Caucvery dispute: ವಿಧಾನಸೌಧಕ್ಕೆ ಮುತ್ತಿಗೆ ಯತ್ನ- ಕರವೇ ಕಾರ್ಯಕರ್ತರು ಖಾಕಿ ವಶಕ್ಕೆ

ಬೆಂಗಳೂರು ಸೆಪ್ಟೆಂಬರ್ 21: ರಾಜ್ಯದಲ್ಲಿ ಕಾವೇರಿಯ ಕಿಚ್ಚು ಕಾವೇರಿದೆ. ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಬಿಡಬೇಕು ಎನ್ನುವ ಸುಪ್ರೀಂ ಕೋರ್ಟ್ ಆದೇಶದಿಂದಾಗಿ ಕರ್ನಾಟಕದಲ್ಲಿ ರೈತರ ತಾಳ್ಮೆಯ ಕಟ್ಟೆ ಒಡೆದಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ ನೀರು ಬಿಡದಿರಲು ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು (ಟಿ.ಎ. ನಾರಾಯಣಗೌಡ ಬಣ) ವಿಧಾನಸೌದಕ್ಕೆ ಮುತ್ತಿಗೆ ಹಾಕಿದ್ದಾರೆ.

ಈ ವೇಳೆ ಪೊಲೀಸರು ಅವರನ್ನು ತಡೆದು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ಪ್ರತಿಭಟನೆ ತೀವ್ರಗೊಂಡಿದ್ದು, ಬಸ್‌ಗೆ ಅಡ್ಡಲಾಗಿ ಮಲಗಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಯಾವುದೇ ಕಾರಣಕ್ಕೂ ನಮ್ಮ ಹೋರಾಟ ನಿಲ್ಲಿಸಲ್ಲ.

cauvery-dispute

ಕಾನೂನು ಕೈಗೆ ತೆಗೆದುಕೊಂಡರೂ ಪರವಾಗಿಲ್ಲ. ಕಾವೇರಿಗಾಗಿ ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತಿರುತ್ತದೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ಬಿಎಂಟಿಸಿ ಬಸ್‌ನಲ್ಲಿ ತುಂಬಿಕೊಂಡು ಹೋಗಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪು ಏನು?
ಸುಪ್ರೀಂ ಕೋರ್ಟ್‌ನಲ್ಲಿ ಇಂದು ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕಾರ್ನಾಟಕಕ್ಕೆ ಜಯ ಸಿಕ್ಕಿಲ್ಲ. ಬದಲಾಗಿ ತೀರ್ಪು ತಮಿಳುನಾಡು ಪರವಾಗಿದೆ. ಮುಂದಿನ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡಬೇಕೆಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ನೀಡಿದೆ. ಈ ಮೂಲಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA) ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC)ಯ ಆದೇಶವನ್ನು ಉಥಾವತ್ತಾಗಿ ಜಾರಿಗೆ ತರಬೇಕೆಂದು ಸೂಚಿಸಿದೆ.

ನ್ಯಾಯಾಲಯ ಇಂದು ಬೆಳಿಗ್ಗೆ 10.30ಕ್ಕೆ ವಿಚಾರಣೆ ಆರಂಭಿಸಿತು. ತಮಿಳುನಾಡು ಪರ ವಕೀಲರಾದ ಮುಕುಲ್ ರೋಹಟಗಿ ಮತ್ತು ಕರ್ನಾಟಕದ ಪರ ವಕೀಲ ಶ್ಯಾಮ್ ದಿವಾನ್ ತಮ್ಮ ತಮ್ಮ ವಾದವನ್ನು ಮಂಡಿಸಿದರು. ನೀರಿನ ಸಂಕಷ್ಟ ಇದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಆದರೆ ಸಂಕಷ್ಟ ಸೂತ್ರವನ್ನು ಕರ್ನಾಟಕ ಪಾಲಿಸುತ್ತಿಲ್ಲ. ನಾವು ಬಹಳಷ್ಟು ಕಡಿಮೆ ನೀರನ್ನು ಪಡೆಯುತ್ತಿದ್ದೇವೆ ಎಂದು ತಮಿಳುನಾಡು ಪರ ವಕೀಲ ಮುಕುಲ್ ರೋಹಟಗಿ ವಾದ ಮಂಡನೆ ಮಾಡಿದರು.

ಕರ್ನಾಟಕ ಪರ ವಾದ ಮಂಡಿಸಿದ ಶ್ಯಾಮ್ ದಿವಾನ್, ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶವನ್ನು ನಾವು ಪಾಲಿಸಿದ್ದೇವೆ ಎಂದರು. ವಾದ-ವಿವಾದಗಳನ್ನು ಆಲಿಸಿದ ಬಳಿಕ ನ್ಯಾಯಮೂರ್ತಿ ಬಿ.ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ತಮಿಳುನಾಡಿಗೆ ನೀರು ಹರಿಸಲು ಆದೇಶ ಹೊರಡಿಸಿತು. ಇದರಿಂದ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್‌ನಲ್ಲೂ ಹಿನ್ನೆಡೆಯಾಗಿದೆ.

ತಮಿಳುನಾಡಿಗೆ ಕರ್ನಾಟಕ 5000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಯ್ಲುಎಂಎ) ನೀಡಿರುವ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರತಿ 15 ದಿನಗಳಿಗೊಮ್ಮೆ ಸಭೆ ನಡೆಸುವಂತೆ ಸುಪ್ರೀಂ ಕೋರ್ಟ್ ಪ್ರಾಧಿಕಾರಕ್ಕೆ ಸೂಚಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+