ಅಕ್ಟೋಬರ್ 18ರಂದು ತಲಕಾವೇರಿಯಲ್ಲಿ ತೀರ್ಥೋದ್ಭವ
ಮಡಿಕೇರಿ, ಸೆಪ್ಟೆಂಬರ್, 16 : ಕನ್ನಡ ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಅಕ್ಟೋಬರ್ 18ರಂದು ತೀರ್ಥೋದ್ಭವವಾಗಲಿದೆ. ಮಿಥುನ ಲಗ್ನದಲ್ಲಿ ಈ ಬಾರಿ ತೀರ್ಥೋದ್ಭವವಾಗಲಿದೆ ಎಂದು ದೇವಾಲಯದ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
ಭಗಂಡೇಶ್ವರ-ತಲಕಾವೇರಿ ದೇವಾಲಯದ ಆಡಳಿತಾಧಿಕಾರಿ ಸತೀಶ್ ಕುಮಾರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಅಕ್ಟೋಬರ್ 18ರ ಭಾನುವಾರ ಮುಂಜಾನೆ 12.15ಕ್ಕೆ ಸಲ್ಲುವ ಮಿಥುನ ಲಗ್ನದಲ್ಲಿ ತಲಕಾವೇರಿಯಲ್ಲಿ ತೀರ್ಥೋದ್ಭವ ನೆರವೇರಲಿದೆ ಎಂದು ಹೇಳಿದ್ದಾರೆ. [ತಾಂಬೂಲ ಪ್ರಶ್ನೆ : ಕಾವೇರಿ ಜಲಮೂಲಕ್ಕೆ ಕಾದಿದೆ ಆತಂಕ]

ಈ ಬಾರಿ ಮಧ್ಯರಾತ್ರಿ ತೀರ್ಥೋದ್ಭವವಾಗುವುದರಿಂದ ಸೂಕ್ತ ಭದ್ರತೆ, ಸ್ವಚ್ಛತೆ, ಕುಡಿಯುವ ನೀರು, ವಿದ್ಯುತ್, ಸಾರಿಗೆ ಸಂಪರ್ಕ ಮುಂತಾದ ಸೌಲಭ್ಯಗಳನ್ನು ಕಲ್ಪಿಸಲು ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಲಕ್ಷಾಂತರ ಭಕ್ತರು ತೀರ್ಥೋದ್ಭವದ ದಿನ ತಲಕಾವೇರಿಗೆ ಆಗಮಿಸುತ್ತಾರೆ. [ತಲಕಾವೇರಿಯಲ್ಲಿ ತೀರ್ಥೋದ್ಭವದ ಚಿತ್ರಗಳು]
ಕಾವೇರಿ ಕೊಡಗಿನ ಜನರ ಕುಲದೇವತೆಯಾಗಿದ್ದು, ತೀರ್ಥೋದ್ಭವ ದಿನವನ್ನು ಪ್ರಮುಖ ಹಬ್ಬವಾಗಿ ಆಚರಿಸಲಾಗುತ್ತದೆ. ಕರ್ನಾಟಕ ಮಾತ್ರವಲ್ಲದೇ ತಮಿಳುನಾಡು ರಾಜ್ಯದಿಂದಲೂ ನೂರಾರು ಭಕ್ತರು ತೀರ್ಥೋದ್ಭವ ದಿನ ತಲಕಾವೇರಿಗೆ ಆಗಮಿಸುತ್ತಾರೆ.
ತೀರ್ಥೋದ್ಭವದ ದಿನದಂದು ಕಾವೇರಿ ನೀರನ್ನು ಪ್ರೋಕ್ಷಣೆ ಮಾಡಿಕೊಂಡರೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇದೆ. ಆದ್ದರಿಂದ, ಪ್ರತಿ ವರ್ಷ ನಡೆಯುವ ತೀರ್ಥೋದ್ಭವದಲ್ಲಿ ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸಿ ತೀರ್ಥವನ್ನು ಮನೆಗೆ ತೆಗೆದುಕೊಂಡು ಹೋಗುತ್ತಾರೆ. ಇದರಿಂದ ದೇವಾಲಯದ ಸುತ್ತ-ಮುತ್ತ ಕೊಡ ಮತ್ತು ನೀರಿನ ಕ್ಯಾನ್‌ಗಳ ಮಾರಾಟವೂ ಭರ್ಜರಿಯಾಗಿ ನಡೆಯತ್ತದೆ.
ಧಾರ್ಮಿಕ ಕಾರ್ಯಕ್ರಮಗಳು : ಸೆಪ್ಟೆಂಬರ್ ಅಂತ್ಯದಿಂದಲೇ ತಲಕಾವೇರಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಸೆಪ್ಟೆಂಬರ್ 27ರಂದು ಬೆಳಗ್ಗೆ 8.30ಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವುದು. ಅಕ್ಟೋಬರ್ 5ರಂದು ಆಜ್ಞಾ ಮುಹೂರ್ತ. ಅ. 15ರಂದು ಅಕ್ಷಯ ಪಾತ್ರೆ ಇರಿಸುವುದು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
-
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಏರಿಕೆ: ಇಲ್ಲಿದೆ ಏಪ್ರಿಲ್ 9ರ ದರಪಟ್ಟಿ












Click it and Unblock the Notifications