Caste System: ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ ಸಂಗತಿ: ಮಾಜಿ ಸಿಎಂ ಸಿದ್ದರಾಮಯ್ಯ
ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಬೆಂಗಳೂರಿನ ಗಾಂಧಿ ಭವನದಲ್ಲಿ ಇಂದು ಆಯೋಜಿಸಿದ್ದ ಸಮಾರಂಭದಲ್ಲಿ ಶೂದ್ರ ಸೇವಾ ಸಂಘದ ಉದ್ಘಾಟನೆಯನ್ನು ನೆರವೇರಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು.
ಜಾತಿ ವ್ಯವಸ್ಥೆ ಮೂಲಕ ಯಾರನ್ನೂ ಕೀಳಾಗಿ ಕಾಣಬಾರದು. ಚತುವರ್ಣ ವ್ಯವಸ್ಥೆಯನ್ನು ಮನುವಾದಿಗಳು ಈ ದೇಶದಲ್ಲಿ ಉದ್ದೇಶಪೂರ್ವಕಾಗಿ ಸೃಷ್ಟಿ ಮಾಡಿದರು. ಜಾತಿ ವ್ಯವಸ್ಥೆ ಹೋಗಬೇಕಾದರೆ ಸಮಾನತೆಯ ಸಮಾಜ ನಿರ್ಮಾಣ ಆಗಬೇಕು. ಶೂದ್ರ ವರ್ಗ ಅನೇಕ ವರ್ಷಗಳ ಕಾಲ ಅಕ್ಷರ ಸಂಸ್ಕೃತಿ, ಅವಕಾಶಗಳಿಂದ ದೂರ ಇತ್ತು.
ಶೂದ್ರ ವರ್ಗದವರು ಮೇಲ್ವರ್ಗದವರ ಜೊತೆ ಸ್ಪರ್ಧೆ ಮಾಡುವುದು ಅಸಾಧ್ಯ. ಅಕ್ಷರ ವಂಚಿತರಿಗೆ ಅಕ್ಷರ ಕಲಿತವರಿಂದ ಸೋಲಾಗುವುದು ಸಾಮಾನ್ಯ. ನಮ್ಮಲ್ಲಿನ ಭಿನ್ನಾಭಿಪ್ರಾಯಗಳ ಪರಿಣಾಮ ಬ್ರಿಟಿಷರು ನಮ್ಮನ್ನು ಆಳಿದರು. ಹೀಗಾಗಿ ಭಿನ್ನಾಭಿಪ್ರಾಯ ಮರೆತು ಎಲ್ಲ ವರ್ಗಗಳು ಒಂದಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರು ಹೇಳಿದರು.

ಅಸಮಾನತೆ ತೊಲಗಿ ಸಮ ಸಮಾಜ ನಿರ್ಮಾಣ ಆಗಬೇಕು ಎಂಬುದು ಸಂವಿಧಾನದ ಆಶಯ. ಬುದ್ಧ, ಬಸವ, ಅಂಬೇಡ್ಕರ್ ಅವರು ಹೇಳಿದ್ದೂ ಇದನ್ನೇ. ಪಟ್ಟಭದ್ರ ಹಿತಾಸಕ್ತಿಗಳು ನಮ್ಮನ್ನು ಒಂದಾಗಲು ಬಿಡುವುದಿಲ್ಲ. ಜಾತಿ ಹೋಗಬೇಕಾದರೆ ವಿದ್ಯಾವಂತರು ವೈಜ್ಞಾನಿಕವಾಗಿ ಆಲೋಚನೆ ಮಾಡುವುದನ್ನು ಕಲಿಯಬೇಕು. ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಮೌಢ್ಯ ಪ್ರತಿಬಂಧಕ ಕಾಯಿದೆ ಜಾರಿಗೆ ಬಂತು. ಆದರೆ, ಸಮರ್ಪಕವಾಗಿ ಜಾರಿಗೆ ಬಂದಿಲ್ಲ. ಇದಕ್ಕೆ ವಿದ್ಯಾವಂತರೂ ಕಾರಣ. ವಿದ್ಯಾವಂತರಲ್ಲಿ ಬಹುಪಾಲು ಈಗಲೂ ಮೌಢ್ಯ, ಕಂದಾಚಾರಗಳನ್ನ ಪಾಲನೆ ಮಾಡುತ್ತಾರೆ.
