ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುದುರೆ ಇದ್ದಾಗಲೇ ಏರಲಿಲ್ಲ; ಕುಮಾರಸ್ವಾಮಿ ಟ್ವೀಟ್ ಬಾಣ!

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 08; ಜಾತಿ ಗಣತಿ ವಿಚಾರದ ಬಗ್ಗೆ ಕರ್ನಾಟಕ ರಾಜಕೀಯದಲ್ಲಿ ಬಹಳ ಚರ್ಚೆ ನಡೆಯುತ್ತಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಜಾತಿ ಗಣತಿ ನಡೆದರೂ ಅದರ ವರದಿ ಇನ್ನೂ ಬಿಡುಗಡೆಯಾಗಿಲ್ಲ. ಕಳೆದ ವಾರ ಸಿದ್ದರಾಮಯ್ಯ ಜಾತಿ ಗಣತಿ ಬಗ್ಗೆ ಸರಣಿ ಟ್ವೀಟ್ ಮಾಡಿದ್ದರು.

ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್. ಡಿ. ಕುಮಾರಸ್ವಾಮಿ ಬುಧವಾರ ಸರಣಿ ಟ್ವೀಟ್ ಮಾಡಿದ್ದಾರೆ. ಜಾತಿ ಗಣತಿ ವಿಚಾರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಹಲವಾರು ಪ್ರಶ್ನೆಗಳನ್ನು ಕೇಳಿದ್ದಾರೆ.

ಬಸವರಾಜ ಬೊಮ್ಮಾಯಿ ಸಂಪುಟ ಜಾತಿ ಲೆಕ್ಕಾಚಾರ ಹೀಗಿದೆ ಬಸವರಾಜ ಬೊಮ್ಮಾಯಿ ಸಂಪುಟ ಜಾತಿ ಲೆಕ್ಕಾಚಾರ ಹೀಗಿದೆ

'ಎಲೆಕ್ಷನ್ ಬಂದಾಗ ಯಾವುದೋ ಒಂದು ವಿಷಯದ ಆಯ್ಕೆ ಮಾಡಿಕೊಂಡು ಪ್ರಚಾರ ಗಿಟ್ಟಿಸುವುದು ಸರಿಯಲ್ಲ. ಅಧಿಕಾರ ಇದ್ದಾಗಲೇ ಸಲ್ಲಿಕೆಯಾಗಿದ್ದ ಈ ವರದಿಯನ್ನು ಬಿಡುಗಡೆ ಮಾಡಲು ನಿರ್ಲಕ್ಷ್ಯ ತೋರಿದ್ದು ಯಾಕೆ? ಕುದುರೆ ಇದ್ದಾಗಲೇ ಏರಲಿಲ್ಲ, ಇನ್ನೊಬ್ಬರು ಕುದುರೆ ಮೇಲಿದ್ದಾಗ ಅವರನ್ನು ಕೆಳಕ್ಕೆ ಕೆಡವಲು ಏಕೀ ಕೆಟ್ಟ ಉತ್ಸಾಹ?' ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಬಿಜೆಪಿ ಟ್ವೀಟ್; ಸುಮ್ಮನೆ ರೈಲು ಬಿಟ್ಟರೆ ಸಾಕೆ ಸಿದ್ದರಾಮಯ್ಯ? ಬಿಜೆಪಿ ಟ್ವೀಟ್; ಸುಮ್ಮನೆ ರೈಲು ಬಿಟ್ಟರೆ ಸಾಕೆ ಸಿದ್ದರಾಮಯ್ಯ?

ಕೆಲವು ದಿನಗಳ ಹಿಂದೆ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, 'ಜಾತಿ ಗಣತಿ ವರದಿ ಸೋರಿಕೆಯಾಗಿದ್ದರೂ ಅದರ ಪಾವಿತ್ರ್ಯವೇನು ಕಳೆದುಹೋಗುವುದಿಲ್ಲ. ಸೋರಿಕೆಯಿಂದಾಗಿ ಅಪರಾಧಿಗಳು ಓಡಿಹೋಗಲು ಅದೇನು ಅಪರಾಧದ ತನಿಖಾ ವರದಿಯೇ? ಅದೊಂದು ಸಮೀಕ್ಷಾ ವರದಿ. ಪರಿಶೀಲನೆ ನಡೆಯಬೇಕಾಗಿರುವುದು ಸಮೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ. ಅದರ ಬಗ್ಗೆ ಚರ್ಚೆ ನಡೆಯಲಿ' ಎಂದು ಹೇಳಿದ್ದರು.

