ಜಾತಿಗಣತಿ ವರದಿ: ವೀರಶೈವ ಮಹಾಸಭಾದ 5 ನಿರ್ಣಯಗಳು
ಬೆಂಗಳೂರು, ಅಕ್ಟೋಬರ್ 23: ಜಾತಿ ಗಣತಿ ವರದಿ ಬಗ್ಗೆ ಕರ್ನಾಟಕದ ರಾಜಕೀಯದಲ್ಲಿ ಚರ್ಚೆಗಳು ನಡೆಯುತ್ತಿವೆ. ಇಂತಹ ಹೊತ್ತಿನಲ್ಲಿಯೇ ಮಹತ್ವದ ಸಭೆಯೊಂದು ನಡೆದಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನೀಡಿರುವ ಕಾಂತರಾಜ್ ವರದಿಯ (ಜಾತಿ ಗಣತಿ) ಸಾಧಕ ಬಾದಕಗಳ ಕುರಿತು ಅಖಿಲ ಭಾರತ ವೀರಶೈವ/ ಲಿಂಗಾಯತ ಮಹಾಸಭಾ (ರಿ.) ವತಿಯಿಂದ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿತ್ತು.
ಅಖಿಲ ಭಾರತ ವೀರಶೈವ/ ಲಿಂಗಾಯತ ಮಹಾಸಭಾ (ರಿ.) ಆಯೋಜಿಸಿದ್ದ ಸಭೆಯಲ್ಲಿ ಪಕ್ಷಾತೀತವಾಗಿ ಎಲ್ಲಾ ಪಕ್ಷಗಳ ನಾಯಕರು ಪಾಲ್ಗೊಂಡಿದ್ದರು. ಸಭೆಯಲ್ಲಿ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ. ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಸಂಸದ ಜಗದೀಶ್ ಶೆಟ್ಟರ್, ಸಚಿವ ಈಶ್ವರ ಖಂಡ್ರೆ ಮುಂತಾದವರು ಪಾಲ್ಗೊಂಡಿದ್ದರು.

ಕಾಂತರಾಜು ವರದಿ ವಿರುದ್ಧ ಅಖಿಲ ಭಾರತ ವೀರಶೈವ ಮಹಾಸಭೆ ನೇತೃತ್ವದಲ್ಲಿ ಪಕ್ಷಾತೀತವಾಗಿ ಒಗ್ಗಟ್ಟು ಪ್ರದರ್ಶಿಸಿದ ಎಲ್ಲಾ ನಾಯಕರುಗಳಿಗೆ ತುಂಬು ಹೃದಯದ ಧನ್ಯವಾದಗಳು. ಯಾವುದೇ ಕಾರಣಕ್ಕೂ ಈ ಒಗ್ಗಟ್ಟು ಮುರಿಯದಿರಲಿ, ರಾಜಕೀಯ ಕುತಂತ್ರಗಳ ಮೀರಿ ಶಕ್ತಿ ಪ್ರದರ್ಶನವಾಗಲಿ ಎಂಬುದು ನಮ್ಮ ಸಮುದಾಯದ ಆಶಯ ಎಂದು ಮಹಾಸಭಾ ಹೇಳಿದೆ. ಸಭೆಯ 5 ನಿರ್ಣಯಗಳ ಮಾಹಿತಿ ನೀಡಿದೆ.
