'ಬಸ್ಸು ಸುಟ್ಟರೆ ಕಾವೇರಿ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ'

ಬೆಂಗಳೂರು, ಸೆಪ್ಟೆಂಬರ್ 06 : 'ಸಾರ್ವಜನಿಕ ಆಸ್ತಿಗಳಿಗೆ ಹಾನಿ ಮಾಡದಂತೆ ಪ್ರತಿಭಟನೆ ನಡೆಸಿ, ಬಸ್ಸುಗಳನ್ನು ಸುಡುವುದರಿಂದ ಯಾವುದೇ ಪರಿಹಾರ ಸಿಗುವುದಿಲ್ಲ' ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಮನವಿ ಮಾಡಿದರು.

ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಸಚಿವ ಪರಮೇಶ್ವರ ಅವರು, 'ಕಾವೇರಿ ನೀರು ಹಂಚಿಕೆ ತೀರ್ಪಿನ ವಿಚಾರದಲ್ಲಿ ಪ್ರತಿಭಟನೆ ನಡೆಸುವ ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು. ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿ ಮಾಡಬಾರದು' ಎಂದು ಕರೆ ನೀಡಿದರು.[ಮಂಡ್ಯದಲ್ಲಿ ಪ್ರತಿಭಟನೆ: ಕಬಿನಿ ಜಲಾಶಯಕ್ಕೆ ಪೊಲೀಸ್ ಭದ್ರತೆ]

Cauvery dispute : Home Minister appeals for peace

ಸಚಿವ ಡಿಕೆಶಿ ಕರೆ : 'ಮಂಡ್ಯ ಜಿಲ್ಲೆಯಲ್ಲಿ ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು. ಸಾರ್ವಜನಿಕ ಆಸ್ತಿಗಳಿಗೆ ಹಾನಿ ಮಾಡಬಾರದು' ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ರೈತರಲ್ಲಿ ಮನವಿ ಮಾಡಿದರು.[ಮಂಡ್ಯ ಬಂದ್ : ಕ್ಷಣ-ಕ್ಷಣದ ಮಾಹಿತಿ]

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕಾನೂನು ತಜ್ಞರ ಸಭೆ ಬಳಿಕ ಮಾತನಾಡಿದ ಅವರು, 'ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಹಲವು ಬಾರಿ ಇಂತಹ ಸಂಕಷ್ಟಗಳು ಎದುರಾಗಿವೆ. ಹಿಂದೆ ಇಂತಹ ಪರಿಸ್ಥಿತಿ ಎದುರಿಸಲಾಗಿದ್ದು, ಈಗಲೂ ಸಮರ್ಥವಾಗಿ ಇದನ್ನು ಎದುರಿಸಲಾಗುತ್ತದೆ' ಎಂದರು.[ಕನ್ನಡಿಗರಿಗೇ ಕಾವೇರಿ 'ನೀರು ಕುಡಿಸಿದ' ರಾಜಕಾರಣಿಗಳು]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+