ಕಾವೇರಿ ವಿವಾದ: ಸಿದ್ದರಾಮಯ್ಯ ಭೇಟಿಗೆ ಸಮಯ ಕೇಳಿದ ತಮಿಳುನಾಡು ಸಿಎಂ
ಬೆಂಗಳೂರು, ಜನವರಿ 30: ಕಾವೇರಿ ನೀರಾವರಿ ಹಂಚಿಕೆ ಸಂಬಂಧ ಮಾತುಕತೆಗೆ ಸಮಯ ನೀಡುವಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಪತ್ರ ಬರೆದಿದ್ದಾರೆ.
ಈ ಮಾಹಿತಿಯನ್ನು ಮುಖ್ಯಮಂತ್ರಿ ಕಚೇರಿಯ ಹಿರಿಯ ಅಧಿಕಾರಿ ಖಚಿತಪಡಿಸಿದ್ದಾರೆ. ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆಗಾಗಿ ಸಮಯ ನೀಡುವಂತೆ ತಮಿಳುನಾಡು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದಿಂದ ತಕ್ಷಣ ಕಾವೇರಿ ನೀರು ಬಿಡುಗಡೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶ ಮಾಡಬೇಕು ಎಂದು ಕಳೆದ ವಾರ ಎಡಪ್ಪಾಡಿ ಪಳನಿಸ್ವಾಮಿ ಆಗ್ರಹಿಸಿದ್ದರು. ಆದರೆ ತಮಿಳುನಾಡು ಮುಖ್ಯಮಂತ್ರಿ ಬೇಡಿಕೆಯನ್ನು ತಿರಸ್ಕರಿಸಿದ್ದ ಕರ್ನಾಟಕ, ಕಾವೇರಿ ಜಲಾನಯನ ಪ್ರದೇಶದ ಅಣೆಕಟ್ಟುಗಳಲ್ಲಿ ನೀರಿಲ್ಲ ಎಂದು ಹೇಳಿತ್ತು.












Click it and Unblock the Notifications