ಕರ್ನಾಟಕ, ತಮಿಳುನಾಡಿನಲ್ಲಿ ಶಾಂತಿ ಕಾಪಾಡಲು ಅರ್ಜಿ

By: ವಿಕಾಸ್ ನಂಜಪ್ಪ
Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್ 14 : ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸಬೇಕು ಎಂದು ಅರ್ಜಿ ಸಲ್ಲಿಸಲಾಗಿದೆ. ಕಾವೇರಿ ನದಿ ನೀರು ಹಂಚಿಕೆ ವಿವಾದದ ತೀರ್ಪಿನ ಬಳಿಕ ಎರಡೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗಿದೆ.

ಬುಧವಾರ ಸುಪ್ರೀಂಕೋರ್ಟ್ ಅರ್ಜಿಯ ವಿಚಾರಣೆಗೆ ಒಪ್ಪಿಗೆ ಸೂಚಿಸಿದ್ದು, ಸೆ.15ರಂದು ವಿಚಾರಣೆ ನಡೆಯಲಿದೆ. ಕನ್ಯಾಕುಮಾರಿ ಎಂಬ ಸಾಮಾಜಿಕ ಹೋರಾಟಗಾರರು ಅರ್ಜಿ ಸಲ್ಲಿಸಿದ್ದಾರೆ. ಗುರುವಾರ ಕರ್ನಾಟಕದಲ್ಲಿ ರೈಲು ಬಂದ್‌ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ತುರ್ತಾಗಿ ಅರ್ಜಿ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಲಾಗಿತ್ತು.[ಸೆ.15ರಂದು ಬಂದ್, ರೈಲು ಸಂಚಾರದಲ್ಲಿ ವ್ಯತ್ಯಯ]

supreme court

ತಮಿಳುನಾಡು ಮತ್ತು ಕರ್ನಾಟಕದಲ್ಲಿ ಗಲಭೆಗೆ ಕಾರಣರಾದವರ ವಿರುದ್ಧ ಕ್ರಮಗಳನ್ನು ಕೈಗೊಳ್ಳುವಂತೆ ಎರಡೂ ರಾಜ್ಯಗಳಿಗೆ ಸೂಚನೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಅರ್ಜಿ ವಿಚಾರಣೆ ಗುರುವಾರ ನಡೆಯಲಿದೆ.[ಕರ್ಫ್ಯೂ ಹೇಗಿತ್ತು?, ಜನರನ್ನು ವ್ಯಾಪಾರಿಗಳು ಸುಲಿಗೆ ಮಾಡಿದ್ರಾ?]

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಸೋಮವಾರ ಈ ವಿಚಾರದಲ್ಲಿ ಬೆಂಗಳೂರಿನಲ್ಲಿ ಗಲಭೆ ನಡೆದಿದೆ. ಈ ಗಲಭೆಯಿಂದಾಗಿ ಸುಮಾರು 25 ಸಾವಿರ ಕೋಟಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಮೂರು ದಿನದಿಂದ ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ.

'ಜನರು ಶಾಂತಿ ಕಾಪಾಡಬೇಕು, ಕಾನೂನು ಕೈಗೆ ತೆಗೆದುಕೊಳ್ಳಬಾರದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಸುಪ್ರೀಂಕೋರ್ಟ್ ಸೋಮವಾರ ಸೆಪ್ಟೆಂಬರ್ 20ರ ತನಕ ಪ್ರತಿದಿನ ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು ಆದೇಶ ನೀಡಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
A petition seeking the intervention of the Supreme Court to improve the law and order situation in both Karnataka and Tamil Nadu has been filed.
Please Wait while comments are loading...