ಕಾವೇರಿ ವಿವಾದ : 4 ವಾರದಲ್ಲಿ ಅಂತಿಮ ತೀರ್ಪು ಪ್ರಕಟ

Posted By: Gururaj
Subscribe to Oneindia Kannada

ನವದೆಹಲಿ, ಜನವರಿ 09 : ಕಾವೇರಿ ನದಿ ನೀರಿನ ಹಂಚಿಕೆ ವಿವಾದದ ಕುರಿತು ಒಂದು ತಿಂಗಳಿನಲ್ಲಿ ತೀರ್ಪು ಪ್ರಕಟಿಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ. ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವಿನ ಭಾವನಾತ್ಮಕ ವಿಚಾರವಿದಾಗಿದೆ.

ವಿವಾದದ ಕುರಿತು ಎರಡು ದಶಕಗಳಿಂದ ಸಾಕಷ್ಟು ಗೊಂದಲಗಳು ಉಂಟಾಗಿವೆ. ಇನ್ನೂ ನಾಲ್ಕು ವಾರದಲ್ಲಿ ತೀರ್ಪು ಪ್ರಕಟಿಸಲಾಗುತ್ತದೆ ಎಂದು ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿ ಸದಸ್ಯ ಪೀಠ ಹೇಳಿದೆ.

ಕಾವೇರಿ ಜಲ ವಿವಾದ: ತಮಿಳುನಾಡಿಗೆ ಸುಪ್ರಿಂ ಕೋರ್ಟಿನಲ್ಲಿ ಹಿನ್ನಡೆ

2007ರಲ್ಲಿ ಕಾವೇರಿ ನ್ಯಾಯಾಧೀಕರಣ ನೀಡಿದ ತೀರ್ಪನ್ನು ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿವೆ. ಈ ಕುರಿತು ಎರಡು ದಶಕದಿಂದ ಸುಧೀರ್ಘ ವಿಚಾರಣೆ ನಡೆದಿದೆ.

supreme court

ಅರ್ಜಿಯ ವಿಚಾರಣೆ ವೇಳೆ ಸಾಕಷ್ಟು ಗೊಂದಲಗಳು ಉಂಟಾಗಿವೆ. ಇನ್ನು ನಾಲ್ಕು ವಾರದಲ್ಲಿ ತೀರ್ಪು ಪ್ರಕಟಿಸಲಾಗುತ್ತದೆ. ನಂತರ ಕಾವೇರಿ ಜಲಾನಯನ ಪ್ರದೇಶಕ್ಕೆ ಸಂಬಂಧಿಸಿದಂತಹ ವಿಷಯಗಳನ್ನು ಪ್ರಸ್ತಾಪಿಸಬಹುದು ಎಂದು ಕೋರ್ಟ್ ಹೇಳಿದೆ.

2007ರ ಫೆಬ್ರವರಿ 5ರಂದು ಕಾವೇರಿ ನ್ಯಾಯಾಧಿಕರಣ ಅಂತಿಮ ತೀರ್ಪು ಪ್ರಕಟಿಸಿತ್ತು. ತೀರ್ಪಿನ ಅನ್ವಯ ತಮಿಳುನಾಡಿಗೆ 490 ಟಿಎಂಸಿ, ಕರ್ನಾಟಕಕ್ಕೆ 270 ಟಿಎಂಸಿ, ಕೇರಳಕ್ಕೆ 30 ಟಿಎಂಸಿ, ಪುದುಚೇರಿಗೆ 7 ಟಿಎಂಸಿ ನೀರು ಹಂಚಿಕೆ ಮಾಡಲಾಗಿತ್ತು. ಈ ತೀರ್ಪನ್ನು ನ್ಯಾಯಾಧೀಕರಣದಲ್ಲಿ ಪ್ರಶ್ನಿಸಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Enough confusion has been created on Cauvery water dispute over two decades, will deliver verdict within a month said Supreme Court of India. Cauvery water dispute is sentimental issue between Tamil Nadu and Karnataka.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