ಅಖಿಲ ಭಾರತ ವೀರಶೈವ/ ಲಿಂಗಾಯತ ಮಹಾಸಭೆಯ ಅಧ್ಯಕ್ಷರಾದ ಡಾ. ಶಾಮನೂರು ಶಿವಶಂಕರಪ್ಪ, ಶಾಸಕರು ಇವರ ನೇತೃತ್ವದಲ್ಲಿ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಹೆಚ್. ಕಾಂತರಾಜು ಅವರ ವರದಿಯ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಲು ನಡೆದ ವೀರಶೈವ-ಲಿಂಗಾಯತ ಸಮಾಜದ ಹಾಲಿ ಹಾಗೂ ಮಾಜಿ ಲೋಕಸಭಾ, ರಾಜ್ಯಸಭಾ, ವಿಧಾನಸಭಾ, ವಿಧಾನಪರಿಷತ್ ಸದಸ್ಯರುಗಳು ಮತ್ತು ಸಮಾಜದ ಮುಖಂಡರುಗಳ ಸಂಯುಕ್ತ ಸಭೆಯ ನಿರ್ಣಯಗಳು ಇಲ್ಲಿವೆ.
ಸಭೆಯ ನಿರ್ಣಯಗಳು
* ಅಖಿಲ ಭಾರತ ವೀರಶೈವ/ ಲಿಂಗಾಯತ ಮಹಾಸಭೆಯು ಬಸವಾದಿ ತತ್ವಗಳನ್ನು ಪ್ರತಿಪಾದಿಸುತ್ತಿದ್ದು, ಸರ್ವರಿಗೂ ಲೇಸನ್ನೆ ಬಯಸುವ ಸಮಸಮಾಜವನ್ನು ನಿರ್ಮಾಣ ಮಾಡಬೇಕೆಂಬ ಶರಣರ ತತ್ವದ ಆಧಾರದ ಮೇಲೆ ನಡೆಯುತ್ತಿರುವ ಸಂಸ್ಥೆಯಾಗಿದೆ. ನಾವು ಜಾತಿಗಣತಿಯ ವಿರೋಧಿಗಳಲ್ಲ ಎಂಬುದನ್ನು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಲು ಇಚ್ಛಿಸುತ್ತೇವೆ. ಆದರೆ ಕಳೆದ 10 ವರ್ಷಗಳ ಹಿಂದೆ ನಡೆಸಲಾದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯು ಹಲವು ವೈರುದ್ಯ ಮತ್ತು ಲೋಪಗಳಿಂದ ಕೂಡಿದ್ದು, ಇದನ್ನು ಸರಿಪಡಿಸುವ ಅಗತ್ಯವಿದೆ. ಹೀಗಾಗಿ ಹೊಸದಾಗಿ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕೆಂದು ಮಹಾಸಭೆ ಆಗ್ರಹಿಸುತ್ತದೆ.
* ರಾಜ್ಯ ಸರ್ಕಾರದ ಪರಿಗಣನೆಯಲ್ಲಿರುವ, ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಶಿಫಾರಸ್ಸುಗಳು, ಶ್ರೀ ಕಾಂತರಾಜು ಅಧ್ಯಕ್ಷತೆಯಲ್ಲಿ ನಡೆಸಿದ ಸಮೀಕ್ಷಾ ವರದಿಯಾಗಿದ್ದು, ಈ ವರದಿಯು ಅವೈಜ್ಞಾನಿಕ ಮತ್ತು ಅಸಂವಿಧಾನಿಕವಾದುದ್ದರಿಂದ ಸ್ವೀಕಾರಕ್ಕೆ ಅರ್ಹವಲ್ಲವೆಂದು ಮಹಾಸಭೆಯು ಸ್ಪಷ್ಟವಾಗಿ ಅಭಿಪ್ರಾಯಿಸುತ್ತದೆ. ಆದ್ದರಿಂದ ಮಾನ್ಯ ಮುಖ್ಯಮಂತ್ರಿಗಳು ಈ ಕುರಿತಾದ ಯಾವುದೇ ಉದ್ದೇಶಿತ ಪ್ರಕ್ರಿಯೆಯನ್ನು ಕೈಬಿಡಬೇಕೆಂದು ಮಹಾಸಭೆಯು ಆಗ್ರಹಿಸುತ್ತದೆ.
