Live : ಮತ್ತೆ ಸುಪ್ರೀಂ ಆದೇಶ ಪ್ರಶ್ನಿಸಿದ ಕರ್ನಾಟಕ

ಬೆಂಗಳೂರು, ಸೆಪ್ಟೆಂಬರ್ 12 : ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸಿ ಎಂಬ ಆದೇಶವನ್ನು ಪುನರ್ ಪರಿಶೀಲಿಸುವಂತೆ ಮಾಡಿದ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಆದ್ದರಿಂದ, ಇಂದು ನೀಡಿದ ಆದೇಶದಂತೆ ಸೆಪ್ಟೆಂಬರ್ 20ರ ತನಕ ಪ್ರತಿದಿನ 12 ಸಾವಿರ ಕ್ಯೂಸೆಕ್ ನೀರು ಹರಿಸಬೇಕಾಗಿದೆ.

ಆದೇಶ ಮಾರ್ಪಾಡಿಗೆ ಮನವಿ : ಕರ್ನಾಟಕ ಸರ್ಕಾರ ಸೆಪ್ಟೆಂಬರ್ 20ರ ತನಕ ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸಿ ಎಂಬ ಸುಪ್ರೀಂಕೋರ್ಟ್ ಆದೇಶವನ್ನು ಪುನರ್ ಪರಿಶೀಲಿಸುವಂತೆ ಮನವಿ ಮಾಡಿದೆ.[ಶಾಂತಿ ಕಾಪಾಡುವಂತೆ ಕರೆ ನೀಡಿದ ಸಿದ್ದರಾಮಯ್ಯ]

ನ್ಯಾಯಾಲಯ ಇಂದು ನೀಡಿರುವ ಆದೇಶದಿಂದ ಕರ್ನಾಟಕ ಹೆಚ್ಚಿನ ನೀರನ್ನು ಬಿಡುಗಡೆ ಮಾಡಬೇಕಾಗಿದೆ. ಆದ್ದರಿಂದ, ಆದೇಶವನ್ನು ಮಾರ್ಪಾಡು ಮಾಡಿ ಎಂದು ಮನವಿ ಮಾಡಿದೆ.[ಕಾವೇರಿ ವಿವಾದ : ಕರ್ನಾಟಕಕ್ಕೆ ಮತ್ತೆ ಅನ್ಯಾಯ]

ಹಿಂದಿನ ಸುದ್ದಿ : ಸೆಪ್ಟೆಂಬರ್ 20ರ ತನಕ ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸಿ ಎಂದು ಸುಪ್ರೀಂಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದೆ. ಕರ್ನಾಟಕ ಸರ್ಕಾರ ಸಲ್ಲಿಸಿದ್ದ ತುರ್ತು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ನೀಡಿದೆ.

ಸೆಪ್ಟೆಂಬರ್ 5ರಂದು 10 ದಿನಗಳ ಕಾಲ 15 ಸಾವಿರ ಕ್ಯೂಸೆಕ್ ನೀರು ಹರಿಸಿ ಎಂದು ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಈ ಆದೇಶವನ್ನು ಮಾರ್ಪಾಡು ಮಾಡುವಂತೆ ಕರ್ನಾಟಕ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ನ್ಯಾಯಮೂರ್ತಿ ಉದಯ್ ಲಲಿತ್ ಅವರ ಪೀಠ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಿದೆ.[ಕಾವೇರಿ ವಿವಾದ : ಸುಪ್ರೀಂಗೆ ಸಲ್ಲಿಸಿರುವ ಅರ್ಜಿಯಲ್ಲೇನಿದೆ?]

'ಇದು ನ್ಯಾಯಾಲಯದಲ್ಲಿ ತೀರ್ಮಾನವಾಗುವ ವಿಷಯವಲ್ಲ. ನಮಗೆ ನ್ಯಾಯ ಸಿಗುವುದಿಲ್ಲ ಎಂದು ತಿಳಿದಿತ್ತು' ಎಂದು ಕಾವೇರಿ ಹಿತರಕ್ಷಣಾ ವೇದಿಕೆ ಅಧ್ಯಕ್ಷರಾದ ಮಾದೇಗೌಡ ಅವರು ಸುಪ್ರೀಂಕೋರ್ಟ್ ಆದೇಶದ ಬಗ್ಗೆ ಪ್ರತಿಕ್ರಿಯೆ ನೀಡಿದರು.