 ಜಾತಿ ಆಧಾರಿತ ಜನಗಣತಿಗಾಗಿ ಪ್ರಧಾನಿ ಮೋದಿಯನ್ನು ಒತ್ತಾಯಿಸಿದ ನಿತೀಶ್, ತೇಜಸ್ವಿ ಜಾತಿ ಆಧಾರಿತ ಜನಗಣತಿಗಾಗಿ ಪ್ರಧಾನಿ ಮೋದಿಯನ್ನು ಒತ್ತಾಯಿಸಿದ ನಿತೀಶ್, ತೇಜಸ್ವಿ

ಆ ಕಾಲವೂ ಹತ್ತಿರದಲ್ಲೇ ಇದೆ

ಆ ಕಾಲವೂ ಹತ್ತಿರದಲ್ಲೇ ಇದೆ

'ರಾಜಕಾರಣದಲ್ಲಿ ಕ್ಷಣಕ್ಕೊಂದು ಬಣ್ಣ ಬದಲಿಸಿಕೊಂಡು ಓಡಾಡುವವರ ಬಗ್ಗೆ ನನಗೆ ಗೊತ್ತಿದೆ. ಇವರು ರಾಜಕೀಯ ಊಸರವಳ್ಳಿಗಳು, ಜನರ ಪಾಲಿನ ಮಗ್ಗುಲ ಮುಳ್ಳುಗಳು! ಮುಳ್ಳನ್ನು ಹೇಗೆ ತೆಗೆಯಬೇಕು ಎಂಬುದು ಜನರಿಗೆ ಗೊತ್ತಿದೆ, ಆ ಕಾಲವೂ ಹತ್ತಿರದಲ್ಲೇ ಇದೆ' ಎಂದು ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಜನತೆಗೆ ಚೆನ್ನಾಗಿ ಗೊತ್ತಿದೆ

ಜನತೆಗೆ ಚೆನ್ನಾಗಿ ಗೊತ್ತಿದೆ

'ಇವರು ಅಧಿಕಾರದಲ್ಲಿದ್ದಾಗಲೇ ಕಾಂತರಾಜು ಆಯೋಗದ ವರದಿಯು ಬಂದಿತ್ತು ಆಗಲೇ ಅಂಗೀಕರಿಸಿ ಬಿಡುಗಡೆ ಮಾಡಬಹುದಿತ್ತಲ್ಲ? ಹಾಗೆ ಮಾಡಲಿಲ್ಲ, ಯಾಕೆ? ಅವಕಾಶ ಇದ್ದಾಗ ಮಾಡದೇ ಈಗ ಆಷಾಢಭೂತಿತನ ಏಕೆ? ಜನರಿಗೆ ಅರ್ಥವಾಗದೆಂಬ ಅತಿಬುದ್ಧಿವಂತಿಕೆಯೇ? ಅತಿ ಬುದ್ಧಿವಂತರೆಲ್ಲ ಆಮೇಲೆ ಏನಾದರು ಎಂಬುದು ಕರ್ನಾಟಕದ ಜನತೆಗೆ ಚೆನ್ನಾಗಿ ಗೊತ್ತಿದೆ' ಎಂದು ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಕುರ್ಚಿ ಕೆಳಗೆ ಹಾಕಿಕೊಂಡು ಕೂತಿದ್ದರು

