Cauvery dispute; ಸುಪ್ರೀಂನಲ್ಲಿ ಇಂದು ಅರ್ಜಿ ವಿಚಾರಣೆ ಅನುಮಾನ

ಬೆಂಗಳೂರು, ಸೆಪ್ಟೆಂಬರ್ 01; ಕರ್ನಾಟಕದಲ್ಲಿ ಮುಂಗಾರು ಕೊರತೆಯ ನಡುವೆಯೇ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯುಸೆಕ್ ಕಾವೇರಿ ನೀರಿ ಹರಿಸಲಾಗುತ್ತಿದೆ. ತಮಿಳುನಾಡು ಸರ್ಕಾರ ಸಲ್ಲಿಕೆ ಮಾಡಿರುವ ಅರ್ಜಿಯ ವಿಚಾರಣೆ ಶುಕ್ರವಾರ ನಡೆಯುವುದು ಅನುಮಾನವಾಗಿದೆ.

ತಮಿಳುನಾಡು ಸರ್ಕಾರ ಕಾವೇರಿ ನದಿ ನೀರು ಬಿಡುಗಡೆ ಮಾಡಲು ಕರ್ನಾಟಕಕ್ಕೆ ಸೂಚನೆ ಕೊಡಬೇಕು ಎಂದು ಸುಪ್ರೀಂಕೋರ್ಟ್‌ ಮೊರೆ ಹೋಗಿದೆ. ಆಗಸ್ಟ್‌ 25ರಂದು ಅರ್ಜಿ ವಿಚಾರಣೆ ನಡೆಸಿದ್ದ ತ್ರಿ ಸದಸ್ಯ ಪೀಠ ಕೆಲವು ಸೂಚನೆಗಳನ್ನು ನೀಡಿ, ಸೆಪ್ಟೆಂಬರ್ 1ಕ್ಕೆ ವಿಚಾರಣೆ ಮುಂದೂಡಿತ್ತು.

Cauvery Dispute Supreme Court May Not Hear Tamil Nau Petition On September 1

ತಮಿಳುನಾಡು ಸರ್ಕಾರ ಸಲ್ಲಿಕೆ ಮಾಡಿರುವ ಅರ್ಜಿಯ ವಿರುದ್ಧ ಕರ್ನಾಟಕ ಸರ್ಕಾರ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಈ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಬಿ. ಆರ್. ಗವಾಯಿ, ನ್ಯಾಯಮೂರ್ತಿ ಪಿ. ಎಸ್. ನರಸಿಂಹ ಮತ್ತು ನ್ಯಾಯಮೂರ್ತಿ ಬಿ. ಕೆ. ಮಿಶ್ರಾ ಒಳಗೊಂಡ ತ್ರಿ ಸದಸ್ಯಪೀಠದಲ್ಲಿ ನಡೆಯಬೇಕಿದೆ.

ಏಕೆ ವಿಚಾರಣೆ ಇಲ್ಲ?; ಸುಪ್ರೀಂಕೋರ್ಟ್‌ಗೆ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿ ಕುರಿತು ಅರ್ಜಿಯೊಂದು ಸಲ್ಲಿಕೆಯಾಗಿದೆ. ಈ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ನೇತೃತ್ವದ ಪಂಚ ನ್ಯಾಯಮೂರ್ತಿಗಳ ಪೀಠ ಮಧ್ಯಾಹ್ನ 1 ಗಂಟೆಯ ತನಕ ನಡೆಯಲಿದೆ.

ಈ ಪೀಠದಲ್ಲಿ ಕಾವೇರಿ ಅರ್ಜಿ ವಿಚಾರಣೆ ನಡೆಸುವ ಪೀಠದ ನ್ಯಾಯಮೂರ್ತಿಗಳಾದ ನ್ಯಾಯಮೂರ್ತಿ ಬಿ. ಆರ್. ಗವಾಯಿ ಸಹ ಇದ್ದಾರೆ. ಆದ್ದರಿಂದ ತ್ರಿ ಸದಸ್ಯ ಪೀಠ ಮಧ್ಯಾಹ್ನದ ತನಕ ತಮಿಳುನಾಡು ಅರ್ಜಿ ವಿಚಾರಣೆ ನಡೆಸಲು ಸಾಧ್ಯವಿಲ್ಲ.