ಇಂದಿನ ಪೀಳಿಗೆ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸಿಕೊಳ್ಳದಿದ್ದರೆ ಸಮಾನತೆಯ ಸಮಾಜ ನಿರ್ಮಾಣ ಅಸಾಧ್ಯ. ಜಾತಿ ವ್ಯವಸ್ಥೆಯೂ ಹೋಗದು. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಅಸಮಾನತೆ ನಿವಾರಣೆಗೆ ಸಹಾಯಕ. ವ್ಯವಸ್ಥೆ ಬದಲಾವಣೆಗೆ ಎಲ್ಲರ ಪ್ರಯತ್ನ ಅಗತ್ಯ. ಇದಕ್ಕೆ ಸಮಯವೂ ಬೇಕು. ಸರಿಯಾದ ಮಾರ್ಗದಲ್ಲಿ ಹೋದಾಗ ಪ್ರಯತ್ನಕ್ಕೆ ಯಶ ಸಿಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಪ್ರತಿ ಜಿಲ್ಲೆಯಲ್ಲಿ ಬಡವರಿಗೆ 50 ಸಾವಿರ ಸೈಟ್ ಹಂಚಿಕೆಗೆ ಸಿದ್ಧತೆ: ಡಿ.ಕೆ ಶಿವಕುಮಾರ್
ಶಾಸಕರು ತಮ್ಮ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯ ಹಿಂದಿನ ಪರಿಸ್ಥಿತಿ, ಪ್ರಸ್ತುತ ಪರಿಸ್ಥಿತಿ ಸೇರಿದಂತೆ ಹಲವು ವಿವರಗಳನ್ನು ಪಡೆಯಬೇಕು. ಅಭಿವೃದ್ಧಿ ಕೆಲಸಗಳಲ್ಲಿ ಬೋಗಸ್ ಬಿಲ್, ಕಾಮಗಾರಿಗಳಿಗೆ ಅವಕಾಶ ನೀಡಬಾರದು. ಪ್ರತಿ ಜಿಲ್ಲೆಯಲ್ಲಿ ಕಂದಾಯ ಇಲಾಖೆಯಿಂದ 50 ಸಾವಿರ ಸೈಟ್ ಹಂಚಿಕೆಗೆ ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಸರ್ಕಾರಿ ಜಮೀನುಗಳನ್ನು ಗುರುತಿಸಲಾಗಿದೆ. ಬಡವರಿಗೆ ಸೈಟ್ ಹಂಚುವ ಯೋಜನೆ ಇದಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಕಸ್ತೂರಿ ರಂಗನ್ ವರದಿ - ಪಶ್ಚಿಮ ಘಟ್ಟಗಳ ಬಗ್ಗೆ ಚರ್ಚಿಸಲು ಒಂದು ದಿನದ ವಿಶೇಷ ಅಧಿವೇಶನ: ಡಾ. ಕೆ. ಕಸ್ತೂರಿರಂಗನ್ ವರದಿ ಆಧರಿಸಿ ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಿ ಕೇಂದ್ರ ಸರ್ಕಾರ ಹೊರಡಿಸಿರುವ 7ನೇ ಕರಡು ಅಧಿಸೂಚನೆಗೆ ಸಂಬಂಧಿಸಿದಂತೆ ಚರ್ಚಿಸಿ, ಪಕ್ಷಾತೀತವಾಗಿ ತೀರ್ಮಾನ ಕೈಗೊಳ್ಳಲು ಒಂದು ದಿನದ ವಿಶೇಷ ಅಧಿವೇಶನವನ್ನು ಕರೆಯಲಾಗುವುದು.
ಡಾ. ಕೆ. ಕಸ್ತೂರಿರಂಗನ್ ವರದಿ ಆಧರಿಸಿ ಹೊರಡಿಸಿರುವ 7ನೇ ಕರಡು ಅಧಿಸೂಚನೆಯನ್ನು ಪ್ರಸ್ತುತ ರೂಪದಲ್ಲಿ ಅಂತಿಮಗೊಳಿಸಬಾರದು. ಆರು ರಾಜ್ಯಗಳ 56,000 ಚ.ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸಲು ಕೇಂದ್ರ ಪ್ರಸ್ತಾಪಿಸಿದೆ. ಕರ್ನಾಟಕದ 20,668 ಚ.ಕಿ.ಮೀ. ಪ್ರದೇಶ, 10 ಜಿಲ್ಲೆಗಳ (ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗ, ಉಡುಪಿ) 33 ತಾಲ್ಲೂಕುಗಳು ಹಾಗೂ 1,449 ಗ್ರಾಮಗಳು ESA ವ್ಯಾಪ್ತಿಗೆ ಸೇರುತ್ತವೆ. ಇದರಿಂದ ಕೃಷಿಕರ ಜೀವನೋಪಾಯ ಹಾಗೂ ಭವಿಷ್ಯದ ಅಭಿವೃದ್ಧಿಗೆ ತೊಂದರೆಯಾಗಲಿದೆ.
ಕಸ್ತೂರಿರಂಗನ್ ಸಮಿತಿಯ ಶಿಫಾರಸುಗಳನ್ನು ತಿರಸ್ಕರಿಸಿ, ಕೇಂದ್ರ ಸರ್ಕಾರವು 31 ಜುಲೈ 2024ರ ಕರಡು ಅಧಿಸೂಚನೆಯನ್ನು ಹಿಂಪಡೆಯಬೇಕು ಎಂದು ಕೇಂದ್ರಕ್ಕೆ ಮನವಿ ಮಾಡಲು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಒಮ್ಮತದ ನಿರ್ಧಾರ ಕೈಗೊಂಡಿತ್ತು. ಆದಾಗ್ಯೂ ಕೇಂದ್ರ ಸರ್ಕಾರ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದು, ರಾಜ್ಯ ಸರ್ಕಾರ ಇದನ್ನು ಒಪ್ಪುವುದಿಲ್ಲ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ, ಜನರ ಅಭಿಪ್ರಾಯವನ್ನೂ ಪಡೆಯಲಾಗುವುದು ಎಂದಿದ್ದಾರೆ.


Click it and Unblock the Notifications
