ಅವರು ಒಪ್ಪಿಕೊಳದೇ ಇರಬಹುದು, ಆದರೆ ದೇಶ ಖಂಡಿತಾ ಒಪ್ಪುತ್ತದೆ ಎಂದು ಹೇಳಿದರು.

Caste Census in India Siddaramaiah s Response to Central Government s Decision

ಜಾತಿ ಗಣತಿ ನಡೆಸುವುದರಿಂದ ಜಾತಿ ಸಂಘರ್ಷಗಳು ಹೆಚ್ಚಾಗಿ ಸಮಾಜ ಒಡೆದುಹೋಗುತ್ತದೆ, ಜಾತಿ ಗಣತಿ ಎನ್ನುವುದು ಹಿಂದೂ ಸಮಾಜವನ್ನು ಒಡೆಯುವ ಹುನ್ನಾರ ಎಂದೆಲ್ಲ ವರ್ಷಗಳ ಕಾಲ ಟೀಕಾ ಪ್ರಹಾರ ಮಾಡುತ್ತಾ ಬಂದ ಭಾರತೀಯ ಜನತಾ ಪಕ್ಷ ಮತ್ತು ಅದರ ನೇತೃತ್ವದ ಸರ್ಕಾರಗಳು ಕೊನೆಗೂ ಜಾತಿ ಗಣತಿಯ ಸಾಮಾಜಿಕ ಮಹತ್ವವನ್ನು ಅರ್ಥಮಾಡಿಕೊಂಡಿರುವುದು ಸ್ವಾಗತಾರ್ಹ ಬೆಳವಣಿಗೆ.

ನರೇಂದ್ರ ಮೋದಿ ಅವರು ಕಿವಿ ಹಿಂಡಿ ಬುದ್ಧಿ ಹೇಳಬೇಕು

ಭಾರತದ ಸಾಮಾಜಿಕ ವ್ಯವಸ್ಥೆಯಲ್ಲಿ ಜಾತಿ ಎನ್ನುವುದು ವಾಸ್ತವ. ಜಾತಿ ಇಲ್ಲ ಎನ್ನುವುದು ಆತ್ಮವಂಚನೆ. ಜಾತಿ ಎನ್ನುವ ವಾಸ್ತವವನ್ನು ಒಪ್ಪಿಕೊಳ್ಳುವ ಮೂಲಕವೇ ಅದರ ನಾಶಕ್ಕೆ ಪ್ರಯತ್ನಿಸಬೇಕಾಗಿದೆ. ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸುವ ಮೂಲಕವೇ ಜಾತಿನಾಶ ಸಾಧ್ಯ ಎಂದು ನಾನುಬಲವಾಗಿ ನಂಬಿದವನು.

Take a Poll

ಕರ್ನಾಟಕದಲ್ಲಿ ನಾವು ನಡೆಸಿದ್ದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ಧ ಇದೆ. ಇದನ್ನು ಕರ್ನಾಟಕ ಬಿಜೆಪಿ ರಾಜ್ಯ ಘಟಕ ನಾನಾ ಸಬೂಬುಗಳನ್ನು ಮುಂದೊಡ್ಡಿ ವಿರೋಧಿಸುತ್ತಿದೆ. ಈ ಸಮೀಕ್ಷೆಯನ್ನು ಆಧಾರವಾಗಿಟ್ಟುಕೊಂಡು ಮೀಸಲಾತಿಯನ್ನು ಪರಿಷ್ಕರಿಸಿ ಈಗಿನ ಶೇಕಡಾ 50ರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಈ ಎಲ್ಲ ಪ್ರಯತ್ನಗಳಿಗೆ ಅಡ್ಡಗಾಲು ಹಾಕುತ್ತಿರುವ ಬಿಜೆಪಿಯ ರಾಜ್ಯಘಟಕದ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಿವಿ ಹಿಂಡಿ ಬುದ್ಧಿ ಹೇಳಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ ಎಂದರು.

ನಮ್ಮ ಪಕ್ಷದ ಪಂಚ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಲೇ ಕೊನೆಗೆ ಅದನ್ನು ತಮ್ಮ ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿಕೊಂಡ ರೀತಿಯಲ್ಲಿಯೇ ಇದೀಗ ನಮ್ಮ ಜಾತಿಗಣತಿ ಕಾರ್ಯಕ್ರಮವನ್ನು ಕೂಡಾ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಕೈಗೆತ್ತಿಕೊಂಡಿರುವುದು ಕಾಂಗ್ರೆಸ್ ಪಕ್ಷದ ನೀತಿ ಮತ್ತು ಕಾರ್ಯಕ್ರಮಗಳು ಜನಪರವಾಗಿರುವುದಕ್ಕೆ ಸಾಕ್ಷಿಯಾಗಿದೆ. ಕರ್ನಾಟಕ ಸರ್ಕಾರ ನಡೆಸಿರುವ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಒಂದು ಪರಿಪೂರ್ಣ ಮಾದರಿಯಾಗಿದ್ದು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಯಾವುದೇ ಸಲಹೆ-ಸಹಕಾರ ನೀಡಲು ರಾಜ್ಯ ಸರ್ಕಾರ ಸಿದ್ಧ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಜನ ಗಣತಿ ಜೊತೆಗೆ ಜಾತಿ ಗಣತಿ: ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಕಾಂಗ್ರೆಸ್‌ ಸಚಿವರು ಹೇಳಿದ್ದೇನು?

ಜನ ಗಣತಿ ಜೊತೆಗೆ ಜಾತಿ ಗಣತಿ ಮಾಡಬೇಕು ಎನ್ನುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಬಹುತೇಕ ಎಲ್ಲಾ ಕಾಂಗ್ರೆಸ್‌ ನಾಯಕರು ಸ್ವಾಗತಿಸಿದ್ದಾರೆ. ಈ ಬಗ್ಗೆ ಕರ್ನಾಟಕದ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಪ್ರತಿಕ್ರಿಯಿಸಿದ್ದು, ಕೇಂದ್ರದವರು ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಜಾತಿಗಣತಿ ಮಾಡಿ. ಕೇಂದ್ರ ಸರ್ಕಾರ ಜನಸಂಖ್ಯೆ ಹಾಗೂ ಜಾತಿಗಣತಿ ಮಾಡಲಿಕ್ಕೆ ಹೊರಟಿದೆ. ಅದೇ ನಾವು ಜಾತಿಗಣತಿ ‌ಮಾಡುವ ವೇಳೆ ಬಾರಿ ಟೀಕೆ‌ ಮಾಡಿದರು. ಕೇಂದ್ರ ಸರ್ಕಾರ ಈಗ ಜಾತಿಗಣತಿ ಮಾಡುವುದಾಗಿ ಹೇಳಿದೆ‌. ಇವಾಗ ಒಂದು ಹೇಳುವುದು, ಆಗಾವ ಒಂದು ಹೇಳುವುದು. ನಾವು ಮಾಡಿದಾಗ ಒಂದು ಟೀಕೆ ಅವರು ಮಾಡಿದಾಗ ಒಂದು ಟೀಕೆ. ಈ ತರಹದ ಧ್ವಂಧ್ವತೆಯನ್ನು ಜನ ಒಪ್ಪುವುದಿಲ್ಲ ಎಂದು ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+