ಮಧ್ಯಾಹ್ನದ ಬಳಿಕ ಬಿ. ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಬಿ. ಕೆ. ಮಿಶ್ರಾ ಅವರು ಅರ್ಜಿ ವಿಚಾರಣೆಗೆ ಕೂತರೂ ಸಹ ನ್ಯಾಯಮೂರ್ತಿ ಪಿ. ಎಸ್. ನರಸಿಂಹ ಗೈರು ಇರಲಿದ್ದಾರೆ. ಆದ್ದರಿಂದ ತಮಿಳುನಾಡು, ಕರ್ನಾಟಕ ನಡುವಿನ ಅರ್ಜಿಯ ವಿಚಾರಣೆ ಶುಕ್ರವಾರ ನಡೆಯುವುದು ಅನುಮಾನವಾಗಿದೆ.

ತಮಿಳುನಾಡು ಸರ್ಕಾರ ಸಲ್ಲಿಕೆ ಮಾಡುವ ಅರ್ಜಿ ವಿಚಾರಣೆ ಹಿನ್ನಲೆಯಲ್ಲಿ ಉಪ ಮುಖ್ಯಮಂತ್ರಿ, ಜಲಸಂಪನ್ಮೂಲ ಖಾತೆ ಸಚಿವ ಡಿ. ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಗುರುವಾರ ಅವರು ರಾಜ್ಯದ ವಕೀಲರ ತಂಡದ ಜೊತೆ ಸಭೆಯನ್ನು ನಡೆಸಿ, ರಾಜ್ಯದ ಪರವಾಗಿ ಮಂಡಿಸಲಿರುವ ವಾದದ ಕುರಿತು ಚರ್ಚೆ ನಡೆಸಿದರು.

ಆಗಸ್ಟ್‌ 25ರ ವಿಚಾರಣೆ ಸಮಯದಲ್ಲಿ ಸುಪ್ರೀಂಕೋರ್ಟ್ ಎರಡೂ ರಾಜ್ಯಗಳ ಜಲಾಶಯಗಳ ವಾಸ್ತವ ಸ್ಥಿತಿಯ ಕುರಿತು ವರದಿ ಸಲ್ಲಿಕೆ ಮಾಡುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಸೂಚನೆ ನೀಡಿತ್ತು. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯನ್ನು ಕರೆದು ಪ್ರತಿನಿತ್ಯ ತಮಿಳುನಾಡಿಗೆ 5 ಸಾವಿರ ಕ್ಯುಸೆಕ್ ನೀರು ಹರಿಸಬೇಕು ಎಂದು ಸೂಚನೆ ನೀಡಿತ್ತು.

ಕರ್ನಾಟಕ ರಾಜ್ಯದ ರೈತರ ವಿರೋಧದ ನಡುವೆಯೇ ತಮಿಳುನಾಡಿಗೆ ನೀರು ಹರಿಸುತ್ತಿದೆ. ಇದರಿಂದಾಗಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 100 ಅಡಿಗೆ ಕುಸಿದಿದೆ. ಕಾವೇರಿ ಜಲಾನಯನ ಪ್ರದೇಶಗಳ ಡ್ಯಾಂಗಳ ಕುರಿತು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸುಪ್ರೀಂಕೋರ್ಟ್‌ಗೆ ಗುರುವಾರ ಅಫಿಡೆವಿಟ್ ಸಲ್ಲಿಕೆ ಮಾಡಿದೆ.

ಕೋರ್ಟ್‌ಗೆ ಸಲ್ಲಿಕೆ ಮಾಡಿರುವ ಅಫಿಡೆವಿಟ್‌ನಲ್ಲಿ ಕರ್ನಾಟಕ ಸರ್ಕಾರ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸೂಚನೆಯಂತೆ ತಮಿಳುನಾಡಿಗೆ ನೀರು ಹರಿಸುತ್ತಿದೆ. ಆದರೆ ತಮಿಳುನಾಡು ಸರ್ಕಾರ ನೀರನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುತ್ತಿಲ್ಲ ಎಂದು ಹೇಳಿದೆ. ಇದರಿಂದಾಗಿ ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿರುವ ವಿಚಾರಣೆ ಕುತೂಹಲಕ್ಕೆ ಕಾರಣವಾಗಿದೆ.

ಸುಪ್ರೀಂಕೋರ್ಟ್‌ ಅರ್ಜಿ ವಿಚಾರಣೆ ವೇಳೆ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿ ಎಂದು ಹೇಳಿದರೆ ಕರ್ನಾಟಕಕ್ಕೆ ರಿಲೀಫ್ ಸಿಗಲಿದೆ. ಇಲ್ಲವಾದಲ್ಲಿ ಕೆಆರ್‌ಎಸ್ ಖಾಲಿಯಾಗಿ ಬೆಂಗಳೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಮೈಸೂರು ನಗರಗಳಿಗೆ ಕುಡಿಯುವ ನೀರಿನ ಕೊರತೆ ಉಂಟಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+