ಕರ್ನಾಟಕದ ಜಲಾಶಯಗಳಲ್ಲಿ ನೀರಿನ ಕೊರತೆ ಇದೆ ಎಂಬ ಕರ್ನಾಟಕ ಸರ್ಕಾರದ ವಾದವನ್ನು ಪುರಸ್ಕರಿದ ಕೋರ್ಟ್ ಸೆಪ್ಟೆಂಬರ್ 20ರ ತನಕ ಪ್ರತಿದಿನ 12 ಸಾವಿರ ಕ್ಯೂಸೆಕ್ ನೀರು ಹರಿಸಿ ಎಂದು ಆದೇಶ ನೀಡಿದೆ ಮತ್ತು ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 20ಕ್ಕೆ ಮುಂದೂಡಿದೆ.[ಕಾವೇರಿ ವಿವಾದ : ಸೆಪ್ಟೆಂಬರ್ 15ರಂದು ರೈಲ್ವೆ ಬಂದ್]

ಹಿಂದಿನ ಸುದ್ದಿ : ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕು ಎಂಬ ಆದೇಶವನ್ನು ಮಾರ್ಪಾಡು ಮಾಡುವಂತೆ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಕರ್ನಾಟಕ ಸಲ್ಲಿಸಿರುವ ತುರ್ತು ಅರ್ಜಿಯ ವಿಚಾರಣೆ ನಡೆಯುತ್ತಿದೆ.

ಬಕ್ರೀದ್ ರಜಾ ದಿನವಾದ ಸೋಮವಾರ ಕರ್ನಾಟಕ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ನ್ಯಾಯಮೂರ್ತಿ ಉದಯ್ ಲಲಿತ್ ಅವರ ಪೀಠ ನಡೆಸುತ್ತಿದೆ. ಅರ್ಜಿಯ ವಿಚಾರಣೆಯ ಮಾಹಿತಿ ಇಲ್ಲಿದೆ...

supreme court

ಕರ್ನಾಟಕದ ಪರವಾಗಿ ವಾದ ಮಂಡನೆ ಮಾಡಿದ ಹಿರಿಯ ವಕೀಲ ಫಾಲಿ ಎಸ್.ನಾರಿಮನ್ ಅವರು, 'ಕರ್ನಾಟಕದ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ನೀರಿನ ಕೊರತೆ ಜೊತೆಗೆ ಕಾನೂನು ಸುವ್ಯವಸ್ಥೆ ಕಾಪಾಡುವುದು ಸವಾಲಾಗಿದೆ' ಎಂದು ವಾದ ಮಂಡಿಸಿದರು.

'ಕರ್ನಾಟಕದಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ನೀರು ಬಿಡದಂತೆ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ, ಸುಪ್ರೀಂಕೋರ್ಟ್ ಆದೇಶಕ್ಕೆ ತಲೆಬಾಗಿ ನೀರು ಹರಿಸಲಾಗುತ್ತಿದೆ' ಎಂದು ಕೋರ್ಟ್‌ಗೆ ಮಾಹಿತಿ ನೀಡಿದರು.

* ಅರ್ಜಿಯ ವಿಚಾರಣೆ ಸಮಯದಲ್ಲಿ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು, 'ಸುಪ್ರೀಂಕೋರ್ಟ್ ಆದೇಶವನ್ನು ದೇಶದ ಪ್ರತಿಯೊಬ್ಬ ನಾಗರೀಕನೂ ಪಾಲಿಸಬೇಕು. ಆದೇಶ ಜಾರಿಯಲ್ಲಿರುವ ತನಕ ಅದನ್ನು ಪಾಲಿಸಬೇಕು' ಎಂದು ಹೇಳಿದರು.

* ನೀರು ಬಿಡುಗಡೆ ಬಗ್ಗೆ ಜನರು ಆಕ್ರೋಶ ಭರಿತರಾಗಿದ್ದಾರೆ ಎಂದು ನೀವು ಹೇಳುವಂತಿಲ್ಲ. ಇಂತಹ ನಿಲುವುಗಳನ್ನು ಕೋರ್ಟ್ ಒಪ್ಪುವುದಿಲ್ಲ.

* ವಾದ ಮಂಡನೆ ವೇಳೆ ಕರ್ನಾಟಕ ಸೆಪ್ಟೆಂಬರ್ 10ರಂದು ಕರ್ನಾಟಕ ತಮಿಳುನಾಡಿಗೆ 34,529 ಕ್ಯೂಸೆಕ್ ನೀರು ಹರಿಸಿದೆ. ಮುಂದಿನ 6 ದಿನಗಳಲ್ಲಿ 6 ಸಾವಿರ ಕ್ಯೂಸೆಕ್ ನೀರು ಮಾತ್ರ ಹರಿಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+