'ಸುಪ್ರೀಂಕೋರ್ಟ್‌ ತೀರ್ಪು ಕರ್ನಾಟಕ ಪಾಲಿಗೆ ಶಿಕ್ಷೆ'

Posted By:
Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್ 12 : 'ಪ್ರತಿದಿನ 12 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಿ ಎಂದು ಸುಪ್ರೀಂಕೋರ್ಟ್ ನೀಡಿರುವ ಆದೇಶ ಕರ್ನಾಟಕದ ಪಾಲಿಗೆ ಶಿಕ್ಷೆ' ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಬೇಸರ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಸೋಮವಾರ ಮಧ್ಯಾಹ್ನ ಪತ್ರಿಕಾಗೋಷ್ಠಿ ನಡೆಸಿದ ದೇವೇಗೌಡರು, 'ರಾಜ್ಯದಲ್ಲಿ ನೀರಿನ ಕೊರತೆ ಎದುರಿಸುತ್ತಿರುವ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಕರ್ನಾಟಕಕ್ಕೆ ಶಿಕ್ಷೆ ನೀಡಿದೆ, ಇದು ತೀರ್ಪಲ್ಲ, ನಮ್ಮ ರಾಜ್ಯಕ್ಕೆ ನೀಡಿರುವ ಶಿಕ್ಷೆ' ಎಂದರು.[ಕಾವೇರಿ ವಿವಾದ : ಕರ್ನಾಟಕಕ್ಕೆ ಮತ್ತೆ ಅನ್ಯಾಯ]

deve gowda

'ತಮಿಳುನಾಡಿಗೆ ನೀರು ಹರಿಸುವುದನ್ನು ಜನರು ವಿರೋಧಿಸುತ್ತಾರೆ. ಅದಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ. ಆದರೆ, ಪ್ರತಿಭಟನೆ ನಡೆಸಿರುವುದಕ್ಕೆ ನ್ಯಾಯಮೂರ್ತಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ, ಸುಪ್ರೀಂಕೋರ್ಟ್ ಹಿಂದೆ ಪ್ರತಿಭಟನೆ ಮಾಡುವುದು ಪ್ರಜಾಪ್ರಭುತ್ವದ ಹಕ್ಕು ಎಂದಿದೆ' ಎಂದು ತಿಳಿಸಿದರು.[ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ]

'ಕರ್ನಾಟಕದಲ್ಲಿ ನೀರಿನ ಕೊರತೆ ಇದೆ. ಸುಪ್ರೀಂ ಆದೇಶದಂತೆ ನೀರು ಬಿಡಲಾಗುತ್ತಿದೆ. ಆದ್ದರಿಂದ ಆಕ್ರೋಶಗೊಂಡಿರುವ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ' ಎಂದು ದೇವೇಗೌಡರು ಹೇಳಿದರು.[ತಮಿಳುನಾಡಿಗೆ ನೀರು ಬಿಡಬೇಡಿ: ಜನಾಭಿಪ್ರಾಯ]

ಒಂದು ಹನಿ ನೀರೂ ಬಿಡಬಾರದು : ತೀರ್ಪಿನ ಕುರಿತು ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು, 'ಈ ತೀರ್ಪು ಕನ್ನಡಿಗರನ್ನು ಬಡಿದೆಬ್ಬಿಸುವ ಕೆಲಸಕ್ಕೆ ಕೈ ಹಾಕಿದಂತಿದೆ. ರಾಜ್ಯದ ಜನತೆಯನ್ನು ಕೆರಳಿಸಬೇಡಿ. ಇಂತಹದ್ದೇ ತೀರ್ಪನ್ನು 1991ರಲ್ಲಿ ಕೊಟ್ಟಾಗ ರಾಜ್ಯದಲ್ಲಿ 11 ಜನ ಬಲಿಯಾಗಿದ್ದರು' ಎಂದು ಹೇಳಿದರು.

'ತೀರ್ಪು ಕೊಡುವ ಮೊದಲು ರಾಜ್ಯದ ಪರಿಸ್ಥಿತಿಯನ್ನು ಅವಲೋಕನ ಮಾಡಬೇಕಿತ್ತು. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಒಂದು ಹನಿ ನೀರನ್ನೂ ಬಿಡಬಾರದು. ಈ ತಕ್ಷಣವೇ ನೀರು ಬಿಡುವುದನ್ನು ಸ್ಥಗಿತಗೊಳಿಸಬೇಕು. ರಾಜ್ಯ ಸರ್ಕಾರದ ಜೊತೆ ನಾವಿದ್ದೇವೆ' ಎಂದು ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The Supreme Court modified its order and directed Karnataka to release 12,000 cusecs of Cauvery water to Tamil Nadu until September 20th. Court judgment shocking said, Former PM HD Deve Gowda.
Please Wait while comments are loading...