ಶಾಂತಿ ಕಾಪಾಡುವಂತೆ ಕರೆ ನೀಡಿದ ಸಿದ್ದರಾಮಯ್ಯ

Posted By:
Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್ 12 : ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆದಿರುವ ಹಲ್ಲೆ ಮತ್ತು ಕರ್ನಾಟಕದ ಅಂಗಡಿ, ಹೊಟೇಲ್‌ಗಳ ಮೇಲೆ ನಡೆಸಿರುವ ದಾಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

ಈ ಕುರಿತು ಸೋಮವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿದ್ದರಾಮಯ್ಯ ಅವರು, 'ಇಂದು ಬೆಳಿಗ್ಗೆ ತಮಿಳುನಾಡಿನಲ್ಲಿ ನಡೆದ ಘಟನೆಗಳ ಬಗ್ಗೆ ತಿಳಿಯುತ್ತಿದ್ದಂತೆ ನಾನು ರಾಜ್ಯದ ಹಿರಿಯ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ್ದೇನೆ' ಎಂದು ಹೇಳಿದ್ದಾರೆ.[ತಮಿಳುನಾಡು-ಕರ್ನಾಟಕ ನಡುವೆ ಬಸ್ ಸಂಚಾರ ಸ್ಥಗಿತ]

Cauvery dispute : Chief Minister calls for peace

'ನಮ್ಮ ಮುಖ್ಯ ಕಾರ್ಯದರ್ಶಿಗಳು, ತಮಿಳುನಾಡಿನ ಮುಖ್ಯ ಕಾರ್ಯದರ್ಶಿಗಳ ಜತೆ ದೆಹಲಿಯಲ್ಲಿ ಮಾತನಾಡಿದ್ದಾರೆ. ಅದೇ ರೀತಿ ನಮ್ಮ ಪೊಲೀಸ್ ಮಹಾನಿರ್ದೇಶಕರು ತಮಿಳುನಾಡಿನ ಪೊಲೀಸ್ ಮಹಾನಿರ್ದೇಶಕರ ಜತೆಯೂ ಚರ್ಚೆ ನಡೆಸಿದ್ದಾರೆ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.[ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ]

'ತಮಿಳುನಾಡಿನಲ್ಲಿರುವ ಕನ್ನಡಿಗರಿಗೆ ರಕ್ಷಣೆ ನೀಡಬೇಕು ಮತ್ತು ಹಲ್ಲೆ-ದೌರ್ಜನ್ಯ ನಡೆಸುತ್ತಿರುವವರ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರಿಗೆ ಪತ್ರ ಬರೆಯುತ್ತೇನೆ. ಎರಡೂ ರಾಜ್ಯಗಳಲ್ಲಿ ಉದ್ಭವವಾಗಿರುವ ಪರಿಸ್ಥಿತಿಯ ಬಗ್ಗೆ ಕೇಂದ್ರ ಗೃಹಸಚಿವರ ಜತೆಯೂ ಮಾತನಾಡುತ್ತೇನೆ' ಎಂದು ಸಿದ್ದರಾಮಯ್ಯ ಹೇಳಿದರು.

'ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಾನೂನು ಕ್ರಮಕೈಗೊಳ್ಳುತ್ತೇವೆ ಮತ್ತು ಕನ್ನಡಿಗರಿಗೆ ಸೂಕ್ತ ರಕ್ಷಣೆ ನೀಡುತ್ತೇವೆ ಎಂದು ಅಲ್ಲಿನ ಪೊಲೀಸ್ ಮಹಾನಿರ್ದೇಶಕರು ತಿಳಿಸಿದ್ದಾರೆ. ಅದೇ ರೀತಿ ರಾಜ್ಯದಲ್ಲಿರುವ ತಮಿಳರಿಗೆ ಸೂಕ್ತಭದ್ರತೆ ನೀಡಲು ಪೊಲೀಸ್ ಮಹಾನಿರ್ದೇಶಕರು ಮತ್ತು ಬೆಂಗಳೂರು ಪೊಲೀಸ್ ಕಮಿಷನರ್‌ಗೆ ಸೂಚಿಸಿದ್ದೇನೆ' ಎಂದು ತಿಳಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Cauvery water dispute continues to raise tensions in both Tamil Nadu and Karnataka. Chief Minister Siddaramaiah called for peace in state.
Please Wait while comments are loading...