ಮತ್ತೆ ಕಾವೇರಿ ನೀರು ಹಂಚಿಕೆ ವಿವಾದ, ಸರ್ವಪಕ್ಷ ಸಭೆ ಕರೆ ಸಿಎಂ

ಬೆಂಗಳೂರು, ಆಗಸ್ಟ್ 25 : ಕಾವೇರಿ ನೀರು ಬಿಡುಗಡೆಗೆ ತಮಿಳುನಾಡು ಸರ್ಕಾರ ತೀವ್ರ ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವಪಕ್ಷ ಸಭೆ ಕರೆದಿದ್ದಾರೆ. 50.52 ಟಿಎಂಸಿ ನೀರು ಬಿಡಲು ಸೂಚನೆ ನೀಡಿ ಎಂದು ತಮಿಳುನಾಡು ಈಗಾಗಲೇ ಸುಪ್ರೀಂಕೋರ್ಟ್ ಮೊರೆ ಹೋಗಿದೆ.

ಆಗಸ್ಟ್ 27ರ ಬೆಳಗ್ಗೆ 11.30ಕ್ಕೆ ವಿಧಾನಸೌಧದಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ. ವಿಧಾನ ಮಂಡಲದ ಉಭಯ ಸದನಗಳ ನಾಯಕರು, ಕೇಂದ್ರ ಸಚಿವರು, ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಗೆ ಬರುವ ಜಿಲ್ಲೆಗಳ ಉಸ್ತುವಾರಿ ಸಚಿವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.[ನಮಗೇ ನೀರಿಲ್ಲ, ಇನ್ನು ತಮಿಳ್ನಾಡಿಗೆ ಎಲ್ಲಿಂದ ಬಿಡೋಣ?]

Cauvery dispute : CM calls all party meeting on August 27

9 ಲಕ್ಷ ಎಕರೆ ಸಾಂಬಾ ಬೆಳೆಗೆ ನೀರು ಬಿಡುವಂತೆ ತಮಿಳುನಾಡು ಸರ್ಕಾರ ಒತ್ತಾಯಿಸುತ್ತಿದೆ. ಆದರೆ, ಕಾವೇರಿ ಜಲಾನಯನ ಪ್ರದೇಶದ ಅಣೆಕಟ್ಟುಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ನೀರು ಸಂಗ್ರಹವಾಗದೆ ಸಂಕಷ್ಟ ಉಂಟಾಗಿದೆ. ಜೊತೆಗೆ ಆ ಭಾಗದ ರೈತರೂ ತೊಂದರೆಗೆ ಒಳಗಾಗಿದ್ದಾರೆ.[ಆಗಸ್ಟ್ 30ರ ತನಕ ಮಾತ್ರ KRS ನಿಂದ ನೀರು ಬಿಡುಗಡೆ]

ಸಿಎಂ ಭೇಟಿಯಾದ ತಮಿಳುನಾಡು ರೈತರು : ಮಾಜಿ ಸಂಸದ ಕೆ.ಪಿ.ರಾಮಲಿಂಗಂ ನೇತೃತ್ವದಲ್ಲಿ ತಮಿಳುನಾಡಿನ ನೀರಾವರಿ ರಕ್ಷಣಾ ಸಮಿತಿ ಪದಾಧಿಕಾರಿಗಳು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಾವೇರಿ ನೀರು ಬಿಡುಗಡೆಗೆ ಮನವಿ ಮಾಡಿದರು.[ಮಂಡ್ಯ : ಕಾವೇರಿ ನೀರಿನ ನಿಗಾ ವಹಿಸಲು ತಂಡ ರಚನೆ]

'ನಮ್ಮ ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಉಂಟಾಗಿರುವ ಪರಿಸ್ಥಿತಿಯನ್ನು ನಿಯೋಗಕ್ಕೆ ಮನವರಿಕೆ ಮಾಡಿಕೊಟ್ಟ ಸಿದ್ದರಾಮಯ್ಯ ಅವರು ನಮಗೂ ಕುಡಿಯುವ ನೀರಿಗೂ ಸಮಸ್ಯೆ ಇದೆ. ಮಳೆಯಾದರೆ ನೀರು ಬಿಡುಗಡೆಗೆ ಸರ್ಕಾರ ಸಿದ್ಧವಿದೆ' ಎಂದು ಹೇಳಿದರು.[65 ಟಿಎಂಸಿಯಲ್ಲಿ 50 ಟಿಎಂಸಿ ಕೊಟ್ಟರೆ ಉಳಿಯುವುದೆಷ್ಟು!?]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+