ಸುಪ್ರೀಂಗೆ ರಾಜ್ಯದ ಸ್ಥಿತಿ ಮನವರಿಕೆ, ತಮಿಳುನಾಡಿಗೆ ನೀರು ಬಿಡಲ್ಲ

Written By:
Subscribe to Oneindia Kannada

ಬೆಂಗಳೂರು, ಆಗಸ್ಟ್ 27: ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲ ಪಕ್ಷಗಳು ಬದ್ಧ. ಕೇಂದ್ರಕ್ಕೆ ವಾಸ್ತವಿಕ ಸ್ಥಿತಿ ಮನವರಿಕೆ ಮಾಡಿಕೊಡುವುದು, ಸುಪ್ರೀಂ ಕೋರ್ಟ್ ನಲ್ಲಿ ಸಮರ್ಥ ವಾದ ಮಂಡನೆ ಮಾಡುವುದು ಸೇರಿದಂತೆ ಹಲವಾರು ತೀರ್ಮಾನಕ್ಕೆ ಸರ್ವ ಪಕ್ಷ ಸಭೆ ಸಾಕ್ಷಿಯಾಗಿದೆ.

ಶನಿವಾರ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ತಮಿಳುನಾಡಿಗೆ ನೀರು ಬಿಡದಂತೆ ಒಗ್ಗಟ್ಟಿನ ನಿರ್ಧಾರ ಕೈಗೊಳ್ಳಲಾಗಿದೆ. ಇದಕ್ಕೆ ವಿಪಕ್ಷಗಳು ಕೂಡಾ ಬೆಂಬಲ ನೀಡಿದ್ದು, ರಾಜ್ಯದ ಪರಿಸ್ಥಿತಿ ಬಗ್ಗೆ ಸುಪ್ರೀಂ ಕೋರ್ಟ್ ಗೆ ಮನವರಿಕೆ ಮಾಟಡಿಕೊಡಲಾಗುವುದು ಎಂದು ತಿಳಿಸಿದರು.[65 ಟಿಎಂಸಿಯಲ್ಲಿ 50 ಟಿಎಂಸಿ ಕೊಟ್ಟರೆ ಉಳಿಯುವುದೆಷ್ಟು!?]

bengaluru

ಕಾವೇರಿ ಕಟಣಿವೆಯ 4 ಡ್ಯಾಂಗಳು ತುಂಬಿಲ್ಲ. ತಮಿಳುನಾಡಿಗೆ 4 ಟಿಎಂಸಿ ನೀರು ಬಿಡಲು ನಾರಿಮನ್ ಸೂಚಿಸಿದ್ದಾರೆಂಬ ವರದಿ ಸುಳ್ಳು. ಹವಾಮಾನ ವರದಿ ಆಧರಿಸಿ ತಮಿಳುನಾಡು ಸುಪ್ರೀಂಕೋರ್ಟ್ ಗೆ ಅರ್ಜಿ ಹಾಕಿದೆ ಎಂದು ಸಿದ್ದರಾಮಯ್ಯ ಹೇಳಿದರು

bengaluru

ರಾಜ್ಯ ಸರ್ಕಾರ ಜನರ ಹಿತಕ್ಕಾಗಿ ಯಾವ ತೀರ್ಮಾನ ತೆಗೆದುಕೊಂಡರೂ ಬದ್ಧ ಎಂದು ಸಭೆಯಲ್ಲಿ ಪಾಲ್ಗೊಂಡ ಕೇಂದ್ರ ರಸಗೊಬ್ಬರ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ. [ನಮಗೇ ನೀರಿಲ್ಲ, ಇನ್ನು ತಮಿಳ್ನಾಡಿಗೆ ಎಲ್ಲಿಂದ ಬಿಡೋಣ?]

50.52 ಟಿಎಂಸಿ ನೀರನ್ನು ಕರ್ನಾಟಕ ಬಿಡಬೇಕು ಎಂದು ಆಗ್ರಹಿಸಿ ತಮಿಳುನಾಡು ಸುಪ್ರೀಂಕೋರ್ಟ್ ಮೊರೆ ಹೋಗಿರುವ ಹಿನ್ನೆಲೆಯಲ್ಲಿ ಮುಂದಿನ ತೀರ್ಮಾನ ತೆಗೆದುಕೊಳ್ಳಲು ಸರ್ವ ಪಕ್ಷ ನಡೆಯಿತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
After Tamil Nadu government filed an interlocutory application seeking release of 50.52 TMC of Cauvery water from Karnataka. Chief Minister Siddaramaiah led the all-party meeting on August 27, 2016.
Please Wait while comments are loading...