ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾವೇರಿ ಪ್ರಾಧಿಕಾರ ರಚನೆ ಕುರಿತು ಸಂಸತ್‌ನಲ್ಲಿ ಚರ್ಚೆ

By Gururaj
|
Google Oneindia Kannada News

ಬೆಂಗಳೂರು, ಜುಲೈ 18 : ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಬಗ್ಗೆ ಸಂಸತ್‌ನಲ್ಲಿ ವಿಷಯ ಪ್ರಸ್ತಾಪಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ.

ಬುಧವಾರ ಸಂಜೆ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯ ಕರ್ನಾಟಕ ಭವನದಲ್ಲಿ ರಾಜ್ಯದ ಸಂಸದರ ಜೊತೆ ಸಭೆ ನಡೆಸಿದರು. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ, ಕಾವೇರಿ ಸ್ಕೀಮ್ ಬಗ್ಗೆ ಸಂಸತ್‌ನಲ್ಲಿ ಚರ್ಚೆ ನಡೆಸಲು ಸಭೆ ತೀರ್ಮಾನಿಸಿತು.

ಕೇಂದ್ರ ಸಚಿವರ ಜೊತೆ ದೆಹಲಿ ಭೇಟಿ ಸಂಪೂರ್ಣ ಯಶಸ್ವಿ: ಎಚ್ಡಿಕೆ ದಿಲ್ ಖುಷ್ಕೇಂದ್ರ ಸಚಿವರ ಜೊತೆ ದೆಹಲಿ ಭೇಟಿ ಸಂಪೂರ್ಣ ಯಶಸ್ವಿ: ಎಚ್ಡಿಕೆ ದಿಲ್ ಖುಷ್

ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಹಾಸನ ಸಂಸದ ಎಚ್.ಡಿ.ದೇವೇಗೌಡ, ಬಿಜೆಪಿಯ ಸಂಸದರು ಸೇರಿದಂತೆ ಹಲವು ಅಧಿಕಾರಿಗಳು, ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ರಾಜ್ಯದ ವಿವಿಧ ಸಚಿವರು ಸಭೆಯಲ್ಲಿ ಪಾಲ್ಗೊಂಡಿದ್ದರು.

krs

'ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ಎಲ್ಲಾ ಸಂಸದರು ಪಕ್ಷಭೇದ ಮರೆತು ಒಗ್ಗಟ್ಟಾಗಬೇಕು' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಭೆಯಲ್ಲಿ ಕರೆ ನೀಡಿದರು.

45 ವರ್ಷದ ಬಳಿಕ ದಾಖಲೆ ಬರೆದ ಕಾವೇರಿ ಕಣಿವೆಯ 4 ಜಲಾಶಯಗಳು!45 ವರ್ಷದ ಬಳಿಕ ದಾಖಲೆ ಬರೆದ ಕಾವೇರಿ ಕಣಿವೆಯ 4 ಜಲಾಶಯಗಳು!

ಸಭೆಯ ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್, 'ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಯಬೇಕು. ಈ ಬಗ್ಗೆ ಸಂಸದರ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ' ಎಂದು ಹೇಳಿದರು.

ಕಾವೇರಿ ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿ ಮಸೂದ್ ಹುಸೇನ್ ನೇಮಕಕಾವೇರಿ ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿ ಮಸೂದ್ ಹುಸೇನ್ ನೇಮಕ

ಕಾವೇರಿ ವಿವಾದದ ಕುರಿತು ಅಂತಿಮ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್ ಕಾವೇರಿ ನದಿ ನೀರು ಹಂಚಿಕೆ ಕುರಿತು ತೀರ್ಮಾನ ಕೈಗೊಳ್ಳಲು ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಸೂಚನೆ ನೀಡಿತ್ತು. ಅದರಂತೆ ಕೇಂದ್ರ ಸರ್ಕಾರ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರವನ್ನು ರಚನೆ ಮಾಡಿದೆ.

English summary
After meeting with Karnataka Chief Minister H.D.Kumaraswamy Leader of the Congress in the Lok Sabha Mallikarjun Kharge said that, Cauvery issue will be debate on parliament.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X