ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾವೇರಿ ಮಂಡಳಿ: ರಾಜ್ಯದ ನಿಲುವು ಪ್ರಕಟಕ್ಕೆ ಕ್ಷಣ ಗಣನೆ

By Nayana
|
Google Oneindia Kannada News

ಬೆಂಗಳೂರು, ಜೂನ್‌ 30: ರಾಜ್ಯದ ಪ್ರಬಲ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸಿ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಾಲೋಚನೆ ನಡೆಸಲು ಶನಿವಾರ ಸರ್ವಪಕ್ಷ ಮುಖಂಡರ ಸಭೆ ಕರೆಯಲಾಗಿದೆ.

ಕಾವೇರಿ ನಿರ್ವಹಣಾ ಮಂಡಳಿಗೆ ರಾಜ್ಯದ ಇಬ್ಬರು ಪ್ರತಿನಿಧಿಗಳ ನೇಮಕಕಾವೇರಿ ನಿರ್ವಹಣಾ ಮಂಡಳಿಗೆ ರಾಜ್ಯದ ಇಬ್ಬರು ಪ್ರತಿನಿಧಿಗಳ ನೇಮಕ

ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಸಭೆಯಲ್ಲಿ ವಿಧಾನಮಂಡಲ ಉಭಯ ಸದನಗಳ ನಾಯಕರು, ರಾಜ್ಯದ ಎಲ್ಲ ಸಂಸದರು ಹಾಗೂ ಕಾವೇರಿ ನದಿ ಪಾತ್ರವನ್ನು ಪ್ರತಿನಿಧಿಸುವ ಶಾಸಕರನ್ನು ಆಹ್ವಾನಿಸಲಾಗಿದೆ.

Cauvery row: All party meeting today

ಸಂಸತ್ತಿನಲ್ಲಿ ಚರ್ಚೆಯಾದ ಬಳಿಕವೇ ಮಂಡಳಿ ರಚನೆಯಾಗಬೇಕು ಎಂಬ ರಾಜ್ಯದ ವಾದಕ್ಕೆ ಮನ್ನಣೆ ಸಿಕ್ಕಿಲ್ಲ. ಮಂಡಳಿ ರಚನೆಯಿಂದಾಗಿ ರಾಜ್ಯವು ತನ್ನ ಪಾಲಿಗೆ ನಿಗದಿಯಾಗಿರುವ ನೀರನ್ನು ಬಳಸಿಕೊಳ್ಳುವ ವಿಚಾರದಲ್ಲೂ ಸ್ವತಂತ್ರ ತೀರ್ಮಾನ ಕೈಗೊಳ್ಳಲು ಅವಕಾಶವಿಲ್ಲ.

ಈ ಹಿನ್ನೆಲೆಯಲ್ಲಿ ರಾಜ್ಯದ ಮುಂದಿನ ಹೆಜ್ಜೆ ಏನಿರಬೇಕು ಮತ್ತು ಕಾನೂನು ಹೋರಾಟ ಸೂಕ್ತವೇ ಎಂಬ ಕುರಿತು ಸಭೆ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರನ್ನು ರಾಜ್ಯದ ಪ್ರತಿನಿಧಿಯನ್ನಾಗಿ ನೇಮಕ ಮಾಡಲಾಗಿದೆ.

ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ, ಕಾವೇರಿ ನಿಗಮದ ಎಂಡಿ ಎಚ್‌ಎಲ್‌ ಪ್ರಸನ್ನ ಸದಸ್ಯರಾಗಿ ನೇಮಕಗೊಂಡಿದ್ದಾರೆ. ರಾಜ್ಯಕ್ಕೆ ಮತ್ತಷ್ಟು ತೊಂದರೆಯಾಗಬಾರದು ಎಂದು ನೇಮಕ ಮಾಡಲಾಗಿದೆ

English summary
Chief minister H.D.Kumaraswamy Will head all party meeting to discuss notification issued by the central government by forming Cauvery river board on June 30 at 11.30 am at Vidhana Soudha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X