ಕಾವೇರಿ ಪ್ರಾಧಿಕಾರ ರಚನೆ ಕುರಿತು ಸಂಸತ್‌ನಲ್ಲಿ ಚರ್ಚೆ
ಬೆಂಗಳೂರು, ಜುಲೈ 18 : ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಬಗ್ಗೆ ಸಂಸತ್‌ನಲ್ಲಿ ವಿಷಯ ಪ್ರಸ್ತಾಪಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ.
ಬುಧವಾರ ಸಂಜೆ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯ ಕರ್ನಾಟಕ ಭವನದಲ್ಲಿ ರಾಜ್ಯದ ಸಂಸದರ ಜೊತೆ ಸಭೆ ನಡೆಸಿದರು. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ, ಕಾವೇರಿ ಸ್ಕೀಮ್ ಬಗ್ಗೆ ಸಂಸತ್‌ನಲ್ಲಿ ಚರ್ಚೆ ನಡೆಸಲು ಸಭೆ ತೀರ್ಮಾನಿಸಿತು.
ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಹಾಸನ ಸಂಸದ ಎಚ್.ಡಿ.ದೇವೇಗೌಡ, ಬಿಜೆಪಿಯ ಸಂಸದರು ಸೇರಿದಂತೆ ಹಲವು ಅಧಿಕಾರಿಗಳು, ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ರಾಜ್ಯದ ವಿವಿಧ ಸಚಿವರು ಸಭೆಯಲ್ಲಿ ಪಾಲ್ಗೊಂಡಿದ್ದರು.

'ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ಎಲ್ಲಾ ಸಂಸದರು ಪಕ್ಷಭೇದ ಮರೆತು ಒಗ್ಗಟ್ಟಾಗಬೇಕು' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಭೆಯಲ್ಲಿ ಕರೆ ನೀಡಿದರು.
ಸಭೆಯ ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್, 'ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಯಬೇಕು. ಈ ಬಗ್ಗೆ ಸಂಸದರ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ' ಎಂದು ಹೇಳಿದರು.
ಕಾವೇರಿ ವಿವಾದದ ಕುರಿತು ಅಂತಿಮ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್ ಕಾವೇರಿ ನದಿ ನೀರು ಹಂಚಿಕೆ ಕುರಿತು ತೀರ್ಮಾನ ಕೈಗೊಳ್ಳಲು ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಸೂಚನೆ ನೀಡಿತ್ತು. ಅದರಂತೆ ಕೇಂದ್ರ ಸರ್ಕಾರ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರವನ್ನು ರಚನೆ ಮಾಡಿದೆ.
ಕಾವೇರಿ ನಿರ್ವಹಣಾ ಮಂಡಳಿ ವಿಚಾರದಿಂದ ರಾಜ್ಯಕ್ಕೆ ಕ್ಲಿಷ್ಠ ಪರಿಸ್ಥಿತಿ ಒದಗಿದೆ. ಈ ಬಗ್ಗೆ ಎಲ್ಲ ಸಂಸದರು ಪಕ್ಷಭೇಧ ಮರೆತು ಒಗ್ಗೂಡಬೇಕಾಗಿದೆ.
— CM of Karnataka (@CMofKarnataka) July 18, 2018
ರಾಜ್ಯದಲ್ಲಿ ಜನಪರ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯವಾದ ಆರ್ಥಿಕ ಸಂಪನ್ಮೂಲದ ಕ್ರೋಢೀಕರಣಕ್ಕಾಗಿ ರಾಜ್ಯದ ಪ್ರಸ್ತಾವನೆಗಳ ಶೀಘ್ರ ವಿಲೇವಾರಿಯ ಗುರುತರವಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. pic.twitter.com/jTFlTf2XFk












Click it and Unblock the Notifications