'ಸಹಿ ಇಲ್ಲದ ವರದಿ ಸಲ್ಲಿಸಲಾಗಿದೆ' ಎಂದು ಸಚಿವರು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರೇ ಹೇಳಿದ್ದಾರೆ. ಸಹಿಯೇ ಇಲ್ಲದ ವರದಿ ಅಧಿಕೃತ ಹೇಗಾಗುತ್ತದೆ? ಐದು ವರ್ಷ ಆಡಳಿತ ನಡೆಸಿದವರಿಗೆ, ಸಂವಿಧಾನದ ಬಗ್ಗೆ ಹಾದಿಬೀದಿಯಲ್ಲಿ ನಿಂತು ಪಾಠ ಮಾಡುವವರಿಗೆ ಈ ಮಟ್ಟಿಗೆ ಜ್ಞಾನ ಇಲ್ಲವೇ?
ಎಲ್ಲದರಲ್ಲೂ ಸಿದ್ಧಹಸ್ತರಾದರೆ ಉಪಯೋಗವೇನು? ಸತ್ಯ ಹೇಳುವುದಕ್ಕೂ ಗುಂಡಿಗೆ ಬೇಕು. ಇನ್ನೊಬ್ಬರ ಎದೆಗಾರಿಕೆ ಪ್ರಶ್ನಿಸುವ ಮಹಾನುಭಾವರು, ತಮ್ಮ ಅವಧಿಯಲ್ಲಿ ಈ ವರದಿನ್ನೇಕೆ ಕುರ್ಚಿ ಕೆಳಗೆ ಹಾಕಿಕೊಂಡು ಕೂತಿದ್ದರು ಎಂಬುದಕ್ಕೆ ಉತ್ತರ ನೀಡಲಿ' ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಊಸರವಳ್ಳಿ ಉಸಾಬರಿ

'ಸಹಿ ಇಲ್ಲದ ಕಾಗದ ಪತ್ರಕ್ಕೆ ಬೆಲೆ ಇಲ್ಲ. ಅಪ್ಪ ಅಮ್ಮನಿಲ್ಲದ ಕೂಸು ಅನಾಥ. ಹಾಗಾದರೆ, ಸಹಿ ಇಲ್ಲದ ವರದಿ ಸ್ವೀಕಾರ ಮಾಡಿ, ಆಗ ಸುಮ್ಮನಿದ್ದು, ಈಗ ಹಾಹಾಕಾರ ಮಾಡಿದರೇನು ಪ್ರಯೋಜನ? ಊಸರವಳ್ಳಿ ಉಸಾಬರಿ ಎಂದರೆ ಇದೇ ಇರಬೇಕು' ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ವರದಿ ಯಾರು ವಿರೋಧಿಸಿದ್ದರು

ವರದಿ ಯಾರು ವಿರೋಧಿಸಿದ್ದರು

ಕಳೆದ ವಾರ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, 'ಜಾತಿಗಣತಿ ವರದಿಯನ್ನು ನಮ್ಮ ಸರ್ಕಾರದ ಅವಧಿಯಲ್ಲಿಯೇ ಪೂರ್ಣಗೊಳಿಸಿ ಸ್ವೀಕರಿಸಬೇಕೆಂಬುದು ನನ್ನ ಉದ್ದೇಶವಾಗಿತ್ತು. ಅಂಕಿಅಂಶಗಳ ಮಾಹಿತಿ ಸಂಗ್ರಹವಾಗಿದ್ದರೂ ವಿಶ್ಲೇಷಣೆಯ ಕೆಲಸ ಪೂರ್ಣಗೊಂಡಿರದ ಕಾರಣ ಸಾಧ್ಯವಾಗಿರಲಿಲ್ಲ' ಎಂದು ಹೇಳಿದ್ದರು.

'ಜಾತಿ ಗಣತಿ ವರದಿಯನ್ನು ನಮ್ಮ ಪಕ್ಷದ ನಾಯಕರು ವಿರೋಧಿಸಿದ್ದರು ಎನ್ನುವುದು ಕಪೋಲ ಕಲ್ಪಿತ ಆರೋಪ.
ಯಾರು? ಯಾವಾಗ? ವಿರೋಧಿಸಿದ್ದರು ಎನ್ನುವುದನ್ನು ಬಿಜೆಪಿ ನಾಯಕರು ಬಹಿರಂಗ ಪಡಿಸಬೇಕು' ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದರು.

Recommended Video

ಬಗ್ರಾಮ್ ಏರ್ ಬೇಸ್ ಮೇಲೆ ಕಣ್ಣಿಟ್ಟಿರುವ ಚೀನಾ! | Oneindia Kannada

English summary
Karnataka former chief minister and JD(S) leader H.D. Kumaraswamy tweet on caste census report and he asked several questions to leader of opposition Siddaramaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X