ಕಾವೇರಿ ವಿವಾದ : ಕರ್ನಾಟಕಕ್ಕೆ ಮತ್ತೆ ಅನ್ಯಾಯ

By: ವಿಕಾಸ್ ನಂಜಪ್ಪ
Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್ 12 : ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ಕರ್ನಾಟಕ ಸರ್ಕಾರಕ್ಕೆ ಮತ್ತೊಮ್ಮೆ ಹಿನ್ನಡೆ ಉಂಟಾಗಿದೆ. ಪ್ರತಿದಿನ 12 ಸಾವಿರ ಕ್ಯೂಸೆಕ್ ನೀರು ಹರಿಸಿ ಎಂದು ಆದೇಶ ನೀಡಿರುವ ಕೋರ್ಟ್, ಸೆ.20ಕ್ಕೆ ವಿಚಾರಣೆ ಮುಂದೂಡಿದೆ.

ಸುಪ್ರೀಂಕೋರ್ಟ್ ಸೆಪ್ಟೆಂಬರ್ 5ರಂದು 10 ದಿನಗಳ ಕಾಲ 15 ಸಾವಿರ ಕ್ಯೂಸೆಕ್ ನೀರು ಹರಿಸಿ ಎಂದು ಆದೇಶ ನೀಡಿತ್ತು. ಈ ಆದೇಶವನ್ನು ಮಾರ್ಪಾಡು ಮಾಡುವಂತೆ ಕರ್ನಾಟಕ ತುರ್ತು ಅರ್ಜಿ ಸಲ್ಲಿಸಿತ್ತು. ಸೋಮವಾರ ಈ ಅರ್ಜಿಯ ವಿಚಾರಣೆ ನಡೆಯಿತು.[ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ]

Cauvery : SC directs release of 12,000 cusecs till Sep 20

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ನ್ಯಾಯಮೂರ್ತಿ ಉದಯ್ ಲಲಿತ್ ಅವರ ಪೀಠ ಸೆಪ್ಟೆಂಬರ್ 20ರ ತನಕ ಪ್ರತಿದಿನ 12 ಸಾವಿರ ಕ್ಯೂಸೆಕ್ ನೀರು ಹರಿಸಬೇಕು. ಈ ವೇಳೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಆದೇಶ ನೀಡಿದೆ.['ಕಾನೂನು ತಂತ್ರಗಾರಿಕೆಯಲ್ಲಿ ದಾರಿ ತಪ್ಪಿತು ರಾಜ್ಯ ಸರ್ಕಾರ']

ಕರ್ನಾಟಕದ ರೈತರ ಸಮಸ್ಯೆ, ಕುಡಿಯುವ ನೀರಿನ ಕೊರತೆ ಬಗ್ಗೆ ಸೆಪ್ಟೆಂಬರ್ 20ರಂದು ಮಧ್ಯಾಹ್ನ 2ಗಂಟೆಗೆ ವಿಚಾರಣೆ ನಡೆಸುವುದಾಗಿ ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ. ಕರ್ನಾಟಕದ ಪರವಾಗಿ ವಾದ ಮಂಡನೆ ಮಾಡಿದ ಫಾಲಿ ಎಸ್.ನಾರಿಮನ್ ಅವರು, ತಮಿಳುನಾಡು ಹೇಳುವಂತೆ ನೀರಿನ ಕೊರತೆ ಇಲ್ಲ. ಆದ್ದರಿಂದ ಸೆ.5ರಂದು ಕೋರ್ಟ್ ನೀಡಿರುವ ಆದೇಶವನ್ನು ಮಾರ್ಪಾಡು ಮಾಡುವಂತೆ ಮನವಿ ಮಾಡಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
After moving the Supreme Court at midnight, Karnataka will get to argue the Cauvery waters case today, despite it being a holiday.
Please Wait while comments are loading...