* ರಾಜ್ಯ ಹಿಂದುಳಿದ ವರ್ಗಗಳ (ಓಬಿಸಿ) ಪಟ್ಟಿಯಲ್ಲಿ ವಿವಿಧ ವರ್ಗಗಳ ಅಡಿಯಲ್ಲಿ ಹಲವಾರು ಲಿಂಗಾಯತ ಉಪಪಂಗಡಗಳ ಹೆಸರಿನ ಜೊತೆಯಲ್ಲಿ ಲಿಂಗಾಯತ ಪದವಿಲ್ಲದೇ ಕೇವಲ ಉಪಪಂಗಡಗಳ ಹೆಸರನ್ನು ಮಾತ್ರ ನಮೂದಿಸಲಾಗಿರುತ್ತದೆ. ಆದುದರಿಂದ ಉಚ್ಛ ಹಾಗೂ ಸರ್ವೋಚ್ಛ ನ್ಯಾಯಾಲಯ ಸಿವಿಲ್ ಅಪೀಲ್ ನಂ. 7241/2021 ಪ್ರಕರಣದಲ್ಲಿ ನೀಡಿರುವ ತೀರ್ಪನ್ನು ಆಧಾರವಾಗಿರಿಸಿಕೊಂಡು, ಎಲ್ಲಾ ಲಿಂಗಾಯತ ಉಪಪಂಗಡಗಳ ಜೊತೆಯಲ್ಲಿ ಲಿಂಗಾಯತ ಎಂದು ನಮೂದಿಸಿದ ಆಯ್ಕೆಯನ್ನು ಈಗಿರುವ ಪಟ್ಟಿಯಲ್ಲಿ, ಉಪಪಂಗಡಗಳಿರುವ ವರ್ಗಗಳನ್ನು ಬದಲಾಯಿಸದೇ ಸರ್ಕಾರದ ಆದೇಶಕ್ಕೆ ಸೂಕ್ತ ತಿದ್ದುಪಡಿ ತರಲು ರಾಜ್ಯ ಸರ್ಕಾರಕ್ಕೆ ಮಹಾಸಭಾ ಮನವಿ ಮಾಡುತ್ತದೆ.
* ವೀರಶೈವ-ಲಿಂಗಾಯತ ಎಲ್ಲಾ ಉಪಪಂಗಡಗಳನ್ನು ಕೇಂದ್ರ ಹಿಂದುಳಿದ ವರ್ಗಗಳ (ಓಬಿಸಿ) ಪಟ್ಟಿಯಲ್ಲಿ ಸೇರಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮಾನ್ಯ ಮುಖ್ಯಮಂತ್ರಿಗಳು ಶಿಫಾರಸ್ಸು ಮಾಡಬೇಕೆಂದು ಮಹಾಸಭೆಯು ಮನವಿ ಮಾಡುತ್ತದೆ.
* ಸಾಮಾಜಿಕ ಅಸಮಾನತೆಯ ನಿರಾಕರಣೆ ಮತ್ತು ಸಾಮಾಜಿಕ ನ್ಯಾಯ ಕುರಿತಾದ ಸರ್ಕಾರದ ಎಲ್ಲಾ ಸೈದ್ಧಾಂತಿಕ, ಆಡಳಿತಾತ್ಮಕ ಮತ್ತು ಕಾನೂನಾತ್ಮಕ ಪ್ರಕ್ರಿಯೆಗಳಲ್ಲಿ ವೀರಶೈವ ಲಿಂಗಾಯತ ಸಮುದಾಯ ಮುಂಚೂಣಿಯಲ್ಲಿ ನಿಂತು ಬೆಂಬಲಿಸುತ್ತದೆ ಎಂದು ನಮ್ಮ ಸಮುದಾಯದ ಪರವಾಗಿ ಮಹಾಸಭೆಯ ಅಧ್ಯಕ್ಷನಾಗಿ ನಾನು ತುಂಬು ಹೃದಯದಿಂದ ಆಶ್ವಾಸನೆಯನ್ನು ನೀಡುತ್ತೇನೆ.
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications