ನಮ್ಮ ಬಳಿ ನೀರು ಇರದೆ ಇರುವುದು ಸುಪ್ರೀಂ ಕೋರ್ಟ್‌ಗೆ ಗೊತ್ತಿಲ್ವಾ?- ಸಚಿವ ರಾಮಲಿಂಗಾರೆಡ್ಡಿ
ಹುಬ್ಬಳ್ಳಿ ಸೆಪ್ಟೆಂಬರ್ 25: ಕರ್ನಾಟಕ ತಮಿಳುನಾಡು ರಾಜ್ಯಗಳ ನಡುವಿನ ಕಾವೇರಿ ನದಿ ನೀರು ವಿವಾದ ಭುಗಿಲೆದ್ದಿದ್ದು, ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಮಂಗಳವಾರ (ಸೆಪ್ಟೆಂಬರ್ 26) ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿದ್ದು, ಹಲವು ಸಂಘಟನೆಗಳು ಇದಕ್ಕೆ ಬೆಂಬಲ ಸೂಚಿವೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.
ಕಳೆದ ದಿನ ಸುದ್ದಿಗಾರರೊಂದಿಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನೆಲ, ಜಲ ವಿಚಾರದಲ್ಲಿ ಅನ್ಯಾಯ ಅದಾಗ ಬಂದ್ ಮಾಡೋದು ಸಹಜ, ಆಸ್ತಿ-ಪಾಸ್ತಿ ನಷ್ಟವಾಗದಂತೆ ಬಂದ್ ಮಾಡಿ ಎಂದು ಮನವಿ ಮಾಡಿದ್ದಾರೆ. ಜೊತೆಗೆ ಕಾವೇರಿ ವಿಚಾರದಲ್ಲಿ ನಮ್ಮ ತಪ್ಪಿಲ್ಲ, ಮಳೆ ಬರದಿರುವುದು ನಮ್ಮ ತಪ್ಪಾ? ಅದು ಪ್ರಕೃತಿ ವಿಕೋಪ ಎಂದು ಸಮಜಾಯಿಷಿ ನೀಡಿದ್ದಾರೆ.

ಈ ವಿಚಾರವಾಗಿ ಕೇಂದ್ರ ನಾಯಕರನ್ನು ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ, ಈ ವಿಷಯದಲ್ಲಿ ಪ್ರಧಾನ ಮಂತ್ರಿಗಳು ಯಾಕೆ ಮೌನವಹಿಸಿದ್ದಾರೆ? ಸಂಸದರು ಯಾಕೆ ಮಾತಾಡಲ್ಲ? ಎಂದು ಪ್ರಶ್ನೆ ಮಾಡಿದರು. ಕಳೆದ ಬಾರಿ 600 ಟಿಎಂಸಿ ನೀರು ಸಮುದ್ರಕ್ಕೆ ಹರಿದು ಹೋಗಿತ್ತು. ನಮ್ಮ ಬಳಿ ನೀರು ಇರದೆ ಇರುವುದು ಸುಪ್ರೀಂ ಕೋರ್ಟ್‌ಗೆ ಗೊತ್ತಿಲ್ವಾ? ಕಮೀಟಿಗೆ ನೀರು ಇರುವುದು ಗೊತ್ತಿಲ್ವಾ? ಎಂದು ಗುಡುಗಿದರು.
ಇದರಲ್ಲಿ ಕೇಂದ್ರ ಮಧ್ಯಸ್ಥಿಕೆ ವಹಿಸಲು ಬರಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಲರನ್ನೂ ಕರೆದು ಪ್ರಧಾನಿ ತೀರ್ಮಾನ ಮಾಡಬೇಕಿ ಅವರ ಕಡೆ ಅಧಿಕಾರ ಇದೆ ಎಂದು ಹೇಳಿದರು.
ಇನ್ನೂ ಬಿಜೆಪಿ ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ ಮಾದ್ಯಮದವರ ಪ್ರಶ್ನೆಗೆ ರಾಮಲಿಂಗಾರೆಡ್ಡಿ ಅವರು, ಮೈತ್ರಿ ವಿಚಾರ ಅವರಿಗೆ ಬಿಟ್ಟಿದ್ದು, ಲೋಕಸಭೆ ಚುನಾವಣೆಯಲ್ಲಿ ನಮಗೆ 20 ಸ್ಥಾನ ಬರುತ್ತದೆ. ಬಿಜೆಪಿಗೆ ಒಂದು ಅಥವಾ ಎರಡು ಸ್ಥಾನ ಸಿಗಬಹುದು ಎಮದರು. ಮೂರು ಡಿಸಿಎಂ ಆಯ್ಕೆ ಚರ್ಚೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಹಾಗೆ ಮಾತಾಡುವುದೇ ಸರಿ ಅಲ್ಲ, ಅದು ಅನವ್ಯಕ. ಮುಖ್ಯಮಂತ್ರಿ ಇದ್ದಾರೆ, ಉಪ ಮುಖ್ಯಮಂತ್ರಿ ಇದ್ದಾರೆ ಎಂದರು.
ಆದರೆ ಕಾವೇರಿ ನೀರು ತಮಿಳುನಾಡಿಗೆ ಬಿಡಲು ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಆರೋಪಿಸಿರುವ ಬಿಜೆಪಿ ನಾಯಕರು ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ. ಸುಪ್ರೀಂ ಕೋರ್ಟ್ ತಮಿಳುನಾಡಿಗೆ ಐದು ಸಾವಿರ ಕ್ಯೂಸೆಕ್ ನೀರು ಹರಿಸುವ ನಿರ್ಧಾರಕ್ಕೂ ಮುನ್ನ ರಾಜ್ಯ ಸರ್ಕಾರ ಏನು ಮಾಡುತ್ತಿತ್ತು? ಕೋರ್ಟ್ ಆದೇಶಕ್ಕೂ ಮುನ್ನ ರಾಜ್ಯ ಸರ್ಕಾರ ನೀರು ಹರಿಸಿದೆ ಎಂದು ಬಿಜೆಪಿ ರಾಜ್ಯ ನಾಯಕರು ಆರೋಪಿಸಿದ್ದಾರೆ. ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್ ಕೈಕಟ್ಟಿ ಕುಳಿತಿದೆ, ಸುಪ್ರೀಂ ಕೋರ್ಟ್‌ನಲ್ಲಿ ಸರಿಯಾಗಿ ವಾದ ಮಂಡಿಸಿಲ್ಲ ಎಂದು ಆರ್ ಅಶೋಕ್, ಬಸವರಾಜ್ ಬೊಮ್ಮಾಗಿ ಆರೋಪ ಮಾಡಿದ್ದರು.
ಇನ್ನೂ ಇದೇ ವಿಚಾರಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ನದಿ ಆಧಾರಿತ ನೀರು ನಿರ್ವಹಣೆ ಕಾನೂನನ್ನು ಜಾರಿಗೆ ತರಬೇಕು. ಆ ಮೂಲಕ ಕಾವೇರಿ, ಕೃಷ್ಣ, ಮಹದಾಯಿ ಯೋಜನೆಗೆ ಶಾಶ್ವತ ಮುಕ್ತಿ ಸಿಗಬೇಕು. ಈ ವಿಚಾರವಾಗಿ ತರಳಬಾಳು ಶ್ರೀಗಳ ಜೊತೆ ಚರ್ಚಿಸಿದ್ದೇನೆ ಎಂದರು.












Click it and Unblock the Notifications