ಕಾಂಗ್ರೆಸ್‌ ಕರ್ನಾಟಕಕ್ಕೆ ಮಾಡುತ್ತಿರುವ ದ್ರೋಹದ ಪಟ್ಟಿ ನೋಡಿ!

ಬೆಂಗಳೂರು, ಸೆಪ್ಟೆಂಬರ್ 22; ಕರ್ನಾಟಕದ ಕಾಂಗ್ರೆಸ್ ಸರ್ಕಾರ 100 ದಿನದಲ್ಲಿ 4 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ, ನಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಹೇಳುತ್ತಿದೆ. ಆದರೆ ಪ್ರತಿಪಕ್ಷ ಬಿಜೆಪಿ ಹೇಳುವ ಪ್ರಕಾರ ಕಾಂಗ್ರೆಸ್ ಇಂದು ಕರ್ನಾಟಕಕ್ಕೆ ಮಹಾ ದ್ರೋಹವೆಸಗುತ್ತಿದೆ.

ಕಾವೇರಿ ನದಿ ನೀರಿನ ವಿವಾದದಲ್ಲಿ ಕರ್ನಾಟಕ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಒಂದು ಕಡೆ ಬರಗಾಲ ಮತ್ತೊಂದು ಕಡೆ ಸುಪ್ರೀಂಕೋರ್ಟ್‌ ಆದೇಶ ಪಾಲನೆ ಅನಿವಾರ್ಯವಾಗಿದೆ. ಕಾನೂನು ಹೋರಾಟ ಮಾಡುತ್ತೇವೆ ಎಂದು ಸರ್ಕಾರ ಹೇಳುತ್ತಲೇ ಇದೆ.

Cauvery Dispute Karnataka BJP Tweet Against Siddaramaiah Lead Congress Government

ಶುಕ್ರವಾರ ಕರ್ನಾಟಕ ಬಿಜೆಪಿ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕೆ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಕರ್ನಾಟಕಕ್ಕೆ ಎಸಗುತ್ತಿರುವ ಮಹಾ ದ್ರೋಹದ ಪಟ್ಟಿಯನ್ನು ನೀಡಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿದೆ.

ಬಿಜೆಪಿ ಟ್ವೀಟ್‌

ಬಿಜೆಪಿ ತನ್ನ ಟ್ವೀಟ್‌ನಲ್ಲಿ, ಕಾವೇರಿಯನ್ನು ತಮಿಳುನಾಡಿಗೆ ಬಿಟ್ಟು ಕನ್ನಡಿಗರ ಮಾನವನ್ನು ಕಾಂಗ್ರೆಸ್ ಸರ್ಕಾರ ಹರಾಜು ಹಾಕಿದೆ. ಚುನಾವಣೆಗೂ ಮುನ್ನ ಕನ್ನಡಿಗರ ಆಸ್ಮಿತೆಯನ್ನು ಮುಂದೆ ಇಟ್ಟುಕೊಂಡು ಒಣ ರಾಜಕೀಯ ಮಾಡಿದ್ದ ಕಾಂಗ್ರೆಸ್‌ ಇಂದು ಕರ್ನಾಟಕಕ್ಕೆ ಮಹಾ ದ್ರೋಹವೆಸಗುತ್ತಿದೆ' ಎಂದು ದೂರಿದೆ.

ಆಗ,

* ಸೇವ್ ನಂದಿನಿ ಅಂತ ಸುಳ್ಳು ಸುದ್ದಿ ಸೃಷ್ಟಿಸಿ ಕನ್ನಡಿಗರ ದಾರಿ ತಪ್ಪಿಸಲಾಯಿತು..!

* ಹಿಂದಿ ಹೇರಿಕೆಯೆಂದು ಹುಸಿ ಪುಕಾರು ಹಬ್ಬಿಸಿ ಪ್ರಚಾರಗಿಟ್ಟಿಸಿಕೊಳ್ಳಲಾಯಿತು..!

* ಮೇಕೆದಾಟು ವಿಚಾರ ನ್ಯಾಯಾಲಯದಲ್ಲಿದ್ದರೂ ಪಾದಯಾತ್ರೆಯ ನಾಟಕ ಮಾಡಲಾಯಿತು..!

ಈಗ,

* ಬರಗಾಲ ಬಂದಿದ್ದರೂ ಜಲಾಶಯಗಳು ಒಣಗುತ್ತಿದ್ದರೂ ಸಿದ್ದರಾಮಯ್ಯ ಅವರ ಸರ್ಕಾರ ಕದ್ದು ಮುಚ್ಚಿ ಕಾವೇರಿ ನೀರನ್ನು ಬಿಟ್ಟಿತು..!

* I.N.D.I ಮೈತ್ರಿಕೂಟ ಉಳಿಸಿಕೊಳ್ಳಲು, ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು ಕನ್ನಡಿಗರ ಪರ ಸಮರ್ಥವಾಗಿ ವಾದ ಮಂಡಿಸದೆ ಸೋಲು ಒಪ್ಪಿಕೊಂಡಿತು.

* ಒಮ್ಮೆಯೂ ಸಿದ್ದರಾಮಯ್ಯ ಅವರ ಸರ್ಕಾರ ತಮಿಳುನಾಡಿನೊಂದಿಗೆ ಕೂತು ನೀರಿನ ಅಭಾವ ಕುರಿತು ಅರ್ಥ‌ ಮಾಡಿಸಲಿಲ್ಲ..!

;ಕನ್ನಡಿಗರ ಪೌರುಷ, ಕನ್ನಡಿಗರ ಸಾಹಸ, ಕನ್ನಡಿಗರ ಸ್ವಾಭಿಮಾನ, ಕನ್ನಡದ ಆಸ್ಮಿತೆಯನ್ನು ಕಾಂಗ್ರೆಸ್‌ ಕೇವಲ ರಾಜಕೀಯ ಅಸ್ತ್ರವಾಗಿಸಿಕೊಂಡು ಕಿವಿ ಮೇಲೆ ಹೂವಿಟ್ಟು ಅಣಕಿಸುತ್ತಿದೆ. ಕರ್ನಾಟಕದಲ್ಲಿರುವುದು ಸ್ಟಾಲಿನ್‌ರ ಗುಲಾಮ ಸರ್ಕಾರ..! ಕನ್ನಡ, ಕರ್ನಾಟಕ, ನಾಡ ವಿರೋಧಿ ಕಾಂಗ್ರೆಸ್ಸಿಗೆ ಕನ್ನಡಿಗರು ಧಿಕ್ಕಾರ ಹಾಕುತ್ತಿದ್ದಾರೆ' ಎಂದು ಬಿಜೆಪಿ ಹೇಳಿದೆ.

ಕಾವೇರಿ ವಿಚಾರದಲ್ಲಿ ಬಿಜೆಪಿ ಉಪ ಮುಖ್ಯಮಂತ್ರಿ, ಜಲಸಂಪನ್ಮೂಲ ಖಾತೆ ಸಚಿವ ಡಿ. ಕೆ. ಶಿವಕುಮಾರ್ ವಿರುದ್ಧವೂ ಆರೋಪ ಮಾಡಿತ್ತು. 'ಆಪ್ತ ಸ್ನೇಹಿತ ತಮಿಳುನಾಡಿನ ಸಿಎಂ ಎಂ. ಕೆ. ಸ್ಟಾಲಿನ್‌ರವರ ಮುಲಾಜಿಗೆ ಬಿದ್ದು, ಬೇಕಾಬಿಟ್ಟಿಯಾಗಿ ಕಾವೇರಿಯ ನೀರನ್ನು ತಮಿಳುನಾಡಿಗೆ ಬಿಟ್ಟು, ಕೆಆರ್‌ಎಸ್‌ ಜಲಾಶಯವನ್ನು ಬರಿದು ಮಾಡಿರುವ ಕಾಂಗ್ರೆಸ್ ಸರ್ಕಾರ, ಈಗ ದೆಹಲಿಯಲ್ಲಿ ಭೇಟಿ ಎಂಬ ಬೃಹನ್ನಾಟಕ ಆರಂಭಿಸಿದೆ' ಎಂದು ಟೀಕಿಸಿತ್ತು.

'ಆರಂಭದಲ್ಲಿಯೇ ರಾಜ್ಯದ ವಾಸ್ತವ ಸ್ಥಿತಿಯನ್ನು ತಮಿಳುನಾಡಿನ ಸಿಎಂಗೆ ವಿವರಿಸುವ ಎಲ್ಲಾ ಅವಕಾಶಗಳಿದ್ದರೂ, ಅದಾವುದನ್ನು ಮಾಡದೇ ತಮಿಳುನಾಡಿನ ಸಿಎಂ ಜೊತೆ ಡಿಸಿಎಂ ಡಿ. ಕೆ. ಶಿವಕುಮಾರ್ ಮಾಡಿದ್ದು ಕೇವಲ ರಾಜಕೀಯ' ಎಂದು ಬಿಜೆಪಿ ವಾಗ್ದಾಳಿ ನಡೆಸಿತ್ತು.

'ತಮಿಳುನಾಡಿನ 1.8 ಲಕ್ಷ ಹೆಕ್ಟೇರ್ ಕುರುವೈ ಬೆಳೆಗೆ 32 ಟಿಎಂಸಿ ಮಾತ್ರ ಒದಗಿಸುವುದು ರಾಜ್ಯದ ಜವಾಬ್ದಾರಿ. ತಮಿಳುನಾಡಿನವರು ಈ ಬಾರಿ 7.8 ಲಕ್ಷ ಹೆಕ್ಟೇರ್‌ನಲ್ಲಿ ಕುರುವೈ ಬೆಳೆ ಬೆಳೆದಿದ್ದಾರೆ. ಅದಕ್ಕೆ ನೀರು ಬಿಡುವ ಜವಾಬ್ದಾರಿ ರಾಜ್ಯದ್ದಲ್ಲ ಎಂಬ ಅಂಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಸಮರ್ಥವಾಗಿ ಮಂಡಿಸದೇ, ಸಂಪೂರ್ಣ ಕಾಲಹರಣ ಮಾಡಿದರು' ಎಂದು ಬಿಜೆಪಿ ಆರೋಪ ಮಾಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+